ಕನ್ನಡಪ್ರಭ ವಾರ್ತೆ ಬೆಂಗಳೂರು
ಇದೇ ವೇಳೆ ವಿ.ಸೋಮಣ್ಣ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸೌಮ್ಯನಾಥ ಸ್ವಾಮೀಜಿ ಅವರ ಆರ್ಶೀವಾದ ಪಡೆದರು.
ಈ ವೇಳೆ ಮಾತನಾಡಿದ ಸೋಮಣ್ಣ, ನನ್ನ ಜೀವನದಲ್ಲಿ ಶಿವಕುಮಾರ ಸ್ವಾಮೀಜಿ ಮತ್ತು ಬಾಲಗಂಗಾಧರನಾಥ ಸ್ವಾಮೀಜಿ ಅವರ ಆರ್ಶೀವಾದ, ಒಡನಾಟದಿಂದಾಗಿ ಕಳೆದ 45 ವರ್ಷಗಳಿಂದ ಜನಸೇವೆ ಮಾಡಲು ಸಾಧ್ಯವಾಗಿದೆ. ಸಾಮಾನ್ಯ ಕಾರ್ಯಕರ್ತನನ್ನು ಜನಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಜನತೆಗೆ ಮತ್ತು ಬಿಜೆಪಿಗೆ ಧನ್ಯವಾದಗಳು ಎಂದರು.ಬಿನ್ನಿಪೇಟೆ, ವಿಜಯನಗರ, ಗೋವಿಂದರಾಜನಗರ ಮತ್ತು ತುಮಕೂರು ಕ್ಷೇತ್ರಗಳು ನನ್ನ ಹೃದಯದಲ್ಲಿ ಇದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಮಾಡಲು ಕಡಿಮೆ ಅವಧಿ ಸಿಕ್ಕಿದ್ದು, ಅಲ್ಲಿನ ಜನರ ಪ್ರೀತಿ ವಿಶ್ವಾಸದಿಂದ ನನಗೆ 1.75 ಲಕ್ಷ ಮತಗಳ ಅಂತರದಿಂದ ಜಯಗಳಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ, ರಾಜ್ಯ ಬಿಜೆಪಿ ಯುವ ಮುಖಂಡ ಡಾ। ಅರುಣ್ ಸೋಮಣ್ಣ, ಆಡಳಿತ ಪಕ್ಷದ ಮಾಜಿ ನಾಯಕ ರವೀಂದ್ರ, ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ಪಕ್ಷದ ನಾಯಕರಾದ ಮೋಹನ್ ಕುಮಾರ್, ಬಾಬಿ ವೆಂಕಟೇಶ್, ದಾಸೇಗೌಡ, ಸಿ.ಎಂ.ರಾಜಪ್ಪ, ಕನಕಪುರ ರಾಜಣ್ಣ, ಕ್ರಾಂತಿರಾಜು, ವೇಣುಗೌಡ, ಶ್ರೀಧರ್, ಡೊಡ್ಡವೀರಯ್ಯ ಉಪಸ್ಥಿತರಿದ್ದರು.