ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಉಮೇಶ ಮರ್ಚಪ್ಪನವರ ಮಾತನಾಡಿ, ಈ ರೀತಿ ಸರ್ಕಾರದ ಬೇಜವಾಬ್ದಾರಿಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಪ್ರತಿಭಾವಂತ ವಿದ್ಯಾಥಿಗಳಿಗೆ ಅನ್ಯಾಯವಾಗಿದೆ ಎಂದರು.
ನರಗುಂದ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯುವಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ತಾಲೂಕು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಚನ್ನು ನಂದಿ ಆಗ್ರಹಿಸಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ತಹಸೀಲ್ದಾರ್‌ಗೆ ಮನವಿ ನೀಡಿ ಆನಂತರ ಅವರು ಮಾತನಾಡಿದರು. ಹಗಲು - ರಾತ್ರಿ ಎನ್ನದೆ ಓದಿ, ಕಷ್ಟಪಟ್ಟು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿರುತ್ತಾರೆ. ಕೆಲವು ಮಾಫಿಯಾ ಸೇರಿಕೊಂಡು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮಾಡುತ್ತಿವೆ. ಅದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಪತ್ತೆ ಮಾಡಿ, ಕಠಿಣ ಶಿಕ್ಷೆ ನೀಡಬೇಕು ಎಂದು ಹೇಳಿದರು.
ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಉಮೇಶ ಮರ್ಚಪ್ಪನವರ ಮಾತನಾಡಿ, ಈ ರೀತಿ ಸರ್ಕಾರದ ಬೇಜವಾಬ್ದಾರಿಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಪ್ರತಿಭಾವಂತ ವಿದ್ಯಾಥಿಗಳಿಗೆ ಅನ್ಯಾಯವಾಗಿದೆ. ಆದ್ದರಿಂದ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಸಬೇಕು ಎಂದು ಆಗ್ರಹಿಸಿದರು.
ಉಪತಹಸೀಲ್ದಾರ್ ಪರಶುರಾಮ ಕಲಾಲ ಮನವಿ ಸ್ವೀಕರಿಸಿದರು. ಮಹಾಂತೇಶ ತಳವಾರ, ಈರಪ್ಪ ಮಣ್ಣೂರ, ಬಸವರಾಜ ಚವಡಿ, ವಿಠ್ಠಲ ಮುಧೋಳೆ ಇದ್ದರು. ಬಣ್ಣದ ಕಲಾಮೇಳದಿಂದ ದೊಡ್ಡಾಟ ಪ್ರದರ್ಶನ ನಾಳೆ
ಗದಗ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಬಿ.ಬಿ. ಬಣ್ಣದ ಜಾನಪದ ಕಲಾಮೇಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದಲ್ಲಿ ದೊಡ್ಡಾಟ ಹಾಗೂ ಸನ್ಮಾನ ಸಮಾರಂಭ ಜು. 26ರಂದು ಸಂಜೆ 6ಕ್ಕೆ ಬೆಟಗೇರಿಯ ಕಮಲವ್ವ ಬೆನಕಪ್ಪ ಬಣ್ಣದ ಕಲ್ಯಾಣಮಂಟಪದಲ್ಲಿ ಜರುಗಲಿದೆ.ಉದ್ಘಾಟಕರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಆಗಮಿಸುವರು. ಅತಿಥಿಗಳಾಗಿ ರಂಗಭೂಮಿ ಕಲಾವಿದ ವಿಜಯಕುಮಾರ ಜಿತೂರಿ, ಮಹೇಶ ಕೋಟಿ ಪಾಲ್ಗೊಳ್ಳುವರು. ಅಧ್ಯಕ್ಷತೆಯನ್ನು ಕಲಾಮೇಳದ ಅಧ್ಯಕ್ಷ ಅಶೋಕ ಬಣ್ಣದ ವಹಿಸಲಿದ್ದಾರೆ. ಸನ್ಮಾನಿತರಾಗಿ ದೊಡ್ಡಾಟದ ಹಿರಿಯ ಕಲಾವಿದ ವೀರುಪಾಕ್ಷಪ್ಪ ಚಿಡಗುಂಟಿ, ಹಾರ್ಮೋನಿಯಂ ಕಲಾವಿದ ನಿಜಲಿಂಗಪ್ಪ ಕರಬಿಷ್ಠಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ಸಂಜೆ 6.30ಕ್ಕೆ ಶ್ರೀದೇವಿ ಮಹಾತ್ಮೆ ಅರ್ಥಾತ್ ಮಹಿಷಾಸುರ ಸಂಹಾರ ಎಂಬ ದೊಡ್ಡಾಟ ರಾಮಣ್ಣ ಶೆಡ್ಡಿ ಹಾಗೂ ಸಂಗಡಿಗರಿಂದ ಪ್ರದರ್ಶನಗೊಳ್ಳಲಿದೆ ಎಂದು ಕಲಾಮೇಳದ ಅಧ್ಯಕ್ಷ ಅಶೋಕ ಬಣ್ಣದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.