ಕನಕಪುರ: ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ರೈತರ, ಬಡವರ, ಸಾಮಾನ್ಯರ ಅಭಿವೃದ್ಧಿಗಾಗಿ ಶ್ರಮಿಸಿದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೇವರು ಆರೋಗ್ಯ, ಆಯಸ್ಸು ನೀಡಿ ಇನ್ನೂ ಹೆಚ್ಚಿನ ಜನಸೇವೆ ಮಾಡುವ ಅವಕಾಶ ನೀಡಲಿ ಎಂದು ಜೆಡಿಎಸ್ ಮುಖಂಡ ಚಿನ್ನಸ್ವಾಮಿ ಹಾರೈಸಿದರು.
ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ನಾಗರಾಜು, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಕೊತ್ತನೂರು ಕುಮಾರ್, ನಗರಾಧ್ಯಕ್ಷ ಕೋಟೆ ಮಂಜುನಾಥ್, ರಾಜ್ಯ ಜೆಡಿಎಸ್ ಯುವ ಉಪಾಧ್ಯಕ್ಷ ಚಿನ್ನಸ್ವಾಮಿ, ದಿಶಾ ಸಮಿತಿ ಸದಸ್ಯರಾದ ರಾಜೇಶ್, ಕೋಟೆ ಮಂಜುನಾಥ್, ಶೋಭಾ, ಶ್ರೀನಿವಾಸ್, ಮೈತ್ರಿ ಕೂಟದ ಮುಖಂಡರಾದ ರಾಜಗೋಪಾಲ್, ಅಶ್ವತ್ಥ್ ನಾರಾಯಣ, ಕುರಿಗೌಡನದೊಡ್ಡಿ ಕುಮಾರ್, ರಾಮಕೃಷ್ಣ, ಗೇರಹಳ್ಳಿ ಸಣ್ಣಪ್ಪ, ಯುವ ಮುಖಂಡರಾದ ರಾಜೇಂದ್ರ, ತಿಮ್ಮೇಗೌಡ, ನಗರಸಭಾ ಸದಸ್ಯ ಸ್ಟುಡಿಯೋ ಚಂದ್ರು, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಪವಿತ್ರ, ಮಮತಾ, ಶಾಂತಿ, ಪವಿತ್ರ ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 01:
ಕನಕಪುರದ ಚನ್ನಬಸಪ್ಪ ವೃತ್ತದ ಬಳಿ ತಾಲೂಕು ಎನ್‌ಡಿಎ ಮೈತ್ರಿಕೂಟದ ಕಾರ್ಯಕರ್ತರು ಹಾಗೂ ಮುಖಂಡರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.