ಕನ್ನಡಪ್ರಭ ವಾರ್ತೆ ಬೆಂಗಳೂರು
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಾಲಿನ ದರ ಏರಿಕೆಗೆ ರೈತರು ಒತ್ತಾಯಿಸಿದ್ದಾರೆ. ರೈತರು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.
ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ತಮ್ಮನ್ನು ಭೇಟಿಯಾಗಿ 12 ರು. ಹೆಚ್ಚಳ ಮಾಡಿ. ಅದರಲ್ಲಿ ಎರಡು ರು. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ಆದರೆ ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿ ಬಗ್ಗೆ ವರದಿಗಳನ್ನು ಪಡೆದು, ಪರಿಶೀಲಿಸುತ್ತೇವೆ. ಅದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.ಹಾಲಿನ ಪ್ರಸ್ತುತ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದೆ. 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ಹೀಗಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದರು.ನಷ್ಟ ಆಗುತ್ತಿದೆ, ಬೇಗ ನೆರವಿಗೆ ಬನ್ನಿ: ಡಿಕೆಸುಹಾಲಿನ ಒಕ್ಕೂಟಗಳು ಹಾಗೂ ರೈತರಿಗೆ ಆಗುತ್ತಿರುವ ನಷ್ಟ ತಡೆಯಲು ಸರ್ಕಾರ ಕೂಡಲೇ ನಮ್ಮ ನೆರವಿಗೆ ಧಾವಿಸಬೇಕು. ಪ್ರತಿ ಲೀಟರ್‌ಗೆ 10 ರು. ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದ್ದೇವೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ.
ಯುದ್ಧ, ಬೆಲೆ ಏರಿಕೆಯಿಂದ ನಮಗೆ ಕಷ್ಟವಾಗಿದೆ. ರೈತರೆಲ್ಲರೂ ಹೋರಾಟ ಮಾಡಿದ್ದು ಬೆಂಗಳೂರಿನಲ್ಲಿ ಲಕ್ಷಕ್ಕೂ ಹೆಚ್ಚು ಜನ ಬಂದು ಪ್ರತಿಭಟನೆ ನಡೆಸಿದ್ದಾರೆ. ಎಲ್ಲ ಶಾಸಕರಿಗೂ ಮನವಿ ಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಸರ್ಕಾರ ಪೂರಕವಾಗಿ ಸ್ಪಂದಿಸಬೇಕು ಎಂದರು.