ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಸಮಾರೋಪ ಭಾಷಣ ಮಾಡಿ, ವ್ಯಸನಮುಕ್ತ ಜೀವನದ ಜೊತೆಗೆ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದರು.
ಶಿಬಿರದಲ್ಲಿ ರಾಜ್ಯದ ವಿವಿಧೆಡೆಗಳಿಂದ ಬಂದಿರುವ 84 ಮದ್ಯವ್ಯಸನಿಗಳಿಗೆ ಮನೋ ವೈದ್ಯಕೀಯ ಚಿಕಿತ್ಸೆ ಮತ್ತು ಆಪ್ತಸಲಹೆಯೊಂದಿಗೆ ಪ್ರೇರಣೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಸ್, ಯೋಜನಾಧಿಕಾರಿ ಮಾಧವ ಗೌಡ, ಶಿಬಿರಾಧಿಕಾರಿ ದಿವಾಕರ ಪೂಜಾರಿ, ಚಿತ್ತರಂಜನ್, ಆರೋಗ್ಯ ಸಹಾಯಕಿ ಫಿಲೋಮಿನಾ, ರಂಜಿತಾ ಸಹಕರಿಸಿದರು. ಮುಂದಿನ ವಿಶೇಷ ಶಿಬಿರವು ಜೂನ್ 6ರಿಂದ ಪ್ರಾರಂಭವಾಗಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.