ಕೇಂದ್ರ ಸಚಿವ ಎಚ್ಡಿಕೆ ತಾಲೂಕಿನ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಿ: ಮರುವನಹಳ್ಳಿ ಶಂಕರ್

KannadaprabhaNewsNetwork |  
Published : Jul 17, 2024, 12:55 AM IST
16ಕೆಎಂಎನ್ ಡಿ16 | Kannada Prabha

ಸಾರಾಂಶ

ಕೆ.ಆರ್.ಪೇಟೆ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಪಟ್ಟಣದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಬಹುಕಾಲದಿಂದ ನೆನಗುದಿಗೆ ಬಿದ್ದಿರುವ ಶ್ರೀರಂಗಪಟ್ಟಣ- ಕೆ.ಆರ್.ಪೇಟೆ - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮಂಡ್ಯ ಜಿಲ್ಲಾ ಸಂಸದರೂ ಆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಟ್ಟಣ ಸೇರಿದಂತೆ ತಾಲೂಕಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರುವಂತೆ ಜಿಲ್ಲಾ ರೈತಸಂಘದ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆ.ಆರ್.ಪೇಟೆ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಪಟ್ಟಣದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಬಹುಕಾಲದಿಂದ ನೆನಗುದಿಗೆ ಬಿದ್ದಿರುವ ಶ್ರೀರಂಗಪಟ್ಟಣ- ಕೆ.ಆರ್.ಪೇಟೆ - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪಾಂಡವಪುರ- ಕೆ.ಆರ್.ಪೇಟೆ- ಚನ್ನರಾಯಪಟ್ಟಣ ಹೊಸ ರೈಲು ಮಾರ್ಗದ ಅಗತ್ಯತೆ ಇದ್ದು, ಇದು ತಾಲೂಕಿನ ಜನತೆ ಬಹುದಿನಗಳ ಬೇಡಿಕೆಯಾಗಿದೆ. ನೂತನ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕೆ ಕ್ರಮ ವಹಿಸಬೇಕು ಎಂದು ಕೋರಿದ್ದಾರೆ.

ಪಟ್ಟಣದಲ್ಲಿ ತೆಂಗು, ಎಳನೀರು, ಅಡಿಕೆ, ಹಣ್ಣು ಮತ್ತು ತರಕಾರಿಗಳ ಮಾರುಕಟ್ಟೆ ಇದೆ. ಆದರೆ, ಸೌಲಭ್ಯಗಳಿಂದ ವಂಚಿತವಾಗಿದೆ.ಕೆರೆ ಮತ್ತು ಕೊಳವೆಬಾವಿ ಆಶ್ರಿತ ರೈತರು ಹೂವು ಮತ್ತು ತರಕಾರಿಗಳನ್ನು ಹೇರಳವಾಗಿ ಬೆಳೆಯುತ್ತಿದ್ದಾರೆ. ಇದರ ಸಂರಕ್ಷಣೆಗೆ ಅಗತ್ಯವಾದ ಕೋಲ್ಡ್ ಸ್ಟೋರೇಜ್ ಘಟಕದ ಅವಶ್ಯಕತೆಯಿದೆ. ಶೀಥಲೀಕರಣ ಘಟಕ ಸ್ಥಾಪನೆಗೆ ಸಂಸದರು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಹೀಗಾಗಿ ಕಾಂಗ್ರೆಸ್ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿಲ್ಲ. ಆದ್ದರಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ತಾಲೂಕಿಗೆ ಹೇಮೆ ನೀರು ಹರಿಸಲು ತಾರತಮ್ಯ ನೀತಿ ಅನುಸರಿಸಿವೆ. ಈಗಾಗಲೇ ಕೆಆರ್‌ಎಸ್‌ನಿಂದ ವಿಸಿ ನಾಲೆಗೆ ನೀರು ಹರಿಸಲಾಗಿದೆ. ಆದರೆ, ಹೇಮಾವತಿ ಜಲಾನಯನ ವ್ಯಾಪ್ತಿಯ ರೈತರು ಹೇಮೆ ನೀರಿಗಾಗಿ ಕಾಯುತ್ತಿದ್ದಾರೆ. ಸಂಸದ ಎಚ್.ಡಿ. ಕುಮಾರಸ್ವಾಮಿ ಅವರು ಇಲ್ಲಿನ ರೈತರ ಹಿತಾಸಕ್ತಿ ಪರವಾಗಿ ಧ್ವನಿಯೆತ್ತುವಂತೆ ಆಗ್ರಹಿಸಿದ್ದಾರೆ.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ