ಕನ್ನಡಪ್ರಭ ವಾರ್ತೆ ಮದ್ದೂರು
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮದ್ದೂರು ಉತ್ಸವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿ, ಉತ್ಸವದ ಅಂಗವಾಗಿ ನಡೆದ ಮ್ಯಾರಾಥಾನ್ ನಿರೀಕ್ಷೆಗೂ ಮೀರಿದ ಜನರು ಬಂದಿದ್ದರು. ಮದ್ದೂರಮ್ಮನ ದನಗಳ ಜಾತ್ರೆಗೆ ದನಗಳು, ಟಗರುಗಳು ಬಂದು ಕಳೆಗಟ್ಟಿರುವುದು ಖುಷಿ ತಂದಿದೆ ಎಂದರು.
ಉತ್ಸವದ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಲಂಕಾರದ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಮೇ 8ವರೆಗೂ ದೀಪಾಲಂಕಾರ ವಿಶೇಷ ಮೆರಗು ಬರಲಿದೆ. ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾವಳಿಗಳು ನಗರದ ತಾಲೂಕು ಕ್ರೀಡಾಂಗಣ ಹಾಗೂ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯಲಿದೆ. ವಿಜೇತ ತಂಡಗಳಿಗೆ ಕ್ರಮವಾಗಿ 50 ಸಾವಿರ, 25 ಸಾವಿರ, 10 ಸಾವಿರ ನಗದು ಬಹುಮಾನ, ಜೊತೆಗೆ 10 ಸಾವಿರ ರು. ಸಮಾಧಾನಕರ ಬಹುಮಾನ ನೀಡಲಾಗುವುದು ಎಂದರು.ಏ.30ರಂದು ಪ್ರವಾಸಿ ಮಂದಿರ ಆವರಣದಿಂದ ಶ್ರೀಉಗ್ರ ನರಸಿಂಹಸ್ವಾಮಿ ದೇವಾಲಯದ ಆವರಣದವರೆಗೆ ಬೃಹತ್ ದನಗಳ ಮೆರವಣಿಗೆ, ಉತ್ತಮ ರಾಸುಗಳಿಗೆ ಪ್ರಥಮ 2 ಲಕ್ಷ ರು. ದ್ವಿತೀಯ 1 ಲಕ್ಷ ರು. ಮೂರನೇ ಬಹುಮಾನ ಗೆ 50 ಸಾವಿರ ನಗದು ಬಹುಮಾನ ಕೊಡಲಾಗುವುದು ಎಂದರು.
ಮೇ 6ರಂದು ನಗರದ ಕ್ರೀಡಾಂಗಣದಲ್ಲಿ ಸಂಗೀತ ಸಂಜೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಮಾಜಿ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಜಿಲ್ಲೆಯ ಶಾಸಕರು ಆಗಮಿಸುವರು. ಇದೇ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಟ್ರಸ್ಟ್ ವತಿಯಿಂದ ಉಚಿತ ಲ್ಯಾಪ್ ಟಾಪ್, ಜತೆಗೆ ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದರು.