ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

KannadaprabhaNewsNetwork |  
Published : Jan 23, 2026, 01:30 AM IST
ಫೋಟೋ 22ಪಿವಿಡಿ1ಪಾವಗಡ,ತಾಲೂಕಿನ ಕರಿಯಮ್ಮನ ಪಾಳ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ವಾಲ್ಮೀಕಿ ಜಾಗೃತಿ ವೇದಿಕೆಯಿಂದ ಲೇಖನಿ ಹಾಗೂ ಸಮವಸ್ತ್ರ ವಿತರಿಸಲಾಯಿತು. | Kannada Prabha

ಸಾರಾಂಶ

ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಕರಿಯಮ್ಮನ ಪಾಳ್ಯ ಶಾಲೆಯ ಮಕ್ಕಳಿಗೆ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ಉಚಿತ ಸಮವಸ್ತ್ರ ನೋಟ್ ಪುಸ್ತಕ ಲೇಖನಿ ಸಾಮಗ್ರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಪಾವಗಡ

ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಕರಿಯಮ್ಮನ ಪಾಳ್ಯ ಶಾಲೆಯ ಮಕ್ಕಳಿಗೆ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ಉಚಿತ ಸಮವಸ್ತ್ರ ನೋಟ್ ಪುಸ್ತಕ ಲೇಖನಿ ಸಾಮಗ್ರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮರವರು ಉದ್ಘಾಟಿಸಿ ಮಾತನಾಡಿ ಸರ್ಕಾರಿ ಶಾಲೆಯ ಉಳಿವಿಗೆ ಸಂಘ ಸಂಸ್ಥೆಗಳು ದಾನಿಗಳು ಮುಂದೆ ಬಂದು ಸರ್ಕಾರಿ ಶಾಲೆ ಉಳಿಸುವ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಮಾಡಿದರೆ ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಸರ್ಕಾರಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ಆಗಬೇಕು. ವಾಲ್ಮೀಕಿ ಜಾಗೃತಿ ವೇದಿಕೆಯ ವತಿಯಿಂದ ಇಂದು ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಪ್ರಶಂಸಿಸಿ ಅಭಿನಂದನೆಗಳನ್ನು ತಿಳಿಸಿದರು. ಕಾರ್ಯಕ್ರಮ ಉದ್ದೇಶಿಸಿ ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳೇಗಾರ್ ಲೋಕೇಶ್ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಹಾಗೂ ಶಾಲೆಯ ಅಭಿವೃದ್ಧಿಗೆ ಸಹಾಯ ಸಹಕಾರ ಮಾಡಿ ಬಡ ಮಕ್ಕಳ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ದೇಶದ ಅಭಿವೃದ್ಧಿಗೆ ಕೈಜೋಡಿಸಿದಂತಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವೇಣು ರೆಡ್ಡಿ ಇ.ಸಿ.ಒ, ಸರ್ಕಾರಿ ನೌಕರ ಸಂಘದ ಕಾರ್ಯದರ್ಶಿ ಮಾರುತೇಶ್ ಉಪಾಧ್ಯಕ್ಷರುಗಳಾದ ರಾಮಾಂಜನೇಯ ಕೆ. ಗಂಗಾಧರ್, ಜಿಲ್ಲಾ ನಿರ್ದೇಶಕ ಪ್ರಸಾದ್, ತಾಲೂಕು ನೌಕರರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಜಯಲಕ್ಷ್ಮಿ, ಸಿ.ಆರ್.ಪಿ ತಿಪ್ಪೇಸ್ವಾಮಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ನಾಯಕ ಕಾರ್ಯಕ್ರಮ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಜಾಗೃತಿ ವೇದಿಕೆಯ ಈ ಕಾರ್ಯಕ್ರಮಕ್ಕೆ ದೇಣಿಗೆ ನೀಡಿದ ಪದಾಧಿಕಾರಿಗಳಾದ ಲೋಕೇಶ್ ಪಾಳೇಗಾರ್. ಶ್ರೀನಿವಾಸ್ ನಾಯಕ. ಭಾಸ್ಕರ್ ನಾಯಕ ಇವರಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ಪಾಳೇಗಾರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಆದಿ ಲಕ್ಷ್ಮಿ.,ಉಪಾಧ್ಯಕ್ಷರಾದ ಲತಮ್ಮ, ಅಂಗನವಾಡಿ ಕಾರ್ಯಕರ್ತೆ ರಂಗಮ್ಮ, ದೈಹಿಕ ಶಿಕ್ಷಕ ರಾಜ್ ಗೋಪಾಲ್, ಅತಿಥಿ ಶಿಕ್ಷಕ ರಮೇಶ್, ನಿಡಗಲ್ ಹೋಬಳಿ ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಓಂಕಾರ ನಾಯಕ, ನಿವೃತ್ತ ಸೈನಿಕ ಅನಂತಯ್ಯ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ರಾಮಪ್ಪ, ಮಾಜಿ ಎಸ ಡಿ .ಎಮ್. ಸಿ ಅಧ್ಯಕ್ಷ ತಿಮ್ಮರಾಜ್, ಗೋಪಾಲಪ್ಪ, ಚಿನ್ನಪ್ಪ, ಮಾರುತಿ, ಅಂಜಿನಾಯಕ, ಸಣ್ಣ ರಾಮಪ್ಪ ಮುಂತಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ