ಗ್ರಾಮೀಣಾಭಿವೃದ್ಧಿಯ ಆಳ ಅರಿಯಿರಿ

KannadaprabhaNewsNetwork |  
Published : Jun 19, 2025, 12:34 AM IST
ಗುಬ್ಬಿಪಟ್ಟಣದ ಎಸ್.ಸಿ.ಎಸ್. ಕಲ್ಯಾಣಮಂದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್, ತುಮಕೂರು, ತಾಲ್ಲೂಕು ಪಂಚಾಯತ್, ಗುಬ್ಬಿ ಇವರುಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಗುಬ್ಬಿ ತಾಲ್ಲೂಕಿನ 34 ಗ್ರಾಮ ಪಂಚಾಯ್ತಿಗಳ  ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ ಉದ್ಘಾಟಿಸಿದ ಶಾಸಕ ಎಸ್ ಆರ್ ಶ್ರೀನಿವಾಸ್ . | Kannada Prabha

ಸಾರಾಂಶ

ಗ್ರಾಮೀಣಾಭಿವೃದ್ಧಿಯ ಆಳವನ್ನು ಅರಿತು ಅದರಂತೆ ಕೆಲಸ ಮಾಡಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಗ್ರಾಮೀಣಾಭಿವೃದ್ಧಿಯ ಆಳವನ್ನು ಅರಿತು ಅದರಂತೆ ಕೆಲಸ ಮಾಡಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಎಸ್.ಸಿ.ಎಸ್. ಕಲ್ಯಾಣಮಂದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್, ತುಮಕೂರು, ತಾಲೂಕು ಪಂಚಾಯತ್, ಗುಬ್ಬಿ ಇವರುಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಗುಬ್ಬಿ ತಾಲೂಕಿನ 34 ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಸದಸ್ಯರನ್ನು ಗೌರವಹಿತವಾಗಿ ನಡೆಸಿಕೊಳ್ಳುವುದು ಜವಾಬ್ದಾರಿಯುತ ಕಾರ್ಯವಾಗಿದೆ. ಪಂಚಾಯತ್ ರಾಜ್ ವ್ಯವಸ್ಥೆ ಬಲಿಷ್ಠವಾಗಬೇಕಾದರೆ ತಳಮಟ್ಟದ ಗ್ರಾಮಪಂಚಾಯಿತಿ ಸದಸ್ಯರಿಗೆ ಉತ್ತಮ ಮಾರ್ಗದರ್ಶನ ತರಬೇತಿ ನೀಡಬೇಕಾಗುತ್ತದೆ. ಪ್ರತಿಯೊಂದು ಹಳ್ಳಿಯಲ್ಲಿ ಸ್ಮಶಾನಕ್ಕೆ ಜಾಗ ನೀಡಲಾಗಿದೆ. ಸ್ಮಶಾನ ಅಭಿವೃದ್ಧಿಯನ್ನು ಉದ್ಯೋಗ ಖಾತರಿ ಯೋಜನೆಯಿಂದ ಅಭಿವೃದ್ಧಿ ಮಾಡಲಾಗುತ್ತದೆ. ಈ ಜಾಗವನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕಾಗುತ್ತದೆ. ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗಲು ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಉತ್ತಮವೆನಿಸಿದೆ. ಕಾರ್ಯಾಗಾರ ಮೂಲಕ ಚುನಾಯಿತ ಪ್ರತಿನಿಧಿಗಳಿಗೆ ಸೂಕ್ತ ತರಬೇತಿ ನೀಡುವುದು ಸರ್ಕಾರದ ಒಳ್ಳೆಯ ಕ್ರಮವಾಗಿದೆ. ಇದರ ಸದುಪಯೋಗ ಮಾಡಿಕೊಂಡು ಸದಸ್ಯರು ಉತ್ತಮ ಆಡಳಿತ ನಡೆಸಲಿ. ಸಂಪನ್ಮೂಲ ವ್ಯಕ್ತಿಗಳಿಂದ ತಿಳಿಯಬೇಕಾದ ವಿಚಾರವನ್ನು ಮನದಟ್ಟು ಮಾಡಿಕೊಂಡಿ ಅದನ್ನು ತಮ್ಮ ಪಂಚಾಯಿತಿಯಲ್ಲಿ ಅಳವಡಿಸಿ ಸಾರ್ವಜನಿಕ ಸೇವೆ ಮಾಡಿ ಎಂದು ಸಲಹೆ ನೀಡಿದರು.ಕಾರ್ಯಾಗಾರದಲ್ಲಿ ತಾಪಂ ಆಡಳಿತಾಧಿಕಾರಿ ಡಿ.ಆ‌ರ್.ಪುಷ್ಪ, ಇಒ ಶಿವಪ್ರಕಾಶ್‌, ತಾಲೂಕು ಯೋಜನಾಧಿಕಾರಿ ಜಗನ್ನಾಥಗೌಡ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ರಂಗನಾಥ್, ತಾಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ, ಕೃಷಿ ಸಹಾಯಕ ನಿರ್ದೇಶಕ ಜಗನ್ನಾಥಗೌಡ, ಪಂಚಾಯತ್ ರಾಜ್ ಎಇಇ ಚಂದ್ರಶೇಖರ್, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ನಟರಾಜ್, ಲೋಕೋಪಯೊ ಇಲಾಖೆ ಎಇಇ ಯೋಗೀಶ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಮೇಘನಾ ಇತರ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಭಾಗವಹಿಸಿದ್ದರು. ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಇಂತಹ ಕಾರ್ಯಗಾರರು ನಡೆದರೆ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಹೆಚ್ಚು ಪರಿಣಾಮಕಾರಿಯಾಗಿದೆ. ಇ ಸ್ವತ್ತು ತಂತ್ರಾಂಶದಲ್ಲಿ ಇದ್ದಂತಹ ಅಡಚಣೆಗಳನ್ನು ತಿಳಿಸಿ ಮುಂದಿನ ದಿನಗಳಲ್ಲಿ ಹೆಚ್ಚು ಸುಲಲಿತವಾಗಿ ಈ ತಂತ್ರಾಂಶ ಬಳಸಲು ಈ ತರಬೇತಿ ಪೂರಕವಾಗಿತ್ತು ಎಂದು ಹೇರೂರು ಗ್ರಾಮ ಪಂಚಾಯತಿ ನೌಕರ ರಘುಪ್ರಕಾಶ್ ಅಭಿಪ್ರಾಯಪಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ