ಎಷ್ಟೇ ಪ್ರಭಾವಿಗಳಾಗಿದ್ದರೂ ಕ್ರಮ ಆಗಬೇಕು

KannadaprabhaNewsNetwork |  
Published : Sep 14, 2024, 01:50 AM IST
3 | Kannada Prabha

ಸಾರಾಂಶ

ಮತಗಳ ಓಲೈಕೆ ರಾಜಕಾರಣ ಬಿಡಬೇಕು. ಎಲ್ಲದಕ್ಕಿಂತ ದೇಶ ಮುಖ್ಯ

ಕನ್ನಡಪ್ರಭ ವಾರ್ತೆ ಮೈಸೂರುನಾಗಮಂಗಲ ಗಲಭೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ, ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ಮೇಲೆ ಕ್ರಮ ಆಗಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಆಗ್ರಹಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರು ಬಹಳ ಹಿರಿಯರಿದ್ದಾರೆ, ಅನುಭವಿಗಳು, ಯಾವ ಕಾರಣಕ್ಕಾಗಿ ಇದನ್ನು ಸಣ್ಣ ಪ್ರಕರಣ ಎಂದರೋ ನನಗೆ ಗೊತ್ತಾಗುತ್ತಿಲ್ಲ. ಮತಗಳ ಓಲೈಕೆ ರಾಜಕಾರಣ ಬಿಡಬೇಕು. ಎಲ್ಲದಕ್ಕಿಂತ ದೇಶ ಮುಖ್ಯ ಎಂದರು.ಮುಂದೆ ಇಂತಹ ಘಟನೆ ನಡೆಯದಂತೆ ಸರ್ಕಾರ ಎಚ್ಚರವಹಿಸಬೇಕು. ಗಣೇಶ ಮೂರ್ತಿ ನಮ್ಮ ಭಾವನೆಗಳ ಸಂಕೇತ. ಅದರ ಮೆರವಣಿಗೆ ಅಡ್ಡಿಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು. ತಪ್ಪೇನಿದೆ ಹೇಳಿ?ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರೊಂದಿಗೆ ಪ್ರಧಾನಿ ಗಣಪತಿ ಪೂಜೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅದರಲ್ಲಿ ತಪ್ಪೇನಿದೆ ಹೇಳಿ? ಇಬ್ಬರು ರಾಷ್ಟ್ರದ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗಳು. ಇಬ್ಬರು ಸೇರಿ ಗಣಪತಿ ಪೂಜೆ ಮಾಡಿದರೆ ಅದರಲ್ಲಿ ತಪ್ಪನ್ನೇಕೆ ಹುಡುಕಿತ್ತೀರಾ? ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬೇಡ. ಅವರಿಬ್ಬರೂ ರಾಷ್ಟ್ರದ ಉನ್ನತಿಗಾಗಿ ದುಡಿಯುತ್ತಿದ್ದಾರೆ. ಒಟ್ಟಾಗಿ ಸೇರಿ ಪೂಜೆ ಮಾಡಿದ್ದಾರೆ. ಇದನ್ನೇ ದೊಡ್ಡ ವಿಚಾರ ಮಾಡುವುದರಲ್ಲಿ ಯಾವ ಅರ್ಥವೂ ಇಲ್ಲ ಎಂದರು.-----ಕೋಟ್...ಚಾಮುಂಡಿ ತಾಯಿಯ ಆಶೀರ್ವಾದದಿಂದ ನನಗೆ ದೊಡ್ಡ ಸ್ಥಾನ ಸಿಕ್ಕಿದೆ. ಜನರ ಜೊತೆ ಸದಾ ಇದ್ದರೆ ಜನರ ಪ್ರೀತಿಯೋ ಹಾಗೇ ಇರುತ್ತದೆ ಎಂಬುದಕ್ಕೆ ಮೈಸೂರಿನ ಇವತ್ತಿನ ಸ್ವಾಗತವೇ ಸಾಕ್ಷಿ. ಜನರ ಪ್ರೀತಿ ನೋಡಿ ನನಗೆ ಹೃದಯ ತುಂಬಿ ಬಂದಿದೆ.- ವಿ. ಸೋಮಣ್ಣ, ಕೇಂದ್ರ ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೈಬ್ರರಿ ಮೇಲ್ವಿಚಾರಕರಿಗೆ ವರ್ಷದಿಂದ ಅರ್ಧ ವೇತನ!
ಕುರಿಗಾಹಿ ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು : ಸಿದ್ದು ಕಿಡಿ