ನಡಿಬೆಟ್ಟು ಕಾಂಕ್ರೀಟ್‌ ರಸ್ತೆ ಕಾಮಗಾರಿ ಉದ್ಘಾಟನೆ

KannadaprabhaNewsNetwork |  
Published : Mar 16, 2026, 01:45 AM IST
ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನದ ರಸ್ತೆ ಅಭಿವೃದ್ಧಿ ಮತ್ತು ಕಾಂಕ್ರಿಟೀಕರಣ ಕಾಮಗಾರಿ ಉದ್ಘಾಟನೆ  | Kannada Prabha

ಸಾರಾಂಶ

ಗ್ರಾಮೀಣ ಭಾಗದ ಜನರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದ್ದು, ಸರ್ಕಾರದ ಸವಲತ್ತು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೆ ತಲುಪಿಸುವ ಕಾರ್ಯವಾಗಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಮೂಲ್ಕಿ: ಗ್ರಾಮೀಣ ಭಾಗದ ಜನರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದ್ದು, ಸರ್ಕಾರದ ಸವಲತ್ತು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೆ ತಲುಪಿಸುವ ಕಾರ್ಯವಾಗಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.ಸುಮಾರು 50 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಮೂಲ್ಕಿ ತಾಲೂಕಿನ ಅತಿಕಾರಿಬೆಟ್ಟು ಗ್ರಾಪಂ ವ್ಯಾಪ್ತಿಯ ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನದ ರಸ್ತೆ ಅಭಿವೃದ್ಧಿ ಮತ್ತು ಕಾಂಕ್ರಿಟೀಕರಣ ಕಾಮಗಾರಿಯನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭ ಅರ್ಚಕ ಸುಬ್ರಹ್ಮಣ್ಯ ಭಟ್ ದೇಂದಡ್ಕ, ದೈವಸ್ಥಾನದ ಆಡಳಿತ ಮೊಕ್ತೇಸರ ದೆಪ್ಪುಣಿ ಗುತ್ತು ಸುಧಾಕರ ಶೆಟ್ಟಿ, ಅರ್ಚಕ ಶೇಖರ ಪೂಜಾರಿ, ಜಗದೀಶ್ ಪ್ರಭು ಪನಿಕೆರೆ, ಮೂಲ್ಕಿ ನ.ಪಂ. ಮಾಜಿ ಅಧ್ಯಕ್ಷ ಸತೀಶ್ ಅಂಚನ್, ಸುಭಾಷ್ ಶೆಟ್ಟಿ, ಅತಿಕಾರಿಬೆಟ್ಟು ಗ್ರಾಪಂ ಮಾಜಿ ಅಧ್ಯಕ್ಷೆ ಶಶಿಕಲಾ, ಮನೋಹರ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಮನೋಹರ ಕೋಟ್ಯಾನ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಆಧಾರ್ ಸೀಡಿಂಗ್ - ಮ್ಯಾಪಿಂಗ್ ಕಡ್ಡಾಯ: ಶಶಿಧರ್ ಕೋಸಂಬೆ
ಅನೈತಿಕ ಚಟುವಟಿಕೆಗಳ ಬಗ್ಗೆ ನಿಗಾ: ಡಾ.ಮಂತರ್ ಗೌಡ ಸೂಚನೆ