ಪಠ್ಯದಲ್ಲಿ ಭಗವದ್ಗೀತೆ ವಿರೋಧಿಸುವವರು ಮೂರ್ಖರು: ವೀಣಾ ಬನ್ನಂಜೆ

KannadaprabhaNewsNetwork |  
Published : Feb 01, 2026, 03:30 AM IST
ವೀಣಾ ಬನ್ನಂಜೆ ಉಪನ್ಯಾಸ ನೀಡುತ್ತಿರುವುದು. | Kannada Prabha

ಸಾರಾಂಶ

ಪ್ರಾಚೀನ ಕಾಲದ ಗುರುಕುಲ ಶಿಕ್ಷಣ ಪದ್ಧತಿಗೂ, ಆಧುನಿಕ ಶಿಕ್ಷಣ ಪದ್ಧತಿಗೂ ಅಜಗಜಾಂತರ ವ್ಯತ್ಯಾಸವಿದೆ. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಬಾರದು ಎಂದು ಹೇಳುವ ಎಲ್ಲವನ್ನೂ ಬಲ್ಲವರೆಂಬ ಸ್ವಯಂಘೋಷಿತ ಬುದ್ಧಿಜೀವಿಗಳು ಮೂರ್ಖರು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕಿ ವೀಣಾ ಬನ್ನಂಜೆ

ಬೆಳ್ತಂಗಡಿ: ಪ್ರಾಚೀನ ಕಾಲದ ಗುರುಕುಲ ಶಿಕ್ಷಣ ಪದ್ಧತಿಗೂ, ಆಧುನಿಕ ಶಿಕ್ಷಣ ಪದ್ಧತಿಗೂ ಅಜಗಜಾಂತರ ವ್ಯತ್ಯಾಸವಿದೆ. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಬಾರದು ಎಂದು ಹೇಳುವ ಎಲ್ಲವನ್ನೂ ಬಲ್ಲವರೆಂಬ ಸ್ವಯಂಘೋಷಿತ ಬುದ್ಧಿಜೀವಿಗಳು ಮೂರ್ಖರು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕಿ ವೀಣಾ ಬನ್ನಂಜೆ ಹೇಳಿದರು.ಶುಕ್ರವಾರ ಉಜಿರೆಯಲ್ಲಿ ಎಸ್‌ಡಿಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿ ಕೀರ್ತಿಶೇಷ ಡಾ. ಬಿ. ಯಶೋವರ್ಮ ಸ್ಮರಣಾರ್ಥ ಆಯೋಜಿಸಿದ ‘ಅರಿವಿನ ದೀವಿಗೆ’ ಕಾರ್‍ಯಕ್ರಮದಲ್ಲಿ ‘ಭಗವದ್ಗೀತೆ ಮತ್ತು ಶಿಕ್ಷಣ’ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಿದರು.ಸ್ಮರಣ ಶಕ್ತಿಗಾಗಿ ಕೇವಲ ಗಿಳಿ ಬಾಯಿಪಾಠ ಬದುಕಿಗೆ ಪ್ರಯೋಜನವಿಲ್ಲ. ಆತ್ಮ, ಜೀವ ಮತ್ತು ಜೀವನಕ್ಕೆ ಸಂಬಂಧಿಸಿದ ಶಿಕ್ಷಣ ಅಗತ್ಯ. ರಾಮಾಯಣ, ಮಹಾಭಾರತ ಹಾಗೂ ಪುರಾಣಗಳ ಬಗ್ಗೆ ಓದದೆ ‘ರೈಲು’ ಬಿಡುವವರ ಕೆಟ್ಟ ಪರಂಪರೆ ಬೆಳೆಯುತ್ತಿದೆ ಎಂದು ವಿಷಾದಿಸಿದರು.ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ವರ್ಮ, ಪೂರನ್‌ ವರ್ಮ ಉಪಸ್ಥಿತರಿದ್ದರು.ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್‍ಯದರ್ಶಿ ಡಾ. ಎಸ್. ಸತೀಶ್ಚಂದ್ರ, ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ. ಡಾ. ಪ್ರದೀಪ್ ನಾವೂರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಡಾ. ಶ್ರೀಧರ ಭಟ್ ಸ್ವಾಗತಿಸಿ, ಕಾರ್‍ಯಕ್ರಮ ನಿರ್ವಹಿಸಿದರು. ಕಾರ್‍ಯಕ್ರಮ ಸಂಯೋಜಕ ಡಾ. ದಿವ ಕೊಕ್ಕಡ ಸಹಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ