ಕನ್ನಡಪ್ರಭ ವಾರ್ತೆ ಬೆಳಗಾವಿ
ಇಂದು ಸಂಸ್ಥೆಯು 318 ಅಂಗಸಂಸ್ಥೆಗಳೊಂದಿಗೆ 1.48 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ. ಗ್ರಾಮೀಣ ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವಲ್ಲಿ ಕೆಎಲ್‌ಇ ಪಿಯು ಕಾಲೇಜುಗಳ ಪಾತ್ರ ಸಿಂಹಪಾಲು ಆಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ 37 ಪಿಯು ಕಾಲೇಜುಗಳನ್ನು ನಡೆಸುತ್ತಿರುವ ಸಂಸ್ಥೆಯು ಮುಂದಿನ ದಿನಗಳಲ್ಲಿ ವಸತಿ ಸಹಿತ ಕಾಲೇಜುಗಳನ್ನೂ ಪ್ರಾರಂಭಿಸಲು ಉದ್ದೇಶಿಸಿದೆ ಎಂದು ತಿಳಿಸಿದರು.
ಕೆಎಲ್‌ಇ ಸಂಸ್ಥೆಯ ನಿರ್ದೇಶಕ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ನೀಟ್, ಜೆಇಇ, ಸಿಇಟಿ, ಸಿಎ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ಒಂದೇ ಕ್ಯಾಂಪಸ್‌ನಲ್ಲಿ ನೀಡುತ್ತಿರುವುದು ವಿಶೇಷ ಎಂದು ಹೇಳಿದರು.ಕ್ರೀಡಾ ಕ್ಷೇತ್ರದಲ್ಲಿಯೂ ಕೆಎಲ್‌ಇ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿದ್ದು, ಖೇಲೋ ಇಂಡಿಯಾ ಸೇರಿದಂತೆ ವಿವಿಧ ಮಟ್ಟಗಳಲ್ಲಿ ಮೆಚ್ಚುಗೆ ಗಳಿಸಿದ್ದಾರೆ. ಭವಿಷ್ಯದಲ್ಲಿ ಒಲಿಂಪಿಕ್ಸ್ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಗುರಿಯೊಂದಿಗೆ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.
ಜೆಇಇ ಪರೀಕ್ಷೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಟಾಪ್ 500 ರ‍್ಯಾಂಕ್, ಮೂವರು 1000 ಒಳಗೆ, ಐವರು 2000 ಒಳಗೆ, 9 ಮಂದಿ 5000 ಒಳಗೆ ಹಾಗೂ 14 ಮಂದಿ 10,000 ಒಳಗಿನ ರ‍್ಯಾಂಕ್ ಗಳಿಸಿದ್ದಾರೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಒಟ್ಟಿನಲ್ಲಿ ಕೆಎಲ್‌ಇ ಸಂಸ್ಥೆಯ ಪಿಯು ಕಾಲೇಜುಗಳು ರಾಜ್ಯದಲ್ಲಿಯೇ ಸರ್ವೋತ್ತಮ ಸಾಧನೆ ತೋರಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.
----------
ಈ ಬಾರಿ ದಾಖಲಾರ್ಹ ಫಲಿತಾಂಶ2025-26ನೇ ಸಾಲಿನಲ್ಲಿ ಒಟ್ಟು 11,516 ವಿದ್ಯಾರ್ಥಿಗಳಲ್ಲಿ 11,047 ಮಂದಿ ತೇರ್ಗಡೆ ಹೊಂದಿದ್ದು, ಶೇ.95.93 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ ಶೇ.91.29, ವಾಣಿಜ್ಯ ವಿಭಾಗದಲ್ಲಿ ಶೇ.96.62 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.96.83 ಫಲಿತಾಂಶ ಬಂದಿದೆ. ಈ ಬಾರಿ ರಾಜ್ಯಮಟ್ಟದಲ್ಲಿ ಒಟ್ಟು 27 ರ‍್ಯಾಂಕ್‌ಗಳನ್ನು ಕೆಎಲ್‌ಇ ವಿದ್ಯಾರ್ಥಿಗಳು ಪಡೆದಿದ್ದಾರೆ. ಕಲಾ ವಿಭಾಗದಲ್ಲಿ 5 ವಿದ್ಯಾರ್ಥಿಗಳು, ವಾಣಿಜ್ಯದಲ್ಲಿ 13 ವಿದ್ಯಾರ್ಥಿಗಳು ಹಾಗೂ ವಿಜ್ಞಾನದಲ್ಲಿ 9 ವಿದ್ಯಾರ್ಥಿಗಳು ರ‍್ಯಾಂಕ್ ಗಳಿಸಿದ್ದಾರೆ.