ಉಡುಪಿ: ನೇತ್ರಜ್ಯೋತಿ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

KannadaprabhaNewsNetwork |  
Published : Jun 25, 2025, 12:34 AM IST
23ನೇತ್ರ | Kannada Prabha

ಸಾರಾಂಶ

ನೇತ್ರಜ್ಯೋತಿ ಕಾಲೇಜು ಹಾಗೂ ಈಶಾ ಫೌಂಡೇಶನ್ ಸಹಯೋಗದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜು ಹಾಗೂ ಈಶಾ ಫೌಂಡೇಶನ್ ಸಹಯೋಗದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್ ಅವರು ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆ. ಇಂದಿನ ಯಾಂತ್ರಿಕೃತ ಯುಗದಲ್ಲಿ ಪ್ರತಿಯೊಬ್ಬರು ಯೋಗವನ್ನು ಮಾಡುದರ ಮೂಲಕ ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು. ಆ ಮೂಲಕ ಸದೃಢ ಆರೋಗ್ಯವನ್ನು ಹೊಂದಬಹುದು ಎಂದರು.ಈಶ ಫೌಂಡೇಶನಿನ ಸಜ್ಜನ್ ಹಾಗೂ ಶ್ರೀನಿವಾಸ್ ಅವರು ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಓಓ ಡಾ. ಗೌರಿ ಪ್ರಭು, ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು.ರಸ್ತೆ ಸುರಕ್ಷತಾ ಸಪ್ತಾಹನೇತ್ರಜ್ಯೋತಿ ಕಾಲೇಜಿನಲ್ಲಿ ಜಿಲ್ಲಾ ಸಂಚಾರಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಜಿಲ್ಲಾ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಹುಸೇನ್ ಸಾಬ್ ರಸ್ತೆ ನಿಯಮಗಳನ್ನು ಪಾಲಿಸುವುದರಿಂದ ಒಂದು ಒಳ್ಳೆಯ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕಾರಣರಾಗಬೇಕು, ಮಾತ್ರವಲ್ಲದೆ ಸೈಬರ್ ಅಪರಾಧಗಳ ಕುರಿತು ವಿವರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್ ಅವರು ವಹಿಸಿದ್ದರು. ಪೊಲೀಸ್ ಸಿಬ್ಬಂದಿಗಳಾದ ರುಕ್ಮ ನಾಯೆರ್, ಸಾವಿತ್ರಿ, ಅಕ್ಷತಾ, ಶ್ರೀನಿವಾಸ್, ಅರುಣ್, ಕಾಲೇಜಿನ ಸಿಒಒ ಡಾ| ಗೌರಿ ಪ್ರಭು, ಎಚ್ಆರ್ ತಾರಾ ಶಶಿಧರ್ ಹಾಗೂ ಸಂಯೋಜಕರಾದ ಸಚಿನ್ ಶೇಟ್ ಹಾಗೂ ನಾಗರಾಜ ಮೆಂಡನ್ ಅವರು ಹಾಜರಿದ್ದರು. ಸಂಯೋಜಕ ಮಾಧವ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀನಿಧಿ ಅವರು ವಂದಿಸಿದರು. ಉಪನ್ಯಾಸಕಿ ಅಶ್ವಿನಿ ಪಾಟೀಲ್ ರವರು ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ