ಅವಿಭಜಿತ ದ.ಕ. ಜಿಲ್ಲೆಯ ಆಯುರ್ವೇದ ಸೇವೆ ವಿಶ್ವಕ್ಕೆ ಮಾದರಿ: ಲಕ್ಷ್ಮೀ ಹೆಬ್ಬಾಳ್ಕರ್

KannadaprabhaNewsNetwork |  
Published : May 11, 2025, 01:18 AM IST
10ಎಸ್‌ಡಿಎಂ | Kannada Prabha

ಸಾರಾಂಶ

ಕುತ್ಪಾಡಿಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗ ನಿರ್ಣಾಯಕ ಘಟಕದಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ಸೌಲಭ್ಯಗಳ ಉದ್ಘಾಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆಯುರ್ವೇದ ಚಿಕಿತ್ಸೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಆಯುರ್ವೇದಕ್ಕೆ 5 ಸಾವಿರ ವರ್ಷಗಳಷ್ಟು ಇತಿಹಾಸವಿದ್ದು, ಆಯುರ್ವೇದ ಚಿಕಿತ್ಸೆಯನ್ನು ಇಡೀ ದೇಶವೇ ಒಪ್ಪಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅವರು ಶನಿವಾರ ಇಲ್ಲಿನ ಕುತ್ಪಾಡಿಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗ ನಿರ್ಣಾಯಕ ಘಟಕದಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿ, ಆಯುರ್ವೇದದಲ್ಲಿ ಎಸ್‌ಡಿಎಂ ಕಾಲೇಜು ಇಡೀ ದೇಶದಲ್ಲೇ ಉತ್ತಮ ಸಂಶೋಧನೆ ಮಾಡುತ್ತಿದೆ ಎಂದರು.ಖಾಸಗಿ ವಲಯದ ಕಾಲೇಜುಗಳಲ್ಲಿ ಎಸ್‌ಡಿಎಂ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇಲ್ಲಿ ಅದ್ಭುತವಾದ ಕೆಲಸ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಅಲೋಪತಿಗಿಂತ ಆಯುರ್ವೇದದ ಮೇಲೆ ಹೆಚ್ಚು ವಿಶ್ವಾಸ ಬಂದಿದೆ. ಈ ಕಾಲೇಜು ಇನ್ನೂ ಉನ್ನತ ಸ್ಥಾನಕ್ಕೇರಲಿ, ದೇಶಕ್ಕೇ ಹೆಸರುವಾಸಿಯಾಗಲಿ, ಸಮಾಜಕ್ಕೆ ಮಾದರಿಯಾಗಲಿ ಎಂದು ಹಾರೈಸುತ್ತೇನೆ ಎಂದು ಸಚಿವರು ಹೇಳಿದರು.ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಮಮತಾ, ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್., ಕಾಲೇಜಿನ ನಿರ್ದೇಶಕ ಪ್ರಸನ್ನ ರಾವ್, ಫಾರ್ಮಸಿ ವಿಭಾಗದ ಮುಖ್ಯಸ್ಥ ಮುರಳೀಧರ್ ಬಲ್ಲಾಳ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ