ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಗಂಭೀರತೆ ಅರಿಯಿರಿ

KannadaprabhaNewsNetwork |  
Published : Oct 21, 2025, 01:00 AM IST
ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಗಂಭೀರತೆ ಅರಿತುಕೊಳ್ಳಿ: ಜಿಲ್ಲಾಧಿಕಾರಿ ಡಾ.ಆನಂದ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಎಸ್‌ಸಿಪಿ-ಟಿಎಸ್‌ಪಿ ಇದೊಂದು ಕಾಯ್ದೆಯಾಗಿದ್ದು, ಈ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಅಧಿಕಾರಿಗಳು ಈ ಕಾಯ್ದೆಯ ಗಂಭೀರತೆಯನ್ನು ಅರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಎಸ್‌ಸಿಪಿ-ಟಿಎಸ್‌ಪಿ ಇದೊಂದು ಕಾಯ್ದೆಯಾಗಿದ್ದು, ಈ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಅಧಿಕಾರಿಗಳು ಈ ಕಾಯ್ದೆಯ ಗಂಭೀರತೆಯನ್ನು ಅರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು 2025ರ ಸೆಪ್ಟಂಬರ್‌ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕಾಯ್ದೆಯ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಿ ಕೊಡಬೇಕು. ಸಂಬಂಧಿಸಿದ ಇಲಾಖೆಗಳು ಈ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಇದ್ದ ಸಂದರ್ಭದಲ್ಲಿ ಶೋಕಾಸ್ ನೋಟಿಸ್ ನೀಡಲು ಹಾಗೂ ನಿಗದಿತ ಅವಧಿಯಲ್ಲಿ ಎಸ್‌ಸಿಪಿ -ಟಿಎಸ್‌ಪಿ ಅನುದಾನ ವೆಚ್ಚ ಮಾಡದೇ ಬಾಕಿ ಉಳಿಸಿಕೊಂಡಲ್ಲಿ ಕ್ರಮ ಜರುಗಿಸಲು ಅವಕಾಶವಿದೆ. ಹೀಗಾಗಿ, ಇದಕ್ಕೆ ಆಸ್ಪದ ನೀಡದೇ, ಕಾಯ್ದೆಯ ಗಂಭೀರತೆಯನ್ನು ಅರಿತುಕೊಂಡು, ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹರಿಗೆ ಸೌಲಭ್ಯಗಳು ದೊರೆಯುವಂತೆ ಅನುದಾನ ವೆಚ್ಚ ಮಾಡುವಂತೆ ಅವರು ಸೂಚನೆ ನೀಡಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸಿ, ಪರಿಶೀಲನೆ ನಡೆಸಬೇಕು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಾಲಕಾಲಕ್ಕೆ, ಅತ್ಯಂತ ಪ್ರಮುಖ ಇಲಾಖೆಗಳಾದ ಶಿಕ್ಷಣ ಇಲಾಖೆ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಬೇಕು. ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳು ಲಾಭ ಫಲಾನುಭವಿಗಳಿಗೆ ತಲುಪುತ್ತಿರುವ ಕುರಿತು ಪರಿಶೀಲನೆ ನಡೆಸಬೇಕು. ಈ ಯೋಜನೆಯಡಿ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಧಿಕಾರಿಗಳು ಎಸ್‌ಸಿಪಿ-ಟಿಎಸ್‌ಪಿ ಆರ್ಥಿಕ ಹಾಗೂ ಭೌತಿಕ ಸಾಧನೆಯ ನಿಖರವಾಗಿ ಮಾಹಿತಿ ಸಲ್ಲಿಸಬೇಕು. ಇಲಾಖಾವಾರು ಯೋಜನೆಯ ಮಾಹಿತಿ ಒದಗಿಸಬೇಕು. ಕೇಂದ್ರ, ರಾಜ್ಯ, ಜಿಲ್ಲಾ ಪಂಚಾಯತಿ ಸೇರಿದಂತೆ ಆಯಾ ವಲಯವಾರು ಪ್ರತ್ಯೇಕವಾಗಿ ಮಾಹಿತಿ ಒದಗಿಸಬೇಕು. ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಸೌಲಭ್ಯ ಒದಗಿಸಿರುವ ಕುರಿತು ನಿಖರ ಮಾಹಿತಿ ಹಾಗೂ ಬಾಕಿ ಉಳಿಯಲು ಇರುವ ಕಾರಣವನ್ನು ನಿಖರವಾಗಿ ಒದಗಿಸಬೇಕು. ಅನುದಾನ ವೆಚ್ಚ ಮಾಡದೆ ಬಾಕಿ ಉಳಿಸಿಕೊಂಡಿರುವ ಕುರಿತು ಸಬೂಬು ನೀಡದೆ, ಬಿಡುಗಡೆಯಾದ ಅನುದಾನ, ವೆಚ್ಚ ಮಾಡಿದ ಅನುದಾನಕ್ಕೆ ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಅವರು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ಸಿಎಂ ಆದರೆ ನನಗೆ ಸಚಿವ ಸ್ಥಾನವೇ ಬೇಡ : ರಾಜಣ್ಣ
ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌