ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಗ್ರಾಮದಲ್ಲಿ ಮೂಲ ಸೌಲಭ್ಯಗಳ ಕೊರತೆಯಿಂದ ಎಲ್ಲಾ ಚರಂಡಿಗಳು ಸ್ವಚ್ಛತೆ ಕಾಣದೇ ಗಬ್ಬೆದ್ದು ನಾರುತ್ತಿವೆ. ಸೊಳ್ಳೆಗಳ ಹಾವಳಿ ಜಾಸ್ತಿಯಾಗಿದೆ. ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಕ್ಷಾಂತರ ರು. ಖರ್ಚು ಮಾಡಿ ನಿರ್ಮಿಸಿರುವ ಶುದ್ಧ ಕುಡಯುವ ನೀರಿನ ಘಟಕ ಕೆಟ್ಟುನಿಂತು 2 ವರ್ಷಗಳು ಕಳೆದಿದೆ. ಇದುವರೆವಿಗೂ ರಿಪೇರಿ ಮಾಡಿಲ್ಲ. ಎಲ್ಲಾ ಚರಂಡಿಗಳು ಕೊಳಚೆ ನೀರು ಮತ್ತು ಹೂಳು ತುಂಬಿಕೊಂಡು ಗಬ್ಬೆದ್ದು ನಾರುತ್ತಿವೆ ಎಂದು ದೂರಿದರು.ಚರಂಡಿಗಳಲ್ಲಿ ಅನುಪಯುಕ್ತ ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದು ನಿಂತಿದೆ. ಹೂಳು ತುಂಬಿರುವ ಕಾರಣ ನೀರು ಮುಂದೆ ಹೋಗದೇ ನಿಂತಲ್ಲೇ ನಿಂತು ದುರ್ನಾತ ಬೀರುತ್ತಿದೆ. ಕೆಲವು ಕಡೆ ಚರಂಡಿಯೇ ಇಲ್ಲದೇ ಕೊಳಚೆ ನೀರು ರಸ್ತೆ ಹಾಗೂ ಮನೆಗಳ ಮುಂದೆ ಹರಿಯುತ್ತಿದೆ. ಗ್ರಾಪಂ ಪಿಡಿಒ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಸಿಬ್ಬಂದಿ ವಿರುದ್ಧ ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಕುಮಾರ್, ರಂಗಬೋಳೆಗೌಡ, ಜಯಲಕ್ಷ್ಮಿ ಕೃಷ್ಣೇಗೌಡ, ಶಿವೇಗೌಡ, ರೇವನಾಯಕ್, ಕೃಷ್ಣೇಗೌಡ, ನಾಗೇಶ್, ಗೋವಿಂದೇಗೌಡ, ಸುಂದರಮ್ಮ, ಪುಟ್ಟೇಗೌಡ, ಅನು ನಾಗೇಶ್, ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.