ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾಧಿಕಾರಿ ಡಾ.ಕೆ.ಆನಂದ ಸೇರಿದಂತೆ ಹಲವಾರು ಅಧಿಕಾರಿಗಳ ಸಮ್ಮುಖದಲ್ಲಿ ಇಂಡಿ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆರ್‌ಓಬಿ ಕಾಮಗಾರಿ ಖುದ್ದು ಪರಿಶೀಲನೆ ನಡೆಸಿದ ಅವರು, ಕಾಮಗಾರಿಯ ಹಂತ ಮೊದಲಾದ ವಿವರಗಳನ್ನು ಪಡೆದುಕೊಂಡರು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಯಾವ ಕಾರಣಕ್ಕೂ ವಿಳಂಬ ನೀತಿ ಅನುಸರಿಸಬೇಡಿ, ನಿಗದಿತ 2027ರ ಜನವರಿ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಆರ್‌ಒಬಿ ಲೋಕಾರ್ಪಣೆ ಆಗುವಂತೆ ನೋಡಿಕೊಳ್ಳಿ. ಯಾವ ಲೋಪದೋಷ ಇರಬಾರದು, ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ತಾಕೀತು ಮಾಡಿದರು. ಸಂಚಾರ ದಟ್ಟಣೆ ತಡೆಗಟ್ಟುವ ನಿಟ್ಟಿನಲ್ಲಿ ಆರ್‌ಓಬಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಇಬ್ರಾಹಿಂಪೂರದಲ್ಲಿ ಆರ್‌ಒಬಿ ನಿರ್ಮಾಣದಿಂದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಿದೆ. ಹೀಗಾಗಿ ಪ್ರಸ್ತುತ ಆರ್‌ಒಬಿ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಎಂದರು.
ಆರ್‌ಒಬಿ ಕಾಮಗಾರಿಯ ಭೌತಿಕ ಪ್ರಗತಿ ಕುರಿತು ವಿವರಣೆ ನೀಡಿದ ಎನ್‌ಎಚ್‌ಎಐ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಪಾಟೀಲ ಮಾತನಾಡಿ, ಪ್ರಸ್ತುತ ಶೇ.50ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು ₹957.09 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪೂರಕವಾದ ರಸ್ತೆ, ಬಸ್ ಬೇಯ್, 15 ಪ್ರಮುಖ ಜಂಕ್ಷನ್ ಮೊದಲಾದ ಕಾಮಗಾರಿಗಳನ್ನು ಇದರಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದರು. ಎಇಇ ವಿವೇಕ ಮಠ, ಮಹಾನಗರಪಾಲಿಕೆ ಸದಸ್ಯ ಮಳುಗೌಡ ಪಾಟೀಲ, ವಿಜಯ ಜೋಶಿ, ಉದಯ ಕನ್ನೊಳ್ಳಿ ಇದ್ದರು.