ಶಾಸ್ತ್ರೀಯ ಶಿಸ್ತು, ಜನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಮನ್ನಣೆ: ಪ್ರೊ. ಸಾಮಗ

KannadaprabhaNewsNetwork |  
Published : Nov 21, 2026, 02:45 AM IST
ಪ್ರೊ. ಎಂ.ಎಲ್. ಸಾಮಗ ಅವರನ್ನು ಕನ್ನಡ - ಸಂಸ್ಕೃತಿ ಇಲಾಖೆಯಿಂದ ಗೌರವಿಸಲಾಯಿತು | Kannada Prabha

ಸಾರಾಂಶ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಉಡುಪಿ ಜಿಲ್ಲೆ ವತಿಯಿಂದ ಕುಂಜಿಬೆಟ್ಟು ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಸಭಾಂಗಣದಲ್ಲಿ ಬುಧವಾರ ನಡೆದ ಸಾಧಕರೊಂದಿಗೆ ಸಂವಾದ

ಉಡುಪಿ: ಶಾಸ್ತ್ರೀಯ ಕಲಾವಿದರಿಗೆ ಪಂಚತಾರಾ ಆತಿಥ್ಯ, ಯಕ್ಷಗಾನ - ಜನಪದ ಕಲಾವಿದರಿಗೆ ಕಲ್ಯಾಣ ಮಂಟಪದಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯ ತಾರತಮ್ಯ ಸಲ್ಲದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ. ಎಲ್. ಸಾಮಗ ಹೇಳಿದ್ದಾರೆ.

ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಉಡುಪಿ ಜಿಲ್ಲೆ ವತಿಯಿಂದ ಕುಂಜಿಬೆಟ್ಟು ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಸಭಾಂಗಣದಲ್ಲಿ ಬುಧವಾರ ನಡೆದ ಸಾಧಕರೊಂದಿಗೆ ಸಂವಾದದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ರಾಜ್ಯದ ಸಾಂಸ್ಕೃತಿಕತೆಗೆ ಎಲ್ಲಾ ಭಾಗಗಳು ತನ್ನದೇ ಆದ ಕೊಡುಗೆ ನೀಡಿವೆ, ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನವು ಶಾಸ್ತ್ರೀಯ ಶಿಸ್ತು ಮತ್ತು ಜಾನಪದ ಸ್ವಾತಂತ್ರ‍್ಯದಿಂದ ಜನಮನ್ನಣೆಯನ್ನು ಪಡೆದಿದೆ ಎಂದವರು ಹೇಳಿದರು.

ಯಕ್ಷಗಾನ ಗಂಡುಕಲೆಯಾದರೂ ಗಂಡಸರಿಗೇ ಸೀಮಿತವಾದ ಕಲೆಯಲ್ಲ, ಎಲ್ಲರಿಗೂ ಸೇರಿದ ಕಲೆ ಎಂದ ಅವರು ತಮ್ಮ ಸುದೀರ್ಘ ಅರವತ್ತು ವರ್ಷದ ಯಕ್ಷ ಪಯಣದ ಬಗ್ಗೆ ಮಾತನಾಡುತ್ತಾ, ಕಲಿಕೆ ನಿರಂತರವಾಗಿರುತ್ತದೆ. ವೇಷ ಹಾಕಿ ರಂಗಕ್ಕೆ ಹೋಗಿ ಬಂದರೆ ಎಂತಹ ಅನಾರೋಗ್ಯವೂ ನೋವೂ ಮಾಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ನಿರ್ಮಲಾ ಮಠಪತಿ, ಒಂದು ದೇಶದ ಸಾಂಸ್ಕೃತಿಕ ಶ್ರೀಮಂತಿಕೆಯು ಆ ದೇಶದ ಅಭಿವೃದ್ಧಿಯ ಮಾನದಂಡ. ಕಲೆ ನಮ್ಮ ನಿಜವಾದ ಆಸ್ತಿ ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ರೊ. ಸಾಮಗರವರು ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ ಎಂದರು.

ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಪ್ರಾಂಶುಪಾಲ ವಿದ್ಯಾವಂತ ಆಚಾರ್ಯ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಗೆ ನೀರು ಆಪೋಶನ: ಜಲಕ್ಷಾಮ ಭೀತಿ !
371ಜೆ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಬೆಂಬಲ