ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರಗಳ ಕ್ರಮಬದ್ಧತೆ ಬಗ್ಗೆ ಪರಿಶೀಲಿಸಿದರು. ರಾಜ್ಯಸಭೆಗೆ ಸಲ್ಲಿಕೆಯಾಗಿದ್ದ ಐದು ನಾಮಪತ್ರಗಳ ಈ ಪೈಕಿ ಸ್ವತಂತ್ರ ಅಭ್ಯರ್ಥಿ ಭೋಜರಾಜ ಸೋಮಯ್ಯ ಅವರ ನಾಮಪತ್ರ ತಿರಿಸ್ಕೃತಗೊಂಡಿದೆ. ಅಂತಿಮವಾಗಿ ಸ್ಫರ್ಧಾ ಕಣದಲ್ಲಿ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿಯ ಓರ್ವ ಸೇರಿ ನಾಲ್ವರು ಅಭ್ಯರ್ಥಿಗಳು ಉಳಿದಿದ್ದಾರೆ. ಒಂದು ಸ್ಥಾನಕ್ಕೆ 45 ಮತಗಳ ಅಗತ್ಯವಿದೆ. ಈ ಪ್ರಕಾರ ಕಾಂಗ್ರೆಸಿನ ಮೂವರು ಮತ್ತು ಬಿಜೆಪಿಯ ಒಬ್ಬ ಅಭ್ಯರ್ಥಿಯ ಅವಿರೋಧ ಆಯ್ಕೆ ನಿಶ್ಚಿತವಾಗಿದೆ.
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ 8 ನಾಮಪತ್ರಗಳ ಪರಿಶೀಲನೆ ನಡೆದಿದ್ದು, 8 ನಾಮಪತ್ರಗಳು ಅಂಗೀಕಾರಗೊಂಡಿವೆ. ಹೀಗಾಗಿ ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರು ಮತ್ತು ಜೆಡಿಎಸ್‌ನ ಒಬ್ಬ ಸೇರಿ 8 ಮಂದಿ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ. ಜೂ.11ರಂದು ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ವೇಳಾ ಪಟ್ಟಿ ಪ್ರಕಾರ ಜೂ.18ರಂದು ಮತದಾನ ನಡೆಯಲಿದೆ. ಚುನಾವಣಾಧಿಕಾರಿ ಅಂದೇ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.ರಾಜ್ಯಸಭೆ ಅಭ್ಯರ್ಥಿಗಳು: ಕಾಂಗ್ರೆಸ್‌ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮನ್ಸೂರ್ ಅಲಿ ಖಾನ್. ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷ ಎಂ.ನಾಗರಾಜ್.
ಕಾಂಗ್ರೆಸ್‌ನಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ವಿನಯ್ ಕಾರ್ತಿಕ್. ಬಿಜೆಪಿಯಿಂದ ಪಕ್ಷದ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್.ರಘು, ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್. ಜೆಡಿಎಸ್ ಮುಖಂಡ ಗೋವಿಂದರಾಜು.