ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಎದುರು ಸೇರಿದ ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ನೇತೃತ್ವದಲ್ಲಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ನೆಚ್ಚಿನ ನಾಯಕನ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು.
ಬಳಿಕ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಮಾತನಾಡಿ, ಮುಖ್ಯಮಂತ್ರಿಗಳಾಗಿ ರಾಜ್ಯದ ಜನರ ಸೇವೆ ಮಾಡಿ ನಂತರ ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಎಚ್ಡಿಕೆ ಅವರ ಅಭಿಮಾನಿಗಳು ಹಾಗೂ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿ ಶುಭಕೋರಿದ್ದೇವೆ ಎಂದರು.ಎಚ್ಡಿಕೆ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮನ್ನಾ ಸೇರಿದಂತೆ ಹಲವು ಮಹತ್ತರ ಯೋಜನೆ ಜಾರಿಗೆ ತರುವ ಮೂಲಕ ರಾಜ್ಯವನ್ನು ಅಭಿವೃದ್ಧಿ ಪಡಿಸಿದ್ದಾರೆ. ಕೇಂದ್ರ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಯಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಹೃದಯ ಹೊಂದಿರುವ ಕುಮಾರಸ್ವಾಮಿ ಅವರಿಗೆ ತಾಯಿ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ ಎಂದು ಕೋರಿದರು.
ಈ ವೇಳೆ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಾಡೆಗಿರೀಶ್, ನಿರ್ದೇಶಕರಾದ ವಿ.ಎಸ್.ನಿಂಗೇಗೌಡ, ಆದರ್ಶ, ಪುರಸಭೆ ಮಾಜಿ ಅಧ್ಯಕ್ಷರಾದ ಆರ್.ಸೋಮಶೇಖರ್, ಎಂ.ಗಿರೀಶ್, ಮಾಜಿ ಸದಸ್ಯರಾದ ಚಂದ್ರು, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್, ಮುಖಂಡರಾದ ಶಿಂಢಬೋಗನಹಳ್ಳಿ ನಾಗಣ್ಣ, ಮಾಣಿಕ್ಯನಹಳ್ಳಿ ಅಶೋಕ್, ಚಿಕ್ಕಾಡೆ ಚೇತನ್, ಅರಕನಕೆರೆ ಮಂಜುನಾಥ್, ಬಲರಾಮೇಗೌಡ, ರಾಜೇಶ್, ಅಲ್ಪಳ್ಳಿ ಗೋವಿಂದಯ್ಯ, ಬೊಮ್ಮರಾಜು, ಕಣಿವೆ ಯೋಗೇಶ್, ಬಿ.ಎಸ್.ಜಯರಾಮು, ಸಗಾಯಂ, ಸೋಬಾನೆ ರಾಜೇಶ್, ಅರಳಕುಪ್ಪೆ ಪ್ರಶಾಂತ್, ಶಶಿಕುಮಾರ್, ಗುರು, ನಟರಾಜು ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಇದ್ದರು.