ಶವ ಹೂತಿಟ್ಟ ಪ್ರಕರಣ: ಧರ್ಮಸ್ಥಳ ಪರ ವಾದ ಮಂಡನೆ

KannadaprabhaNewsNetwork |  
Published : Oct 04, 2026, 02:45 AM IST
ನ್ಯಾಯಾಲಯಕ್ಕೆ ಆಗಮಿಸಿದ ವಕೀಲರ ತಂಡ | Kannada Prabha

ಸಾರಾಂಶ

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಡಲಾಗಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಪರ ಹಿರಿಯ ವಕೀಲ ಬೆಂಗಳೂರಿನ ಸಿ.ವಿ.ನಾಗೇಶ್ ಅವರು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಡಲಾಗಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಪರ ಹಿರಿಯ ವಕೀಲ ಬೆಂಗಳೂರಿನ ಸಿ.ವಿ.ನಾಗೇಶ್ ಅವರು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶ ರಾಮಲಿಂಗಪ್ಪ ರೆಡ್ಡಿ ಅವರ ಮುಂದೆ ಪ್ರಕರಣದ ವಿಚಾರಣೆ ನಡೆಯಿತು. ಈ ವೇಳೆ ಧರ್ಮಸ್ಥಳದ ಪರ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ಆರೋಪಿ ಚಿನ್ನಯ್ಯ ಹಾಗೂ ಆತನ ಪರ ವಕೀಲರಾದ ಚಂದನ್ ಮತ್ತು ಮಹೇಶ್, ದೂರುದಾರ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲ ವಾಸು ಪೂಜಾರಿ ಹಾಗೂ ಸಿರಾಜುದ್ದೀನ್ ಸೇರಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ ಐಟಿ ಅಧಿಕಾರಿಗಳು ನ್ಯಾಯಾಲಯದಲ್ಲಿ ಹಾಜರಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ನಾನಾ ಕಾನೂನು ಅಂಶಗಳ ಕುರಿತು ವಾದ-ಪ್ರತಿವಾದಗಳು ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ನ. 7ಕ್ಕೆ ನಿಗದಿಪಡಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ತಮ ಭವಿಷ್ಯಕ್ಕೆ ಪ್ರಕೃತಿ ಸಂರಕ್ಷಣೆ ಅಗತ್ಯ: ಬಾಗಡೆ
ಬೆಳೆ ವಿಮೆ ಪರಿಹಾರ ಪರಿಶೀಲಿಸಿ ಪರಿಷ್ಕರಣೆಗೆ ಪ್ರಭು ಒತ್ತಾಯ