ಇಂದಿನ ಸಾಹಿತ್ಯ ಕ್ಷೇತ್ರದಲ್ಲಿ ಅಸಹನೀಯ ವಾತಾವರಣ

KannadaprabhaNewsNetwork |  
Published : Mar 25, 2026, 01:15 AM IST
್ಿ | Kannada Prabha

ಸಾರಾಂಶ

ಇಂದಿನ ಕನ್ನಡ ಸಾಹಿತ್ಯ ವಲಯದಲ್ಲಿ ಅಸಹನೆ ವರ್ಗ ತಾರತಮ್ಯ ಅಸೂಯೆ ಗುಂಪುಗಾರಿಕೆ ಅಧಿಕಾರದ ಓಲೈಸುವಿಕೆ ರಾಜಕಾರಣ ಪ್ರಶಸ್ತಿ ಪುರಸ್ಕಾರದ ವಾಂಛೆ ಇಂದಿನ ಸಾಹಿತ್ಯವಲಯದ ವಾತಾವರಣವನ್ನು ಅಸಹನೀಯಗೊಳಿಸಿವೆ ಎಂದು ಇತಿಹಾಸ ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ತುಮಕೂರುಇಂದಿನ ಕನ್ನಡ ಸಾಹಿತ್ಯ ವಲಯದಲ್ಲಿ ಅಸಹನೆ ವರ್ಗ ತಾರತಮ್ಯ ಅಸೂಯೆ ಗುಂಪುಗಾರಿಕೆ ಅಧಿಕಾರದ ಓಲೈಸುವಿಕೆ ರಾಜಕಾರಣ ಪ್ರಶಸ್ತಿ ಪುರಸ್ಕಾರದ ವಾಂಛೆ ಇಂದಿನ ಸಾಹಿತ್ಯವಲಯದ ವಾತಾವರಣವನ್ನು ಅಸಹನೀಯಗೊಳಿಸಿವೆ ಎಂದು ಇತಿಹಾಸ ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಅಭಿಪ್ರಾಯಪಟ್ಟರು.ಅವರು ನಗರದ ಶ್ರೀ ಸಿದ್ಧಗಂಗಾ ಬಿಇಡಿ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಪ್ರೊ. ಬಿ.ವೀರಭದ್ರಯ್ಯ ಮಂಗಳಮ್ಮ ಮತ್ತು ವಿಶ್ವಸ್ತ ದತ್ತಿ ಉಪನ್ಯಾಸದಲ್ಲಿ ಇಂದಿನ ಸಾಹಿತ್ಯವಲಯ ಕುರಿತು ಮಾತನಾಡಿದರು.ಸಾಹಿತ್ಯವಲಯ ಎಡಪಂಥ, ಬಲಪಂಥ ಎಂದು ಎರಡು ವಿಭಿನ್ನ ವರ್ಗಗಳಲ್ಲಿ ಗುರುತಿಸಿಕೊಂಡಿದೆ ಒಬ್ಬ ಬರಹಗಾರ ಈ ಯಾವುದಾದರೂ ಗುಂಪಿನೊಂದಿಗೆ ಗುರುತಿಸಿಕೊಂಡಲ್ಲಿ ಮಾತ್ರ ತನ್ನದೇ ಆದ ಐಡೆಂಟಿಟಿ ಹೊಂದಲು ಸಾಧ್ಯ ಎನ್ನುವ ವಾತಾವರಣ ಸಾಹಿತ್ಯ ಕ್ಷೇತ್ರದಲ್ಲಿ ನಿರ್ಮಾಣವಾಗಿದೆ. ಪ್ರತಿ ಗುಂಪಿಗೂ ಬರೆಯಲು ಅವರದೇ ಆದ ಅಜೆಂಡಾಗಳಿವೆ ಅಂಥದ್ದೊಂದು ಸ್ಥಾಪಿತ ಅಜೆಂಡಾದ ಚೌಕಟ್ಟಿನಲ್ಲೇ ಬರೆಯಬೇಕಾದ ಅನಿವಾರ್ಯತೆ ಬರಹಗಾರನದು. ಒಂದು ಗುಂಪಿನ ಬರಹಗಾರನ ವಿರುದ್ಧ ಇನ್ನೊಂದು ಗುಂಪಿನವರು ಕತ್ತಿಮಸೆಯುತ್ತಾರೆ. ಇಂತಹ ವಾತಾವರಣದಲ್ಲಿ ಪರಭಾಷೆಗಳ ಪೈಪೋಟಿ ಶಿಕ್ಷಣದ ಮಾಧ್ಯಮವಾಗಿ ಬೇರೂರಿರುವ ಇಂಗ್ಲೀಷ್ ಭಾಷೆ ಕನ್ನಡ ಪುಸ್ತಕಗಳನ್ನು ಖರೀದಿಸಿ ಓದುವ ಓದುಗರ ಕೊರತೆ, ರಾಜಕಾರಣಿಗಳ ಸ್ವಹಿತಾಸಕ್ತಿ ಎಲ್ಲ ಸಮಸ್ಯೆಗಳ ನಡುವೆ ಕನ್ನಡ ಭಾಷೆ ತನ್ನ ನೆಲದಲ್ಲೇ ಅಪರಿಚಿತವಾಗುತ್ತದೆ ಎಂದು ವಿಷಾದಿಸಿದರು.

ಕಾರ್ಯ ಕ್ರಮ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ ಮಾತನಾಡಿ, ಜಾಗತೀಕರಣದ ಪರಿಣಾಮವಾಗಿ ಇಂಗ್ಲಿಷ್ ಭಾಷೆ ಮಹತ್ವ ಪಡೆದಿರುವುದರಿಂದ ಅದನ್ನು ಭಾಷೆ ಮಾತ್ರವಾಗಿ ಕಲಿಯದೆ ಅದನ್ನೇ ಕಲಿಕೆಯ ಮಾಧ್ಯಮವಾಗಿ ಮಾಡಿಕೊಳ್ಳಲಾಗಿದೆ. ಇಂತಹ ದಿನಮಾನದಲ್ಲಿ ಈ ನಾಡ ಭಾಷೆಯಾದ ಕನ್ನಡವನ್ನು ಎರಡನೇ ಭಾಷೆಯಾಗಿ ಶಾಲೆಗಳಲ್ಲಿ ಕಲಿಸುವ ದುರಂತ ಎದುರಾಗಿದೆ. ಎಂದು ಅಸಮದಾನ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಬಿ.ಜ್ಯೋತಿ ಪಂತ್ ಮಾತನಾಡಿ ಇಂದು ಯವಪೀಳಿಗೆ ಸಾಮಾಜಿಕ ಜಾಲತಾಣಗಳು ಮತ್ತು ಡಿಜಿಟಲ್ ಮನರಂಜನೆಯತ್ತ ಆಕರ್ಷಿತರಾಗುತ್ತಿರುವುದರಿಂದ ಪುಸ್ತಕ ಓದುವವರ ಸಂಖ್ಯೆ ಕ್ಷೀಣಿಸಿದೆ. ಇದು ಪುಸ್ತಕ ಪ್ರಕಾಶನದ ಮೇಲೂ ಪರಿಣಾಮ ಬೀರಿದೆ ಎಂದು ನುಡಿದ ಅವರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಾಹಿತಿ ಪ್ರಾಧ್ಯಾಪಕ ಡಾ ಎಂ.ಗೋವಿಂದರಾಯ ಧರ್ಮ ಸಮನ್ವಯ ಕುರಿತು ಮಾತನಾಡಿದರೆ, ತುಮಕೂರು ಜಿಲ್ಲಾ ಶ.ಸಾ.ಪ. ಅಧ್ಯಕ್ಷರಾದ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯನವರು ಡಾ. ಶಿವಕುಮಾರ ಸ್ವಾಮೀಜಿಯವರನ್ನು ಕುರಿತು ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಡಾ. ಸಣ್ಣಹೊನ್ನಯ್ಯ ಕಂಟಲಗೆರೆ ತುಮಕೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಿಕ್ಕ ಬೆಳ್ಳಾವಿ ಶಿವಕುಮಾರ ಉಪಸ್ಥಿತರಿದ್ದರು. ವೈಷ್ಣವಿ ಪ್ರಾರ್ಥಿಸಿದರು, ಸಿಂಧೂ ಆರ್. ಸ್ವಾಗತಿಸಿದರು ಶಾಲಿನಿ ಕೆ.ಎಸ್. ವಂದಿಸಿದರು ಶ್ರೀನಿವಾಸ್ ಬಿ. ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರು ಧನಾತ್ಮಕ ಭಾವನೆ ರೂಢಿಸಿಕೊಳ್ಳಿ
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಮನೋರಂಜನೆ ವಾರ