ಕನ್ನಡಪ್ರಭ ವಾರ್ತೆ ಕನಕಪುರ
ಕೇಕ್ ಕತ್ತರಿಸಿ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಜೆಡಿಎಸ್ ಅಧ್ಯಕ್ಷ ನಾಗರಾಜು, ದಲಿತರ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಆಶಾಕಿರಣವಾಗಿರುವ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಕೇಂದ್ರ ಮಂತ್ರಿಗಳಾಗಿದ್ದು, ರಾಜ್ಯಕ್ಕೆ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲು ತಾಯಿ ಚಾಮುಂಡೇಶ್ವರಿ ಅವರಿಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಚಿನ್ನಸ್ವಾಮಿ ಮಾತನಾಡಿ, ನಮ್ಮ ನಾಯಕರಾದ ಎಚ್‌ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬವನ್ನು ಬಿಜೆಪಿ ಹಾಗೂ ನಮ್ಮ ಜೆಡಿಎಸ್ ನ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿ ಆಚರಿಸುತ್ತಿರುವುದು ಎಲ್ಲರಿಗೂ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕುಮಾರಣ್ಣನವರು ರಾಜ್ಯದ ಮುಖ್ಯಮಂತ್ರಿಯಾಗಲೆಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ನೀಡಲಿ ಎಂದು ತಿಳಿಸಿದರು,ತಾಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಮಾತನಾಡಿ, ಕುಮಾರಣ್ಣನವರ ಹುಟ್ಟುಹಬ್ಬಕ್ಕೆ ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ರಕ್ತದಾನ ಮಾಡುತ್ತಿರುವುದು ಸಂತಸ ತಂದಿದೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲು ಹಾಗೂ ದೀನ ದಲಿತರಿಗೆ ನೆರವಾಗಲು ದೇವರು ಅವರಿಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಹಾರೈಸಿದರು.
ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ:
ಕೂತಗಾನಹಳ್ಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಹುಣಸನಹಳ್ಳಿ ಅತೀಬ್ ಅವರ ಜೊತೆ ಸುಮಾರು 15ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ತಾಲೂಕು ಅಧ್ಯಕ್ಷ ಬಿ ನಾಗರಾಜು ಸಮ್ಮುಖದಲ್ಲಿ ಇದೇ ವೇಳೆ ಸೇರ್ಪಡೆಗೊಂಡರು.