ಪಾಂಡವಪುರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

KannadaprabhaNewsNetwork | Published : Jul 15, 2024 1:59 AM

ಸಾರಾಂಶ

ಪಾಂಡವಪುರ ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಬೃಹತ್ ಸೇಬಿನ ಹಾರಹಾಕಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆಯಲ್ಲಿ ಅವರನ್ನು ಜಾನಪದ ಕಲಾ ತಂಡಗಳು, ಪೂಜಾ ಕುಣಿತದೊಂದಿಗೆ ವೇದಿಕೆಗೆ ಕರೆತರಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಅಭಿಮಾನಿಗಳು ಘೋಷಣೆ ಮೊಳಗಿಸಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಅಭಿನಂದನಾ ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಪಟ್ಟಣದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಬೃಹತ್ ಸೇಬಿನ ಹಾರಹಾಕಿ ಸ್ವಾಗತಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆಯಲ್ಲಿ ಎಚ್ಡಿಕೆ ಅವರನ್ನು ಜಾನಪದ ಕಲಾ ತಂಡಗಳು, ಪೂಜಾ ಕುಣಿತದೊಂದಿಗೆ ವೇದಿಕೆಗೆ ಕರೆತರಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಅಭಿಮಾನಿಗಳು ಎಚ್.ಡಿ.ಕುಮಾರಸ್ವಾಮಿ ಪರ ಘೋಷಣೆ ಮೊಳಗಿಸಿದರು.

ನಂತರ ಮಂಡ್ಯ ಸಂಸದರು ಆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಶ್ರೀಕೃಷ್ಣನ ವಿಗ್ರಹ ನೀಡಿ ಎಚ್‌ಡಿಕೆ ಅವರನ್ನು ಸನ್ಮಾನಿಸಿ ಅಭಿನಂಧಿಸಲಾಯಿತು. ಇದೇ ವೇಳೆ ಸಚಿವ ಎಚ್ಡಿಕೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

ಸಮಾವೇಶಕ್ಕೆ ಆಗಮಿಸಿದ್ದ ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರಿಗೆ ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು. ಊಟಕ್ಕಾಗಿ ಐದು ಕೌಂಟರ್‌ಗಳನ್ನು ತೆರೆಯಲಾಗಿತ್ತು.

ಬೆಳಗ್ಗೆ 11.30ಕ್ಕೆ ಆರಂಭಗೊಂಡ ಊಟ ಸಂಜೆವರೆಗೂ ನಡೆಯಿತು. ಪಾಂಡವ ಕ್ರೀಡಾಂಗಣದಲ್ಲಿ ಸಸ್ಯಹಾರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸುಮಾರು 35 ರಿಂದ 40 ಸಾವಿರಕ್ಕೂ ಅಧಿಕ ಮಂದಿ ಭರ್ಜರಿ ಭೋಜನ ಸವಿದರು.

ಶಾಸಕರಾದ ಜಿ.ಟಿ.ದೇವೇಗೌಡ, ಎಚ್.ಟಿ.ಮಂಜು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ, ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾ.ರಾ.ಮಹೇಶ್, ಕೆ.ಸಿ.ನಾರಾಯಣಗೌಡ, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕ ಕೆ.ಅನ್ನದಾನಿ, ಜಿ.ಬಿ.ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮುಖಂಡರಾದ ಮನ್‌ಮುಲ್ ರಾಮಚಂದ್ರು, ನಲ್ಲಿಗೆರೆಬಾಲು, ಅಮರಾವತಿ ಚಂದ್ರಶೇಖರ್, ಮದ್ದೂರಸ್ವಾಮಿ, ಜಿಪಂ ಮಾಜಿ ಸದಸ್ಯರಾದ ಸಿ.ಅಶೋಕ್, ಎಚ್.ಮಂಜುನಾಥ್, ಬಿಜೆಪಿ ಮಹಿಳಾಧ್ಯಕ್ಷೆ ಮಂಗಳನವೀನ್, ಎಸ್.ಎ.ಮಲ್ಲೇಶ್, ಧನಂಜಯ್. ಗವೀಗೌಡ, ಡಿ.ಶ್ರೀನಿವಾಸ್, ಉದ್ಯಮಿ ಹುಲ್ಕೆರೆಕೊಪ್ಪಲು ಮಧುಸೂದನ್ ಸೇರಿದಂತೆ ಪುರಸಭೆ ಸದಸ್ಯರು ಹಾಗೂ ಮುಖಂಡರು ಭಾಗವಹಿಸಿದ್ದರು.15 ಸಾವಿರ ಕಿಕ್‌ ಬ್ಯಾಕ್‌: ಎಚ್‌ಡಿಕೆ ಆರೋಪ

ಕನ್ನಡಪ್ರಭ ವಾರ್ತೆ ಪಾಂಡವಪುರಬೆಂಗಳೂರಿನಲ್ಲಿ‌ ಕಸ ಎತ್ತಲು ಕಪ್ಪುಪಟ್ಟಿಯಲ್ಲಿರುವ ಗುತ್ತಿಗೆದಾರನಿಗೆ ಟೆಂಡರ್ ಕೊಟ್ಟು 15 ಸಾವಿರ ಕೋಟಿ ರು. ಕಿಕ್‌ಬ್ಯಾಕ್‌ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

ಪಟ್ಟಣದಲ್ಲಿ ನಾಗರಿಕ ಸನ್ಮಾನ ಸ್ವೀಕರಿಸಿ ಮಾತನಾಡಿ, ಕಸ ಎತ್ತುವುದಕ್ಕೆ 30 ವರ್ಷ ಗುತ್ತಿಗೆ ನೀಡಿದ್ದಾರೆ. 45 ಸಾವಿರ ಕೋಟಿ ರು.ಗೆ ಟೆಂಡರ್‌ ಕೊಟ್ಟು ಅದರಲ್ಲೂ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರೇಳದೆ ಟೀಕಿಸಿದರು.

Share this article