ಹುಬ್ಬಳ್ಳಿ: ವೀರಶೈವ ಲಿಂಗಾಯತ ಸಮಾಜದ ಏಕತೆಗಾಗಿ ಸಮಾನವಾಗಿ ಕುಳಿತುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂಬ ಸಂದೇಶವನ್ನು ಪಂಚ ಪೀಠಾಧಿಪತಿಗಳು ನೀಡಿದ್ದಾರೆ ಎಂದು ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಗಳು ಹೇಳಿದರು.
ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಇಲ್ಲಿ ಸೇರಿರುವುದು ಶಕ್ತಿ ಪ್ರದರ್ಶನವಲ್ಲ. ಭಕ್ತಿ ಪ್ರದರ್ಶನ. ಈ ರೀತಿಯ ವಾತಾವರಣ ಹೆಚ್ಚುತ್ತಾ ಹೋಗಬೇಕಿದೆ ಎಂದರು.
ಮುಂಡರಗಿ ಅನ್ನದಾನೇಶ್ವರ ಶ್ರೀಗಳು, ಹಿಂದೂ ಎಂಬ ಪದ ಬಳಸಬಾರದು. ವೀರಶೈವ- ಲಿಂಗಾಯತ ಎಂದೇ ಬಳಸಬೇಕು ಎಂದು ತಿಳಿಸಿದರಲ್ಲದೇ, ಸಮೀಕ್ಷೆಯಲ್ಲಿ ವೀರಶೈವ- ಲಿಂಗಾಯತ ಎಂದೇ ಬರೆಯಿಸಬೇಕು ಎಂದರು.