ಉಡುಪಿ : ಇಲ್ಲಿನ ಐಎಂಎ ಭವನದಲ್ಲಿ ಮುಂಬೈಯ ಕಮಲ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮತ್ತು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗಳ ಆಶ್ರಯದಲ್ಲಿ ವಿಶ್ವ ಅಲ್ಜೈಮರ್ಸ್ ದಿನ - 2026 ರ ಅಂಗವಾಗಿ ಅರಿವು ಮತ್ತು ತಡೆಗಟ್ಟುವಿಕೆ ಎಂಬ ಆಶಯದೊಂದಿಗೆ ವಿಶೇಷ ಜಾಗೃತಿ ಕಾರ್ಯಕ್ರಮ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಸಹಯೋಗದ ನೀಡಿದ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ-ಕರಾವಳಿಯ ಅಧ್ಯಕ್ಷ ಡಾ. ಅಶೋಕ್ ಕುಮಾರ್, ಉಡುಪಿ ಸೀನಿಯರ್ ಸಿಟಿಜನ್ ಅಸೋಸಿಯೇಷನ್ ಅಧ್ಯಕ್ಷ ಮುರಳೀಧರ್ ಹಾಗೂ ಮಣಿಪಾಲ ರೋಟರಿ ಕ್ಲಬ್ ಅಧ್ಯಕ್ಷ ರೊ ನಹುಶ ಶೆಟ್ಟಿ ಮಾತನಾಡಿದರು. ಆಸ್ಪತ್ರೆಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಉಪಸ್ಥಿತರಿದ್ದರು. ಮನಶಾಸ್ತ್ರಜ್ಞ ವಿಶ್ವೇಶ್ವರ ಹೆಗಡೆ ಅವರು ಸ್ವಾಗತಿಸಿದರು. ಆಪ್ತಸಮಾಲೋಚಕ ಅಕ್ಷಯ್ ವಂದಿಸಿದರು, ಆಪ್ತ ಸಮಾಲೋಚಕಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ. ಭಂಡಾರಿ, ಮನೋವೈದ್ಯರಾದ ಡಾ.ವಿರುಪಾಕ್ಷ ದೇವರಮನೆ ಮತ್ತು ಡಾ ದೀಪಕ್ ಮಲ್ಯ, ಆಪ್ತ ಸಮಾಲೋಚಕಿ ಪದ್ಮ ರಾಘವೇಂದ್ರ ಇವರು ಆಲ್ಝೈಮರ್ಸ್ ಕಾಯಿಲೆಯ ಕುರಿತಾಗಿ ಉಪನ್ಯಾಸವನ್ನು ನೀಡಿದರು. ಉಡುಪಿ ಸೀನಿಯರ್ ಸಿಟಿಜನ್ ಅಸೋಸಿಯೇಷನ್ ನ ಸದಸ್ಯರು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.