ಕನ್ನಡಪ್ರಭ ವಾರ್ತೆ ಬೆಳಗಾವಿಕಬ್ಬು ಬೆಳೆಗಾರರಿಗೆ ಉತ್ತಮ ಬೆಲೆ ದೊರೆಯಬೇಕು ಎಂಬುದೇ ಸರ್ಕಾರದ ಉದ್ದೇಶ. ರೈತರಿಗೆ ಹೆಚ್ಚಿನ ದರ ನೀಡುವ ಸಾಮರ್ಥ್ಯ ಹೊಂದಿರುವ ಸಕ್ಕರೆ ಕಾರ್ಖಾನೆಗಳು ಹೆಚ್ಚಿನ ದರ ನೀಡುವುದಕ್ಕೆ ನಮ್ಮ ಯಾವುದೇ ಆಕ್ಷೇಪವಿಲ್ಲ. ಆದರೆ, ಎಲ್ಲ ಕಾರ್ಖಾನೆಗಳ ಆರ್ಥಿಕ ಪರಿಸ್ಥಿತಿ, ಕಬ್ಬಿನ ಇಳುವರಿ ಹಾಗೂ ಸಕ್ಕರೆ ಉತ್ಪಾದನೆ ಒಂದೇ ರೀತಿಯಾಗಿಲ್ಲ. ಹೀಗಾಗಿ ಎಲ್ಲ ಕಾರ್ಖಾನೆಗಳಿಂದ ಏಕರೂಪದ ದರ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕಬ್ಬು ಬೆಳೆಗಾರರಿಗೆ ಉತ್ತಮ ಬೆಲೆ ದೊರೆಯಬೇಕು ಎಂಬುದೇ ಸರ್ಕಾರದ ಉದ್ದೇಶ. ರೈತರಿಗೆ ಹೆಚ್ಚಿನ ದರ ನೀಡುವ ಸಾಮರ್ಥ್ಯ ಹೊಂದಿರುವ ಸಕ್ಕರೆ ಕಾರ್ಖಾನೆಗಳು ಹೆಚ್ಚಿನ ದರ ನೀಡುವುದಕ್ಕೆ ನಮ್ಮ ಯಾವುದೇ ಆಕ್ಷೇಪವಿಲ್ಲ. ಆದರೆ, ಎಲ್ಲ ಕಾರ್ಖಾನೆಗಳ ಆರ್ಥಿಕ ಪರಿಸ್ಥಿತಿ, ಕಬ್ಬಿನ ಇಳುವರಿ ಹಾಗೂ ಸಕ್ಕರೆ ಉತ್ಪಾದನೆ ಒಂದೇ ರೀತಿಯಾಗಿಲ್ಲ. ಹೀಗಾಗಿ ಎಲ್ಲ ಕಾರ್ಖಾನೆಗಳಿಂದ ಏಕರೂಪದ ದರ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬಿನ ದರ ನಿಗದಿ ವಿಚಾರವಾಗಿ ರೈತರ ಹೋರಾಟ ಮೊದಲಿನಿಂದಲೂ ನಡೆಯುತ್ತ ಬಂದಿದೆ. ಈ ಹಿಂದೆ ಕಿಲೋಗೆ ₹45 ಸಕ್ಕರೆ ಮಾರಾಟ ದರದ ಆಧಾರದಲ್ಲಿ ಟನ್ ಕಬ್ಬಿಗೆ ₹3,600 ಮೂಲ ದರ ನಿಗದಿಪಡಿಸುವ ಸೂತ್ರ ರೂಪಿಸಲಾಗಿತ್ತು. ಇದೀಗ ₹50 ಸಕ್ಕರೆ ಮಾರಾಟ ದರದ ಆಧಾರದಲ್ಲಿ ಕಾರ್ಖಾನೆಗಳು ದರ ಘೋಷಿಸುತ್ತಿವೆ. ಲಾಭಾಂಶ ಹಂಚಿಕೆಯ ಸೂತ್ರವನ್ನೇ ಬಹುತೇಕ ಎಲ್ಲ ಕಾರ್ಖಾನೆಗಳು ಅನುಸರಿಸುತ್ತಿವೆ. ಸಕ್ಕರೆ ಮಾರಾಟದ ಬೆಲೆ ₹50 ದಾಟಿದರೆ ರೈತರಿಗೆ ಪ್ರತಿ ಟನ್‌ಗೆ ₹4,000 ದರ ದೊರೆಯುವ ವ್ಯವಸ್ಥೆಯಿದೆ ಎಂದು ತಿಳಿಸಿದರು.
ಸಕ್ಕರೆ ಬೆಲೆ ಹೆಚ್ಚಾದಂತೆ ರೈತರಿಗೂ ಅದರ ಲಾಭ ತಲುಪುವಂತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೀಗಾಗಿ ಆರಂಭಿಕ ದರ ಮಾತ್ರ ಪರಿಗಣಿಸದೆ, ಅಂತಿಮವಾಗಿ ರೈತರಿಗೆ ದೊರೆಯುವ ಒಟ್ಟು ಮೊತ್ತ ಗಮನಿಸಬೇಕು. ಕಬ್ಬಿನ ಇಳುವರಿ ಹಾಗೂ ಸಕ್ಕರೆ ರಿಕವರಿ ಆಧಾರದಲ್ಲಿ ಕಾರ್ಖಾನೆಗಳು ದರ ನೀಡುತ್ತವೆ. ಈ ಬಾರಿ ಕಬ್ಬಿನ ಇಳುವರಿ ಕಡಿಮೆ ಆಗಿರುವುದರಿಂದ ಕಾರ್ಖಾನೆಗಳ ನಡುವೆ ಕಬ್ಬು ಖರೀದಿಸಲು ಪೈಪೋಟಿ ಉಂಟಾಗಿದೆ. ಹೆಚ್ಚಿನ ದರ ನೀಡಲು ಸಾಧ್ಯವಿರುವ ಕಾರ್ಖಾನೆಗಳು ನೀಡಲಿ. ಆದರೆ, ಎಲ್ಲ ಕಾರ್ಖಾನೆಗಳು ಒಂದೇ ದರ ನೀಡಬೇಕು ಎನ್ನುವುದು ಕಾರ್ಯಸಾಧ್ಯವಲ್ಲ ಎಂದು ಅಭಿಪ್ರಾಯಪಟ್ಟರು.
ಮಹಾರಾಷ್ಟ್ರದಲ್ಲಿ ಮೊದಲಿನಿಂದಲೂ ಕರ್ನಾಟಕಕ್ಕಿಂತ ಹೆಚ್ಚಿನ ದರ ನೀಡುವ ಪದ್ಧತಿ ಇದೆ. ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಕಾರ್ಖಾನೆಗಳು ವಿಭಿನ್ನ ದರ ಘೋಷಿಸಿವೆ. ಕೇವಲ ಬೆಳಗಾವಿ ಜಿಲ್ಲೆಯಲ್ಲಷ್ಟೇ ಅಲ್ಲದೆ, ಕಲಬುರಗಿ, ಹಾವೇರಿ ಸೇರಿ ವಿವಿಧ ಜಿಲ್ಲೆಗಳಲ್ಲಿಯೂ ದರದಲ್ಲಿ ವ್ಯತ್ಯಾಸವಿದೆ. ಕಾರ್ಖಾನೆಗಳ ಆರ್ಥಿಕ ಸಾಮರ್ಥ್ಯ ಮತ್ತು ಸಕ್ಕರೆ ರಿಕವರಿ ಆಧರಿಸಿ ದರ ನಿರ್ಧಾರವಾಗುತ್ತದೆ ಎಂದರು.
ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಳಕ್ಕೆ ನ.26ರ ಗಡುವು ವಿಧಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಸಕ್ಕರೆ ಎಂಎಸ್‌ಪಿ ಹೆಚ್ಚಳದ ಬೇಡಿಕೆ ಪರಿಶೀಲಿಸಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ. ರೈತರ ಬೇಡಿಕೆಗಳನ್ನು ಸಮಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರವೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದು
ಬೆಳಗಾವಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಶಾಸಕ ಅಭಯ ಪಾಟೀಲ ನೀಡಿರುವ ಎಚ್ಚರಿಕೆಗೆ ಪ್ರತಿಕ್ರಿಯಿಸಿದ ಸಚಿವರು, ರಸ್ತೆ ನಿರ್ವಹಣೆ ಹಾಗೂ ಗುಂಡಿ ಮುಚ್ಚುವ ಜವಾಬ್ದಾರಿ ಮಹಾನಗರ ಪಾಲಿಕೆಯದ್ದಾಗಿದೆ. ಪ್ರತಿಭಟನೆಗೆ ಮುಂದಾಗುವ ಮೊದಲು ಪಾಲಿಕೆಯಲ್ಲಿ ಆಡಳಿತ ಯಾರ ಕೈಯಲ್ಲಿದೆ ಎಂಬುದನ್ನು ಶಾಸಕರು ತಿಳಿದುಕೊಳ್ಳಬೇಕು ಎಂದು ತಿರುಗೇಟು ನೀಡಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರಕ್ಕೆ ಶೇ.70ರಷ್ಟು ಅನುದಾನ ತೆಗೆದುಕೊಂಡು ಹೋಗಲಾಗಿತ್ತು. ಆದರೆ, ಉತ್ತರ ಕ್ಷೇತ್ರಕ್ಕೆ ಅಗತ್ಯ ಪ್ರಮಾಣದ ಅನುದಾನ ನೀಡಿರಲಿಲ್ಲ. ಆಗ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದವರು ಈಗ ರಸ್ತೆ ಗುಂಡಿಗಳ ವಿಚಾರವಾಗಿ ಪ್ರತಿಭಟನೆ ಎಚ್ಚರಿಕೆ ನೀಡುತ್ತಿರುವುದು ಸರಿಯಲ್ಲ. ಹಿಂದಿನ ಆಡಳಿತದ ಅವಧಿಯ ಅನುದಾನ ಹಂಚಿಕೆಯ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಪರೋಕ್ಷವಾಗಿ ಅಭಯ ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರತಿಯೊಂದು ವಿಚಾರಕ್ಕೂ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಪತ್ರ ಬರೆಯುವ ಬಿಜೆಪಿ ನಾಯಕರು, ರಾಜ್ಯಕ್ಕೆ ಕೇಂದ್ರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಧ್ವನಿ ಎತ್ತಬೇಕು. ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯಕ್ಕೆ ಕೇಂದ್ರದಿಂದ ಸುಮಾರು ₹10 ಸಾವಿರ ಕೋಟಿ ಅನುದಾನ ಬರಬೇಕಿದೆ. ಈ ಅನುದಾನ ಬಿಡುಗಡೆಗೆ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ತೆರಿಗೆ ಸೋರಿಕೆಗೆ ಕಡಿವಾಣ ಹಾಕಬೇಕು. ತೆರಿಗೆ ಸಂಗ್ರಹ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸಲು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ತೆರಿಗೆ ವ್ಯಾಪ್ತಿಯನ್ನು ವಿಸ್ತರಿಸಿ ಪಾಲಿಕೆಯ ಆದಾಯ ಹೆಚ್ಚಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕೆಂಬುದು ತಮ್ಮ ಅಭಿಪ್ರಾಯವಾಗಿದೆ. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಳಾಗಬೇಕೆಂಬ ಬೇಡಿಕೆಗಳಿವೆ. ಆದರೆ, ಅಧಿವೇಶನದ ಸಂದರ್ಭದಲ್ಲಿ ಬೈಲಹೊಂಗಲ, ಅಥಣಿ, ರಾಮದುರ್ಗ ಸೇರಿದಂತೆ ವಿವಿಧ ಭಾಗಗಳ ಜನರು ತಮ್ಮ ಪ್ರದೇಶಗಳನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಒತ್ತಾಯಿಸುತ್ತಾರೆ. ಹೀಗಾಗಿ ಜಿಲ್ಲೆ ವಿಭಜನೆ ಕುರಿತು ಎಲ್ಲರಲ್ಲೂ ಒಮ್ಮತ ಮೂಡುತ್ತಿಲ್ಲ. ಈ ವಿಚಾರದಲ್ಲಿ ಸಹಮತ ಮುಖ್ಯ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.