ಮಾಜಿ ಸಂಸದ ರಮೇಶ ಕತ್ತಿ ಮತ್ತು ಮಾಜಿ ಸಚಿವ ಎ.ಬಿ. ಪಾಟೀಲ ಹಾಗೂ ಶಾಸಕ ನಿಖಿಲ ಕತ್ತಿ ಮಾರ್ಗದರ್ಶನದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಕನ್ನಡಪ್ರಭ ವಾರ್ತೆ ಹುಕ್ಕೇರಿ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಮಹಾವೀರ ನಿಲಜಗಿ ಹಾಗೂ ಉಪಾಧ್ಯಕ್ಷರಾಗಿ ಅಜೀತ ಮುನ್ನೋಳಿ ಅವಿರೋಧವಾಗಿ ಆಯ್ಕೆಯಾದರು.
ಪಟ್ಟಣದ ಸಂಘದ ಸಭಾಭವನದಲ್ಲಿ ಬುಧವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹಾವೀರ ನಿಲಜಗಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಜೀತ ಮುನ್ನೋಳಿ ಅವರ ನಾಮಪತ್ರ ಒಂದೇ ಸಲ್ಲಿಕೆಯಾಗಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಘೋಷಿಸಿದರು.
ಮಾಜಿ ಸಂಸದ ರಮೇಶ ಕತ್ತಿ ಮತ್ತು ಮಾಜಿ ಸಚಿವ ಎ.ಬಿ. ಪಾಟೀಲ ಹಾಗೂ ಶಾಸಕ ನಿಖಿಲ ಕತ್ತಿ ಮಾರ್ಗದರ್ಶನದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ಕುಟುಂಬ ರಾಜಕೀಯಕ್ಕೆ ಮಣೆ ಹಾಕದೇ ಅಧ್ಯಕ್ಷ ಸ್ಥಾನವನ್ನು ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಹುಕ್ಕೇರಿ ಪಟ್ಟಣದ ಜೈನ ಸಮುದಾಯದ ಮಹಾವೀರ ನಿಲಜಗಿ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಯಮಕನಮರಡಿಯ ವಿಧಾನಸಭಾ ಕ್ಷೇತ್ರದ ಹೆಬ್ಬಾಳ ಗ್ರಾಮದ ಲಿಂಗಾಯತ ಸಮುದಾಯದ ಅಜೀತ ಮುನ್ನೋಳಿಗೆ ನೀಡಲಾಗಿದೆ.
ಇತ್ತೀಚೆಗೆ ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದ ಅಪಣ್ಣಗೌಡ ಪಾಟೀಲ ಪೆನಲ್ ಹಾಗೂ ಮಾಜಿ ಸಂಸದ ರಮೇಶ ಕತ್ತಿ, ಮಾಜಿ ಸಚಿವ ಎ.ಬಿ.ಪಾಟೀಲ ನೇತೃತ್ವದ ಸ್ವಾಭಿಮಾನಿ ಪೆನಲ್ ಗಳ ನಡುವೆ ನಡೆದ ತೀವ್ರ ಜಿದ್ದಾ ಜಿದ್ದಿನ ಚುನಾವಣೆಯಲ್ಲಿ ಸ್ವಾಭಿಮಾನ ಪೆನಲ್‌ನ ಎಲ್ಲ 15 ಅಭ್ಯರ್ಥಿಗಳು ಆಯ್ಕೆಯಾಗಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.