ಕನ್ನಡಪ್ರಭ ವಾರ್ತೆ ಹನೂರು
ಸಚಿವರ ಆಗಮನದ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎಂ.ಆರ್. ಮಂಜುನಾಥ್ ಮತ್ತು ಶ್ರೀಮಲೆಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ವಾದ್ಯಮೇಳಗಳೊಂದಿಗೆ ಭಕ್ತಿಪೂರ್ವಕವಾಗಿ ಆತ್ಮೀಯ ಸ್ವಾಗತ ಕೋರಿದರು.
ದೇವಾಲಯದ ದ್ವಾರಕ್ಕೆ ಆಗಮಿಸಿದ ಸಚಿವರು ಶ್ರೀ ಮಹದೇಶ್ವರ ಸ್ವಾಮಿಗೆ ನಮನ ಸಲ್ಲಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.ಸಾಲೂರು ಮಠಕ್ಕೆ ಭೇಟಿ:
ಇದ್ದಕ್ಕೂಮೊದಲು ಸೋಮಣ್ಣರ 70ನೇ ವರ್ಷದ ಹುಟ್ಟುಹಬ್ಬಕ್ಕೆ ಇನ್ನೂ ಎರಡು ದಿನಗಳು ಬಾಕಿಯಿರುವ ಈ ವೇಳೆ, ಅವರ ಅಭಿಮಾನಿಗಳು ಶುಕ್ರವಾರದಂದು ಹನೂರು ಪಟ್ಟಣದಲ್ಲಿ ಕೇಕ್ ಕತ್ತರಿಸಿ, ಅನ್ನಸಂತರ್ಪಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್. ಮಂಜುನಾಥ್, ಬಿಜೆಪಿ ನಾಯಕರಾದ ಎಸ್. ದತ್ತೇಶ್ ಕುಮಾರ್, ನಿಶಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.