ಕೇಂದ್ರ ಸಚಿವ ಎಚ್ಡಿಕೆ ಆರೋಪಗಳಿಗೆ ತಲೆ-ಬಾಲವಿಲ್ಲ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Oct 01, 2026, 02:00 AM IST
30ಕೆಎಂಎನ್ ಡಿ20  | Kannada Prabha

ಸಾರಾಂಶ

ಕುಮಾರಸ್ವಾಮಿ ಅವರ ಆರೋಪಗಳಿಗೆ ತಲೆ-ಬಾಲವಿಲ್ಲ. ಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಯಮ ಕ್ಷೇತ್ರದಲ್ಲಿದ್ದಾರೆ. ಕಾನೂನು ಬದ್ಧವಾಗಿ ಆಸ್ತಿ ಸಂಪಾದಿಸಿದ್ದಾರೆ. ರಾಜಕೀಯಕ್ಕೆ ಬರುವುದಕ್ಕೂ ಮೊದಲೇ ಉದ್ಯಮಿಯಾಗಿದ್ದರು. ದೇಶದಲ್ಲಿ ಹಲವು ಉದ್ಯಮಿಗಳು ಸಾವಿರಾರು ಕೋಟಿ ರು. ಆಸ್ತಿ ಹೊಂದಿದ್ದು, ₹1,400 ಕೋಟಿ ಏನು ದೊಡ್ಡ ಮೊತ್ತವಲ್ಲ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲಾಗದೆ ಎಚ್.ಡಿ.ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆಯಲ್ಲಿ ₹3 ಲಕ್ಷ ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ ಎಂದು ಆರೋಪಿಸುತ್ತಿದ್ದಾರೆ ಕೆ.ಎಂ.ಉದಯ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಮೀಪದ ಬಿದರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸಿಎಂ ಆಗಿರುವುದನ್ನು ಸಹಿಸಲಾಗದೆ ಹತಾಶೆಯಿಂದ ಈ ರೀತಿಯ ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಮಹಾನ್ ಸುಳ್ಳುಗಾರ. ಅವರು ಮೊದಲು ₹3 ಲಕ್ಷ ಕೋಟಿಗೆ ಎಷ್ಟು ಸೊನ್ನೆಗಳಿವೆ ಎಂಬುದನ್ನು ಮೊದಲು ತಿಳಿಸಿ ಆ ಮೇಲೆ ಅದರ ಬಗ್ಗೆ ಮಾತನಾಡಲಿ ಎಂದರು.

ಕುಮಾರಸ್ವಾಮಿ ಅವರ ಆರೋಪಗಳಿಗೆ ತಲೆ-ಬಾಲವಿಲ್ಲ. ಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಯಮ ಕ್ಷೇತ್ರದಲ್ಲಿದ್ದಾರೆ. ಕಾನೂನು ಬದ್ಧವಾಗಿ ಆಸ್ತಿ ಸಂಪಾದಿಸಿದ್ದಾರೆ. ರಾಜಕೀಯಕ್ಕೆ ಬರುವುದಕ್ಕೂ ಮೊದಲೇ ಉದ್ಯಮಿಯಾಗಿದ್ದರು ಎಂದರು.

ದೇಶದಲ್ಲಿ ಹಲವು ಉದ್ಯಮಿಗಳು ಸಾವಿರಾರು ಕೋಟಿ ರು. ಆಸ್ತಿ ಹೊಂದಿದ್ದು, ₹1,400 ಕೋಟಿ ಏನು ದೊಡ್ಡ ಮೊತ್ತವಲ್ಲ. ಅವರು ಉದ್ಯಮ ಕ್ಷೇತ್ರದಲ್ಲಿ ಕಾನೂನು ಚೌಕಟ್ಟಿನಲ್ಲಿಯೇ ಆಸ್ತಿ ಸಂಪಾದಿಸಿದ್ದಾರೆ. ಆರೋಪ ಮಾಡುತ್ತಿರುವವರು ಇ.ಡಿ. ಅಧಿಕಾರಿಗಳಲ್ಲ. ಹೀಗಾಗಿ ಅವರಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು.

ಅಸ್ತಿತ್ವ ಕಳೆದುಕೊಳ್ಳುವ ಭಯದಿಂದ ಯಾತ್ರೆ:

ಜೆಡಿಎಸ್ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ವಾಭಿಮಾನದ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ಅಪ್ಪ-ಮಕ್ಕಳಿಗೆ ನಿದ್ರೆ ಬರುತ್ತಿಲ್ಲ. ತಮ್ಮ ಅಸ್ತಿತ್ವವೇ ಕಳೆದುಹೋಗುತ್ತದೆ ಎಂಬ ಭಯದಿಂದ ಯಾತ್ರೆ ಮಾಡುತ್ತಿದ್ದಾನೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಲವು ಹಂತ ದಾಟಿಕೊಂಡು ಒಂದು ಹಂತಕ್ಕೆ ತಲುಪಿದ್ದಾರೆ. ರಾಜ್ಯದಲ್ಲಿ ವೇಗವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ದೇಶಾದ್ಯಂತ ಜನಾಭಿಪ್ರಾಯವೂ ಉತ್ತಮವಾಗಿದೆ. ಇದನ್ನು ಸಹಿಸಿಕೊಳ್ಳಲಾಗದೆ ವಿರೋಧಿಗಳು ಈ ರೀತಿ ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯಲು ಮಹತ್ವದ ಹೆಜ್ಜೆ: ಕೆ.ಎಂ.ಉದಯ್

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಗ್ರಾಮೀಣ ಜನರಿಗೆ ಪ್ರಾಥಮಿಕ ಹಂತದಲ್ಲೇ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಈ ಆರೋಗ್ಯ ಕೇಂದ್ರ ಮಹತ್ವದ ಹೆಜ್ಜೆಯಾಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಸಮೀಪದ ಬಿದರಹಳ್ಳಿ ಮತ್ತು ಕರಡಕೆರೆ ಗ್ರಾಮದಲ್ಲಿ ಸುಮಾರು ₹1.30 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮೀಣ ಹಾಗೂ ಹಿಂದುಳಿದ ಭಾಗಗಳಲ್ಲಿ ವಾಸಿಸುವ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ದೂರದ ಪಟ್ಟಣ ಹಾಗೂ ನಗರ ಪ್ರದೇಶಗಳ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇದ್ದು, ಅದನ್ನು ನಿವಾರಿಸಲು ಆಯುಷ್ಮಾನ್ ಆರೋಗ್ಯ ಕೇಂದ್ರ ಸಹಕಾರಿಯಾಗಲಿದೆ ಎಂದರು.

ಈ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ, ರಕ್ತದೊತ್ತಡ, ಮಧುಮೇಹ ಹಾಗೂ ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳ ಆರಂಭಿಕ ತಪಾಸಣೆ ನಡೆಸಲಾಗುವುದು. ಅಗತ್ಯ ಮೂಲ ಔಷಧಿಗಳು ಹಾಗೂ ವೈದ್ಯಕೀಯ ಸಾಮಗ್ರಿಗಳು ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮನ್ಮುಲ್ ನಿರ್ದೇಶಕ ಎ.ಎಸ್.ರಾಜೀವ್, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಬಿ.ಬಸವರಾಜು, ತಾಲೂಕು ವೈದ್ಯಾಧಿಕಾರಿ ರವಿಶಂಕರ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹರ್ಷ, ಮುಖಂಡರಾದ ಯಡಹಗನಹಳ್ಳಿ ಕೆಂಚೇಗೌಡ, ಬೊಮ್ಮೇಗೌಡ, ಮೊಳ್ಳಲಿಂಗೇಗೌಡ, ಕೆ.ಶೆಟ್ಟಹಳ್ಳಿ ರಘು, ಮನು, ಬೋರೇಗೌಡ, ಚಿಕ್ಕಹನುಮಯ್ಯ, ವೆಂಕಟೇಶ್, ಶ್ರೀಧರ್, ಗೋವಿಂದ, ಪ್ರೇಮರಾಜ್, ಹನುಮೇಶ, ನಿಂಗಯ್ಯ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮಸ್ಥಳ ವಿರುದ್ಧ ಆರೋಪಕ್ಕೆ ಪೊಲೀಸ್ ದಾಖಲೆ ಉತ್ತರ!
ಬಿಕೆ ಚುನಾವಣೆಯಲ್ಲಿ ಗೆದ್ದಿದ್ದಾರಾ? : ಬಿವೈವಿ