ವಿಜ್ಞಾನ ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಿ

KannadaprabhaNewsNetwork |  
Published : Feb 06, 2026, 01:30 AM IST
ಸಾಲೂರು ಶ | Kannada Prabha

ಸಾರಾಂಶ

ವಿಜ್ಞಾನವನ್ನು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹು ಮುಖ್ಯವಾಗಿರುತ್ತದೆ ಎಂದು ಸಾಲೂರು ಬೃಹತ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ವಿಜ್ಞಾನವನ್ನು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹು ಮುಖ್ಯವಾಗಿರುತ್ತದೆ ಎಂದು ಸಾಲೂರು ಬೃಹತ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕೃಪಾ ಎಜುಕೇಶನ್ ಸೊಸೈಟಿ (ರಿ), ಸಾಲೂರು ಬೃಹನ್ ಮಠ ಹಾಗೂ ಅಂಡ್ ಸಾಫ್ಟ್ ಮ್ಯಾಟರ್ ಸೈನಸ್ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇವರ ವತಿಯಿಂದ ವಿಜ್ಞಾನಿ ವಿದ್ಯಾರ್ಥಿ ವಿಚಾರ ವಿನಿಮಯ ಕಾರ್ಯಕ್ರಮವನ್ನು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ವಿಜ್ಞಾನ ವಿಷಯವನ್ನು ಕಲಿಯುವುದಕ್ಕಿಂತ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹು ಮುಖ್ಯವಾಗಿರುತ್ತದೆ. ನಮ್ಮೆಲ್ಲರಿಗೂ ಸಮಾನ ಪ್ರತಿಭೆ ಇಲ್ಲ ಆದರೆ ನಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಲು ನಮ್ಮೆಲ್ಲರಿಗೂ ಸಮಾನ ಅವಕಾಶವಿದೆ. ಹೀಗಾಗಿ ವಿದ್ಯಾರ್ಥಿಗಳು ಇಂತಹ ಉತ್ತಮ ವೇದಿಕೆಗಳ ಮೂಲಕ ವಿಜ್ಞಾನಗಳ ವಿಚಾರ ವಿನಿಮಯಗಳ ಮೂಲಕ ತಿಳಿದುಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.

ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ವಿಜ್ಞಾನಿ ಕೃಷ್ಣ ಪ್ರಸಾದ್ ಮಾತನಾಡಿ, ವಿಶಾಲ ಮನೋಭಾವ ಬೆಳೆಸಿ ಜ್ಞಾನೋದಯದ ಮೂಲಕ ವಿಜ್ಞಾನವೆಂಬುದು ಜ್ಞಾನಗಳ ಸಮೂಹ ಹಳೆತರಲ್ಲಿ ಹೊಸದನ್ನು ಹುಡುಕುವ ಸಂಶೋಧನಾ ವ್ಯೂಹ ವನ್ನು ಹುಡುಕಿ ವಿದ್ಯಾರ್ಥಿಗಳು ಅರ್ಥೈಸಿಕೊಂಡು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವುದು ಎಲ್ಲರ ಕರ್ತವ್ಯವಾಗಿರುತ್ತದೆ ವಿದ್ಯಾರ್ಥಿಗಳು ವಿಜ್ಞಾನ ಹಾಗೂ ತಂತ್ರಜ್ಞಾನ ಬಳಸಿಕೊಂಡು ತಮ್ಮ ವಿದ್ಯಾರ್ಥಿ ಜೀವನವನ್ನು ರೂಪುಗೊಳ್ಳಲು ನ್ಯಾನೋ ಭವಿಷ್ಯದಲ್ಲಿ ಮಹತ್ವದ ವೈಜ್ಞಾನಿಕ ಸಾಧನೆಗಳಿಗೆ ದಾರಿ ಮಾಡಿಕೊಡಲಿದೆ ಮಕ್ಕಳು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ವಿಶೇಷ ಆಹ್ವಾನಿತರಾಗಿ ವಿದ್ಯಾರ್ಥಿಗಳಿಗೆ ಹಿತವಚನ ನಿಡಿದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ .ರಘು ಮಾತನಾಡಿ, ಗುಡ್ಡಗಾಡು ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜನಮಾಗಡಿರುವ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಬೆಂಗಳೂರು ಇವರು ವಿಜ್ಞಾನದ ಅರಿವು ಮೂಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ವಿಚಾರವಾಗಿದೆ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ಜ್ಞಾನ ವೃದ್ಧಿಪಡಿಸಿಕೊಳ್ಳಲು ಉತ್ತಮ ಅವಕಾಶವನ್ನು ನೀಡಿದ್ದಾರೆ ಸದ್ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು .

ಕಾರ್ಯಕ್ರಮದಲ್ಲಿ ಗುಂಡೇಗಾಲ ಶ್ರೀ ಮಠದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!