ನೀಟ್ ಅಕ್ರಮ ಖಂಡಿಸಿ ಉಡುಪಿ ಯುವ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : May 16, 2026, 01:30 AM IST
ಡಿಸಿ ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು | Kannada Prabha

ಸಾರಾಂಶ

ದೇಶದ ಅತ್ಯಂತ ಉನ್ನತ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಪರೀಕ್ಷೆಯ ಪ್ರಶ್ನಾ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.

ಉಡುಪಿ: ದೇಶದ ಅತ್ಯಂತ ಉನ್ನತ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಪರೀಕ್ಷೆಯ ಪ್ರಶ್ನಾ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿದ ಪ್ರತಿಭಟನಾಕಾರರು, ಸ್ಥಳೀಯ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.ಯುವ ಕಾಂಗ್ರೆಸ್ ಮುಖಂಡರು, ವರ್ಷಗಳ ಕಾಲ ಹಗಲಿರುಳು ಶ್ರಮಪಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಈ ಅಕ್ರಮ ಭಾರೀ ಅನ್ಯಾಯ ಮಾಡಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಸಂಘಟಿತ ಅಕ್ರಮ ಜಾಲ ಮತ್ತು ಪರೀಕ್ಷಾ ಪ್ರಕ್ರಿಯೆಯಲ್ಲಿನ ಅವ್ಯವಸ್ಥೆಗಳು ಬಹಿರಂಗವಾಗುತ್ತಿದ್ದರೂ ಕೇಂದ್ರ ಸರ್ಕಾರ ಮೌನವಾಗಿರುವುದು ಖಂಡನೀಯ. ಇದು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಂದಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಪರೀಕ್ಷಾ ಅಕ್ರಮದ ಕುರಿತು ಉನ್ನತ ಮಟ್ಟದ ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿದ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು, ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ ಕಠಿಣ ಮತ್ತು ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಲಾಯಿತು.

ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೆ ಹಾಗೂ ಈ ಹಗರಣದ ದೋಷಿಗಳಿಗೆ ಶಿಕ್ಷೆಯಾಗುವವರೆಗೆ ಯುವ ಕಾಂಗ್ರೆಸ್ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಲವಾಯಿತು.ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಪ್ರಮುಖರಾದ ಸುರಯ್ಯ ಅಂಜುಮ್, ಅಜಿತ್ ಶೆಟ್ಟಿ, ಸಂದೇಶ್ ಶೆಟ್ಟಿ, ನವೀನ್ ಸಾಲ್ಯಾನ್, ಪ್ರದೀಪ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ನ ಕಿಶನ್‌ ಹೆಗ್ಡೆ ಕೊಳ್ಕೆಬೈಲು, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೆರಾ ಮುಂತಾದವರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು, ಬಂಧಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕಕಲ್ಯಾಣಾರ್ಥ ರುದ್ರಯಾಗ ಅರ್ಥಪೂರ್ಣ: ರಾಮಲಿಂಗ ರೆಡ್ಡಿ
ಹಿಜಾಬ್‌ ನಿಷೇಧ ರದ್ದು ನಿರ್ಧಾರ ಸರಿ: ರಾಮಲಿಂಗಾ ರೆಡ್ಡಿ