ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅದ್ಧೂರಿ ಸ್ವಾಗತ

KannadaprabhaNewsNetwork | Published : Jun 16, 2024 1:52 AM

ಸಾರಾಂಶ

ಬೆಂಗಳೂರು - ಮೈಸೂರು ಹೆದ್ದಾರಿಯ ರಸ್ತೆಗಳ ಇಕ್ಕೆಲಗಳಲ್ಲಿ ಸೇರಿದ್ದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ನಂತರ ಪ್ರವಾಸಿ ಮಂದಿರ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಸಂಸದರಾದ ಬಳಿಕ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಪ್ರಥಮ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕಾರ್‍ಯಕರ್ತರು ಶನಿವಾರ ಅದ್ಧೂರಿ ಸ್ವಾಗತ ನೀಡಿದರು.

ರಾಮನಗರ ಜಿಲ್ಲೆ ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಮುಗಿಸಿದ ನಂತರ ಸಂಜೆ 4 ಗಂಟೆ ಸುಮಾರಿಗೆ ಜಿಲ್ಲೆಯ ಗಡಿ ಭಾಗ ತಾಲೂಕಿನ ನಿಡಘಟ್ಟ ಗ್ರಾಮದ ಬಳಿಗೆ ಆಗಮಿಸಿದ ಸಚಿವ ಕುಮಾರಸ್ವಾಮಿ ಅವರಿಗೆ ಜಾನಪದ ಕಲಾತಂಡ, ಪಟಾಕಿ ಸಿಡಿಸಿ, ಮೈಸೂರು ಪೇಟ ತೊಡಿಸಿ ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಹಾಕಿ ಪುಷ್ಪವೃಷ್ಟಿಗೈದು ಬರಮಾಡಿಕೊಂಡರು.

ನಂತರ ನಿಡಘಟ್ಟ ಗಡಿ ಭಾಗದಿಂದ ಸಹಸ್ರಾರು ಕಾರ್‍ಯಕರ್ತರು ಬೈಕ್ ರ್‍ಯಾಲಿ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕುಮಾರಸ್ವಾಮಿ ಅವರನ್ನು ನಿಡಘಟ್ಟ, ರುದ್ರಾಕ್ಷಿಪುರ ಗೇಟ್, ಸೋಮನಹಳ್ಳಿ, ಕೆಸ್ತೂರು ಕ್ರಾಸ್, ಶಿವಪುರ ಸತ್ಯಾಗ್ರಹ ಸೌಧ, ಕೊಪ್ಪ ಸರ್ಕಲ್, ಕೊಲ್ಲಿ ವೃತ್ತ, ತಾಲೂಕು ಕಚೇರಿ ಹಾಗೂ ಪ್ರವಾಸಿ ಮಂದಿರ ವೃತ್ತದವರೆಗೆ ಆಗಮಿಸಿದರು.

ಬೆಂಗಳೂರು - ಮೈಸೂರು ಹೆದ್ದಾರಿಯ ರಸ್ತೆಗಳ ಇಕ್ಕೆಲಗಳಲ್ಲಿ ಸೇರಿದ್ದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ನಂತರ ಪ್ರವಾಸಿ ಮಂದಿರ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.

ಇದೇ ವೇಳೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ರಾಜ್ಯಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ, ಡಾ. ಕೆ. ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಎನ್.ಎಸ್. ಇಂದ್ರೇಶ್, ಜೆಡಿಎಸ್ ಅಧ್ಯಕ್ಷ ಡಿ. ರಮೇಶ್, ಮುಖಂಡರಾದ ಅಮರಾವತಿ ಚಂದ್ರಶೇಖರ್, ಎಸ್.ಪಿ. ಸ್ವಾಮಿ, ಗುರುಚರಣ್, ಅಬ್ಬಾಸ್ ಆಲಿ ಬೋಹ್ರಾ ತೆರೆದ ವಾಹನದಲ್ಲಿ ಎಚ್ಡಿಕೆಗೆ ಸಾಥ್ ನೀಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಸಂದರ್ಶ, ಮನ್ಮುಲ್ ನಿರ್ದೇಶಕಿ ರೂಪಾ, ಪುರಸಭಾ ಸದಸ್ಯರಾದ ಮಹೇಶ್, ಟಿ.ಆರ್. ಪ್ರಸನ್ನಕುಮಾರ್, ಎಂ.ವೈ. ಪ್ರವೀಣ್, ಪ್ರಿಯಾಂಕ ಅಪ್ಪುಗೌಡ, ವನಿತಾ, ಸುಮಿತ್ರಾ, ಜೆಡಿಎಸ್ ರಾಜ್ಯ ಪ್ರಧಾನ ಕಾರ್‍ಯದರ್ಶಿ ಬಿಳಿಯಪ್ಪ, ತಾಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಉಪಾಧ್ಯಕ್ಷ ದೇವರಹಳ್ಳಿ ವೆಂಕಟೇಶ್, ಕಾರ್‍ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ರಾಮಚಂದ್ರಶೆಟ್ಟಿ, ಮುಖಂಡರಾದ ಕೆ.ಟಿ. ರಾಜಣ್ಣ, ಕರಟಗೆರೆ ಹನುಮಂತು, ಕೂಳಗೆರೆ ಶೇಖರ್, ಬಿಜೆಪಿ ಮುಖಂಡರಾದ ಬಿ.ಸಿ. ಮಹೇಂದ್ರ, ರವಿ, ಮಹದೇವು, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವು, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಘು, ಸತೀಶ್, ಕೆಂಪಬೋರಯ್ಯ, ಪೂರ್ಣಿಮಾ ಎಂ.ಎಚ್. ಜಗನ್ನಾಥ್ ಮೈತ್ರಿ ಪಕ್ಷದ ಮುಖಂಡರು ಇದ್ದರು.

Share this article