ಕೇಂದ್ರದ ಜನವಿರೋಧಿ ಕಾಯ್ದೆಗಳ ವಿರುದ್ಧ ಉಮೇಶ್ ಆಕ್ರೋಶ

KannadaprabhaNewsNetwork |  
Published : Feb 13, 2026, 01:30 AM IST
ಫೋಟೋ 12ಪಿವಿಡಿ112ಪಿವಿಜಿ1ಜೆಸಿಟಿಯು ಕರ್ನಾಟಕ ಪ್ರಾಂತ್ಯ,ಹಸಿರು ಸೇನೆ ಹಾಗೂ ಅಂಗನವಾಡಿ, ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ವಿವಿಧ ಬೇಡಿಕೆ ಈಡೇರಿಗೆ ಕೇಂದ್ರಕ್ಕೆ ಆಗ್ರಹಿಸಿ ರಸ್ತೆ ತಡೆ,ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಕಾರ್ಮಿಕರನ್ನು ಸಂಪೂರ್ಣ ಗುಲಾಮರನ್ನಾಗಿಸಲು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿದೆ. 4 ಕಾರ್ಮಿಕ ಸಂಹಿತೆಗಳನ್ನಾಗಿ ನವೆಂಬರ್ 21, 2025ರಂದು ಅಂತಿಮ ಪ್ರಕಟಣೆ ಹೊರಡಿಸಿದೆ.

ಕನ್ನಡಪ್ರಭ ವಾರ್ತೆ ಪಾವಗಡ

ಜೆಸಿಟಿಯು, ಸಂಯುಕ್ತ ಹೋರಾಟ-ಕರ್ನಾಟಕ ಕರೆ ಮೇರೆಗೆ ಇಲ್ಲಿನ ಸಿಐಟಿಯು ಅಂಗನವಾಡಿ ಹಾಗೂ ರೈತ ಮತ್ತು ಇತರೆ ಕಾರ್ಮಿಕ ಸಂಘಟನೆಗಳ ವತಿಯಿಂದ ಗುರುವಾರ ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಯಿತು.

ಪ್ರವಾಸಿ ಮಂದಿರದಿಂದ ಸಾಗಿದ ಹೋರಾಟಗಾರರು, ಚಳ್ಳಕರೆ ಮಾರ್ಗದಲ್ಲಿ ರಸ್ತೆ ತಡೆ ನಡೆಸಿ ಕೇಂದ್ರದ ವಿರುದ್ಧ ಘೋಷಣೆ ಮೊಳಗಿಸಿದರು. ಬಳಿಕ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವವಹಿಸಿದ್ದ ಕಟ್ಟಡ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷ ಕಾಮ್ರೇಡ್ ಉಮೇಶ್‌ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಮಿಕರನ್ನು ಸಂಪೂರ್ಣ ಗುಲಾಮರನ್ನಾಗಿಸಲು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿದೆ. 4 ಕಾರ್ಮಿಕ ಸಂಹಿತೆಗಳನ್ನಾಗಿ ನವೆಂಬರ್ 21, 2025ರಂದು ಅಂತಿಮ ಪ್ರಕಟಣೆ ಹೊರಡಿಸಿದೆ. ಕಾರ್ಮಿಕ ಸಂಘಟನೆಗಳು ಜಾರಿ ಮಾಡಲು ಬಿಟ್ಟಿರಲಿಲ್ಲ. ಆದರೆ ಈಗ ಜಾರಿ ಮಾಡಲು ಮುಂದಾಗಿದೆ. ಇದರಿಂದ ಕಾರ್ಮಿಕರಿಗೆ ಅನ್ಯಾಯವಾಗಲಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘ, ಹಸಿರು ಸೇನೆ ಜಿಲ್ಲಾಧ್ಯಕ್ಷ ಪೂಜಾರಪ್ಪ, ಕೃಷಿ,ಕಾರ್ಮಿಕ ಹಾಗೂ ದಲಿತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಿಂಪಡೆಯಬೇಕು. ಕಾರ್ಮಿಕರಿಗೆ ಹೆಚ್ಚಿನ ಅದ್ಯತೆ ನೀಡುವ ಮೂಲಕ ಉದ್ಯೋಗ ಕಾಯಂ ಸೇರಿದಂತೆ ವಿಶೇಷ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.ತಾಲೂಕು ಅಂಗನವಾಡಿ ಕಾರ್ಯಕರ್ತರ ಸಂಘದ ಅಧ್ಯಕ್ಷೆ ಸುಶೀಲಮ್ಮ, ಕಾರ್ಯದರ್ಶಿ ಶಿವಗಂಗಮ್ಮ, ಗುಲ್ಜಾರ್‌ ಭಾನು, ಬಿಸಿಯೂಟ ಸಂಘಟನೆ ಅಧ್ಯಕ್ಷೆ ಕೆಂಚಮ್ಮ, ಕಾರ್ಯದರ್ಶಿ ನಾಗರತ್ನಮ್ಮ, ಸಿಐಟಿಯು ಮುಖಂಡ ಒ.ನಾಗರಾಜ್‌, ಎಐಟಿಸಿ ಅಧ್ಯಕ್ಷ ರಾಮಕೃಷ್ಣಪ್ಪ, ದಲಿತ ಮುಖಂಡ ನಾರಾಯಣಪ್ಪ, ಎಪಿಎಂಸಿ ಹಮಾಲಿ ಸಂಘದ ಅಧ್ಯಕ್ಷ ರಾಮಾಂಜಿನಪ್ಪ, ಕಟ್ಟಡ ಕಾರ್ಮಿಕ ಸಂಘಟನೆ ಮುಖಂಡರಾದ ರಾಮಾಂಜಿನಪ್ಪ, ಕಾರ್ಯದರ್ಶಿ ಎನ್‌.ರಾಮಾಂಜಿನಪ್ಪ, ಗ್ರಾಪಂ ಸದಸ್ಯ ಸುಬ್ಬರಾಯಪ್ಪ, ಬಸ್‌ ಸ್ಟ್ಯಾಂಡ್‌ ಹಮಾಲಿ ಸಂಘದ ಅಧ್ಯಕ್ಷ ಮದ್ಲೇಟಪ್ಪ, ಕಾರ್ಯದರ್ಶಿ ಗಂಗಾಧರ್‌ ಹಾಗೂ ಭಗತ್ ಸೇನೆ ಇತರೆ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
ಸಾರ್ವತ್ರಿಕ ಮುಷ್ಕರ: ತಿಪಟೂರಿನಲ್ಲಿ ಸ್ವಯಂ ಪ್ರೇರಿತ ಬಂದ್