ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಿಂದ ಲಿಂಗತ್ವ ಗ್ರಹಿಕೆ ವಿವಿಧ ಆಯಾಮಗಳಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಣ್ಣು-ಗಂಡು ಸಹಜೀವಿಗಳಾಗಿ, ಪರಸ್ಪರ ಪೂರಕವಾಗಿ ಬದುಕಿದಾಗ ಮಾತ್ರ ಸಮತೋಲನದ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸ್ತ್ರೀವಾದ ಮಹಿಳೆಯರನ್ನು ಸೃಜನಶೀಲರಾಗಿರಲು ಪ್ರೆರೇಪಿಸುವುದಲ್ಲದೆ, ನಮ್ಮೊಳಗಿನ ಸಮಾನತೆಯ ಅರಿವನ್ನು ಎಚ್ಚರಿಸುತ್ತದೆ. ಇದು ಹಕ್ಕುಗಳಿಗಾಗಿ ಹೋರಾಟವಲ್ಲ, ಬದಲಾಗಿ ಮಾನವೀಯ ಮೌಲ್ಯಗಳ ಪ್ರತಿಪಾದನೆ ಎಂದರು. ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ ಮಾತನಾಡಿ, ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆಯುವ ಎಲ್ಲಾ ಕಾರ್ಯಚಟುವಟಿಕೆಗಳು ಮಹಿಳಾ ಸಬಲೀಕರಣದ ಭಾಗವಾಗಿರುತ್ತವೆ. ಇಂದಿನ ಯುವಜನತೆ, ವಿದ್ಯಾರ್ಥಿನಿಯರು, ಕೇವಲ ಜ್ಞಾನವನ್ನು ಪಡೆದುಕೊಳ್ಳುವಷ್ಟರಲ್ಲಿ ನಿಲ್ಲದೇ, ಸಮಾಜದಲ್ಲಿ ಸಮಾನತೆಯ ಧ್ವಜದಾರರಾಗಬೇಕು. ಇಂತಹ ನಿಲುವುಗಳು ತಾನಾಗಿಯೇ ಬರುವುದಿಲ್ಲ ಅವುಗಳನ್ನು ಬೆಳಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಿಳಾ ಅಧ್ಯಯನ ಕೇಂದ್ರ ಮತ್ತು ವಿಭಾಗದ ಕಾರ್ಯಚಟುವಟಿಕೆಗಳು ಮಹಿಳಾ ಚೇತನತೆಗೆ ಮಾರ್ಗದರ್ಶನ ನೀಡುತ್ತಿದ್ದು, ಸಮಾನತೆಯ ಅರಿವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ. ಕಲಾವತಿ ಕಾಂಬಳೆ, ಡಾ. ಸರೋಜಾ ಸಂತಿ, ಡಾ.ರಜಿಯಾ ನದಾಫ ಉಪಸ್ಥಿತರಿದ್ದರು. ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷ್ಮೀದೇವಿ ವೈ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ.ಶಶಿಕಲಾ ರಾಠೋಡ ನಿರೂಪಿಸಿದರು. ಡಾ.ಭಾಗ್ಯಶ್ರೀ ದೊಡಮನಿ ವಂದಿಸಿದರು.