)
ಕನ್ನಡಪ್ರಭ ವಾರ್ತೆ ಸಿಂಧನೂರು
ಪಟ್ಟಣದ ಗಾಂಧಿ ವೃತ್ತದಲ್ಲಿ ಕೃಷ್ಣಾಷ್ಟಮಿಯ ಹಿನ್ನೆಲೆಯಲ್ಲಿ ಗೋ ಪೂಜೆ, ಕೃಷ್ಣನ ಭಾವಚಿತ್ರಕ್ಕೆ ವಿಶೇಷ ಪೂಜೆ ಮಾಡಿ 4 ನೇ ದಿನದ ಪಾದಯಾತ್ರೆಯನ್ನು ಆರಂಭಿಸಿ ದರು. ಮಾರ್ಗಮಧ್ಯದಲ್ಲಿ ರಸ್ತೆಯಲ್ಲಿ ಎಳೆನೀರು ಕುಡಿದು ಪಾದಯಾತ್ರೆಯ ದಣಿವಾರಿಸಿಕೊಂಡರು. ಇದೇ ಸಂದರ್ಭ ಭತ್ತ ಕಟಾವ್ ಮಾಡುವ ನೂತನ ಯಂತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಅವರು, ನೀರಾವರಿ ಯೋಜನೆಗಳಿಗೆ ಬಿಜೆಪಿ ಮೊದಲಿನಿಂದಲೂ ವಿಶೇಷ ಆದ್ಯತೆ ನೀಡುತ್ತಾ ಬಂದಿದೆ. ೨೦೨೮ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈ ಭಾಗದ ಜೀವನಾಡಿಯಾದ ತುಂಗಭದ್ರಾ ಜಲಾಶಯಕ್ಕೆ ಪರ್ಯಾಯವಾಗಿ ನವಲಿ ಸಮನಾಂತರ ಮಾಡುತ್ತೇವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲು ೧ ಸಾವಿರ ಕೋಟಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಪ್ರಸ್ತುತ ಕಾಂಗ್ರೆಸ್ ಸರಕಾರಕ್ಕೆ ರೈತರ, ನೀರಾವರಿ ಯೋಜನೆಗಳ ಬಗ್ಗೆ ಕಾಳಜಿಯಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗಿದೆ. ರೈತರು ಕಣ್ಣೀರು ಹಾಕುತ್ತಿದ್ದಾರೆ. ತುರ್ತು ಕ್ರಮಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ರಾಜ್ಯ ಸರಕರ ವಿರುದ್ಧ ವಾಗ್ದಾಳಿ ನಡೆಸಿದರು.ನಂತರ ಗೊರೇಬಾಳ ಕ್ಯಾಂಪಿನ ಬಿಜೆಪಿ ಕಾರ್ಯಕರ್ತರು ಬೃಹತ್ ಗಾತ್ರದ ಹೂವಿನ ಹಾರ ಹಾಕಿ ಸ್ವಾಗತಿಸಿದರು. ಗೊರೇಬಾಳ ಗ್ರಾಮದಲ್ಲಿ ತಲುಪಿತ ಪಾದ ಯಾತ್ರಿಗಳಿಗೆ ಅಲ್ಲಿನ ಕಾರ್ಯಕರ್ತರು ಮಜ್ಜಿಗೆ ವ್ಯವಸ್ಥೆ ಕಲ್ಪಿಸಿದ್ದರು. ಪಾದಯಾತ್ರೆ ಹಂಚಿನಾಳ ಕ್ಯಾಂಪಿಗೆ ತಲುಪಿ ಮಧ್ಯಾಹ್ನದ ಭೋಜನ ನಂತರ ಕೆಲ ವರ್ತಕರೊಂದಿಗೆ ಚರ್ಚಿಸಿದರು. ಅಲ್ಲಿಂದ ಚನ್ನಳ್ಳಿ ಕ್ರಾಸ್ ಮುಖಾಂತರ ಕೊಪ್ಪಳ ಜಿಲ್ಲೆಯ ಕಾರಟಗಿಗೆ ತಲುಪಿತು.
ಎಪಿಎಂಸಿ ವರ್ತಕರ ಸಮಸ್ಯೆಗಳಿಗೆ ಪರಿಹಾರಕ್ಕೆ ಆಗ್ರಹ: ಸಿಂಧನೂರು ಸಮೀಪ ಎಪಿಎಂಸಿ ವರ್ತಕರೊಂದಿಗೆ ವಿಜಯೇಂದ್ರ ಸಂವಾದ ನಡೆಸಿದರು. ಲೀಸ್ ಕಮ್ ಸೇಲ್ ಡೀಡ್ ನಂತರವೂ ಜಾಗ ಅಥವಾ ಮಳಿಗೆ ವರ್ಗಾವಣೆಗೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ. ಇದರಿಂದ ಸಣ್ಣ ವ್ಯಾಪಾರಿಗಳು ಮತ್ತು ಮಧ್ಯಮ ವರ್ಗದ ವರ್ತಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಬೀಳುತ್ತಿದೆ ಎಂದು ವರ್ತಕರು ತಿಳಿಸಿದರು.
“ಇಂತಹ ಆಡಳಿತಾತ್ಮಕ ಸಮಸ್ಯೆಗಳನ್ನು ಸರ್ಕಾರ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಪರಿಹರಿಸಬಹುದು. ನಿಮ್ಮ ಧ್ವನಿಯಾಗಿ ನಾನು ವಿಧಾನಸಭೆಯಲ್ಲಿ ಕೆಲಸ ಮಾಡುತ್ತೇನೆ” ಎಂದು ವಿಜಯೇಂದ್ರ ಭರವಸೆ ನೀಡಿದರು.
ನಗರದ ಗಾಂಧಿವೃತ್ತದಲ್ಲಿ ೪ನೇ ದಿನಗದ ಪಾದಯಾತ್ರೆಗೆ ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಿ, ನಂತರ ಸರಕಾರದ ವಿವಿಧ ಯೋಜನೆಗಳ ಫಲಾನು ಭವಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಸರಕಾರ ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ, ಕಳೆದ ಆರು ತಿಂಗಳಿಂದ ಮಾಸಾಶನ ಬಂದಿಲ್ಲ ಎಂದು ಫಲಾನುಭವಿಗಳೇ ಅಳಲು ತೋಡಿಕೊಳ್ಳುತ್ತಿದ್ದಾರೆ. ಕಡುಬಡವರ ಬದುಕಿಗೆ ಆಸರೆಯಾಗಬೇಕಾದ ಸರ್ಕಾರ ಅವರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ರೈತರು, ಕೂಲಿ ಕಾರ್ಮಿಕರು, ವೃದ್ಧರು, ಅಂಗವಿಕಲರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರನ್ನು ಸರ್ಕಾರ ನಿರ್ಲಕ್ಷ್ಯದಿಂದ ನೋಡುತ್ತಿದೆ. ಒಂದು ಕಡೆ ಪಂಚಗ್ಯಾರಂಟಿಗಳ ಪ್ರಚಾರದಲ್ಲಿ ಸರ್ಕಾರ ಮುಳುಗಿದೆ. ಇದೇ ಭ್ರಮೆಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ, ಕೂಲಿಕಾರ್ಮಿಕರು, ರೈತರು, ದುರ್ಬಲ ವರ್ಗಗಳಿಂದ ದೂರವಾಗುತ್ತಿದೆ. ಇದರಿಂದ ಅವರೆಲ್ಲ ಬೇಸತ್ತು. ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹರಿಹಾಯ್ದರು.ಜಿಲ್ಲೆಯ ಕಾರಟಗಿಯಲ್ಲಿ ಸಮಾಪ್ತಿಗೊಂಡಿತು.