-ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ, ಆಕ್ರೋಶ
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಕೇಂದ್ರ ಗೃಹಸಚಿವ ಅಮಿತ್ ಶಾ ಲೋಕಸಭಾ ಕಾರ್ಯಕಲಾಪ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ಧಾರೆಂದು ಆರೋಪಿಸಿ ಚಳ್ಳಕೆರೆ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕರ ಭವನದಿಂದ ವಾಲ್ಮೀಕಿ ವೃತ್ತದ ಮೂಲಕ ಅಂಬೇಡ್ಕರ್ ವೃತ್ತದವರೆಗೂ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು,ಮುಖಂಡರು ಭಾಗವಹಿಸಿ ಅಮೀತ್ ಶಾ ವಿರುದ್ಧ ಧಿಕ್ಕಾರ ಕೂಗಿದರು. ಅಂಬೇಡ್ಕರ್ ಅವರನ್ನು ಅವಮಾನಿಸಿದ ಗೃಹಸಚಿವ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಛಲವಾದಿ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ: ಅಂಬೇಡ್ಕರ ಅವರನ್ನು ಅವಮಾನಿಸಿದ ಕೇಂದ್ರ ಗೃಹಸಚಿವ ಅಮೀತ್ ಶಾ ಅವರ ಭಾವಚಿತ್ರಕ್ಕೆ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಚಪ್ಪಲಿ ಸೇವೆ ನಡೆಸಿ, ಭಾವಚಿತ್ರ ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ದೇವರಾಜು, ಓಂಕಾರಮೂರ್ತಿ, ದೊಡ್ಡಲಿಂಗಪ್ಪ, ನಿಜಲಿಂಗಪ್ಪ, ಟಿ.ವಿಜಯಕುಮಾರ್, ಆನಂದ, ಲಕ್ಷ್ಮೀದೇವೆ, ಮಂಜುಳಮ್ಮ ಇದ್ದರು.
----ಪೋಟೋ: ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ವಿರುದ್ಧ ಪ್ರತಿಭಟಿಸಿ, ಮೆರವಣಿಗೆ ನಡೆಸಿದರು.