ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಲಿ

KannadaprabhaNewsNetwork |  
Published : Jul 02, 2026, 02:30 AM IST
(1ಎನ್.ಆರ್.ಡಿ7 ಕಾಂಗ್ರೇಸ ಪಕ್ಷದ ಕಾರ್ಯಕರ್ತರು ಹೆದ್ದಾರಿ ಬಂದ ಮಾಡಿ ಕೇಂದ್ರ ಶಿಕ್ಷಣ ಸಚಿವರ ರಾಜೇನಾಮೆಗೆ ಆಗ್ರಹಿಸಿದರು.)  | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ನರಗುಂದ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ಕೈವಾಡವಿದೆ. ಆದ್ದರಿಂದ ಸಚಿವರು ರಾಜೀನಾಮೆ ನೀಡಬೇಕೆಂದು ರಾಜ್ಯ ಕಾಂಗ್ರೆಸ್‌ ಪಕ್ಷದ ಮಾಧ್ಯಮ ವಕ್ತಾರ ಡಾ. ಸಂಗಮೇಶ ಕೊಳ್ಳಿ ಆಗ್ರಹಿಸಿದರು.

ಮಂಗಳವಾರ ಸಂಜೆ ಪಟ್ಟಣ ಶಿವಾಜಿ ವೃತ್ತದಲ್ಲಿ ಹುಬ್ಬಳ್ಳಿ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಮಾತನಾಡಿ, ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಮುಂದಿನ ಭವಿಷ್ಯಕ್ಕಾಗಿ ಹಗಲು- ರಾತ್ರಿ ಎನ್ನದೆ ಅಭ್ಯಾಸ ಮಾಡಿ ಪರೀಕ್ಷೆ ಬರೆದಿದ್ದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಭವಿಷ್ಯದ ಪ್ರಶ್ನೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ದೇಶದ ಪ್ರಧಾನಿಯವರು ನೀಟ್ ಪರೀಕ್ಷೆ ಪತ್ರ ಪೂರೈಕೆ ಮಾಡಲು ಸೈನಿಕರು ಮತ್ತು ಹೆಲಿಕಾಪ್ಟರ್ ಬಳಕೆ ಮಾಡಿದ್ದು ಸರಿಯಾದ ಕ್ರಮವಲ್ಲವೆಂದರು.

ಕೇಂದ್ರ ಸರ್ಕಾರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಸವರಡ್ಡಿ ರಾಯರಡ್ಡಿ, ಅಣ್ಣಪ್ಪಗೌಡ ಪಾಟೀಲ, ಶಿವಾನಂದ ಬನಹಟ್ಟಿ, ಕಲ್ಲನಗೌಡ ತಿಪ್ಪನಗೌಡ್ರ, ಬಸವರಾಜ ಶಲ್ಲಿಕೇರಿ, ಕರವೇ ಘಟಕದ ಅಧ್ಯಕ್ಷ ನಬಿಸಾಬ ಕಿಲ್ಲೇದಾರ, ವಿನಯ ಪಾಟೀಲ, ದೊಡ್ಡಪ್ಪ ಮಾದರ, ಮಲ್ಲನಗೌಡ ಯಲ್ಲಪ್ಪಗೌಡ್ರ, ಎಚ್.ಎನ್. ಹಳಕಟ್ಟಿ, ಸುಭಾಸ ಬಾಬರ, ಪರ್ವತಗೌಡ ಹಿರೇಗೌಡ್ರ, ಗುರುಲಿಂಗಪ್ಪ ಪಡವೀರ, ಶಿವರಡ್ಡಿ ಕೊಪ್ಪದ, ಪಿ.ಎಚ್. ಹಿರೇಗೌಡ್ರ, ಬಸನಗೌಡ ಕರಿಗೌಡ್ರ, ರಾಜೇಶರಡ್ಡಿ ಹಂಚಿನಾಳ ಇದ್ದರು.ಇಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಜು. 2ರಂದು ಬೆಳಗ್ಗೆ 11ಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು. ಶಾಸಕ ಎಚ್.ಕೆ. ಪಾಟೀಲ ಉದ್ಘಾಟನೆ ಮಾಡುವರು. ಮುಖ್ಯ ಅತಿಥಿಗಳಾಗಿ ಸಲೀಂ ಅಹ್ಮದ್, ಜಿ.ಎಸ್. ಪಾಟೀಲ್, ಬಸವರಾಜ ಬೊಮ್ಮಾಯಿ, ಪಿ.ಸಿ. ಗದ್ದಿಗೌಡರ, ಡಿ.ಆರ್. ಪಾಟೀಲ್, ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಮುಂತಾದವರು ಆಗಮಿಸುವರು. ಅಶೋಕ ಬರಗುಂಡಿ ಉಪನ್ಯಾಸ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವಿಭಾಷಾ ಮಾಧ್ಯಮ ಜಾರಿ ಮುನ್ನ ಚರ್ಚೆ ಆಗಲಿ
ಅಂಜುಮನ್ ತಾಂತ್ರಿಕ ಕಾಲೇಜಿನಲ್ಲಿ ಪದವಿ ಪ್ರದಾನ