ಕನ್ನಡಪ್ರಭ ವಾರ್ತೆ ರಾಮದುರ್ಗ
ರೋಷನ್ ಬೀ ಅಭಿಮಾನ ಕಂಡು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕೆಯೊಂದಿಗೆ ಮುಕ್ತವಾಗಿ ಮಾತನಾಡುತ್ತ ಸಾಗಿದರು. ಸಚಿವರನ್ನು ಇಷ್ಟು ದಿನ ಕೇವಲ ಟಿವಿ, ಪೇಪರ್ ಗಳಲ್ಲಿ ನೋಡುತ್ತಿದ್ದೆ. ಇವತ್ತು ಅವರನ್ನು ಹತ್ತಿರದಿಂದ ನೋಡಿ ಖುಷಿ ಆಯಿತು. ನನಗೆ ಸ್ವಂತ ಮನೆ ಇಲ್ಲ. ನನ್ನ ಅಕ್ಕ ಕೂಡ ವಿಕಲಚೇತನಳು, ಆಪರೇಷನ್ ಆಗಿದೆ. ನನ್ನ ಕೆಲವೊಂದು ಸಮಸ್ಯೆಗಳನ್ನು ಸಚಿವರ ಬಳಿ ಹೇಳಿರುವೆ. ಸಮಸ್ಯೆಗಳಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದು ರೋಷನ್ ಬೀ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.
ಮದುವೆ ಕಾರ್ಯಕ್ರಮದಲ್ಲಿ ಭಾಗಿ: ಬಳಿಕ ರೋಷನ್ ಬೀ ಮನವಿ ಮೇರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಂಬಂಧಿಕರ ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಜೊತೆಗೆ ರೋಷನ್ ಬೀ ತಮ್ಮ ಕುಟುಂಬ ಸದಸ್ಯರನ್ನು ಸಚಿವರಿಗೆ ಪರಿಚಯಿಸಿದರು. ವಿಕಲ ಚೇತನಳ ಜೀವನೋತ್ಸಾಹ, ಸಚಿವರ ಬಗೆಗಿನ ಪ್ರೀತಿ, ಆಕೆಯ ಕುರಿತ ಸಚಿವರ ಕಾಳಜಿ ಕಂಡು ಹರ್ಷಗೊಂಡರು.ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಉತ್ತಮ ವಾತಾವರಣರಾಮದುರ್ಗ: ಬಿಜೆಪಿಯವರು ಎಷ್ಟೇ ಅಬ್ಬರಿಸಿದರೂ ರಾಮದುರ್ಗ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರಿಗೆ ಮುನ್ನಡೆ ಸಿಗುವುದು ಖಚಿತ. ಕಾಂಗ್ರೆಸ್ ಅಭ್ಯರ್ಥಿ ಪರ ಕ್ಷೇತ್ರದಾದ್ಯಂತ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಹಾಗೂ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಎಂದು ಮೃಣಾಲ್ ಅವರನ್ನು ಕಣಕ್ಕಿಳಿಸಿಲ್ಲ. ಕಳೆದ 11 ವರ್ಷಗಳಿಂದ ಪಕ್ಷದ ಯುವ ಘಟಕದಲ್ಲಿ ಕೆಲಸ ಮಾಡಿದ್ದು, ಕ್ಷೇತ್ರದ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಜೊತೆಗೆ ಅವರ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ಟಿಕೆಟ್ ನೀಡಲಾಗಿದೆ. ಮೃಣಾಲ್ ಹೆಬ್ಬಾಳಕರ್ ವಿದ್ಯಾವಂತನಾಗಿದ್ದು, ಕ್ಷೇತ್ರದ ಪರ ಕಾಳಜಿ ಹೊಂದಿದ್ದಾನೆ ಎಂದು ಹೇಳಿದರು.
ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಯೋಚಿಸದ ಬಿಜೆಪಿಯವರಿಗೆ ಅಧಿಕಾರ ದಾಹ ಮಾತ್ರ ನಿಂತಿಲ್ಲ. ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಸಚಿವರಾಗಲು ರಾಜ್ಯದಿಂದ ದೊಡ್ಡ ದಂಡೇ ರೆಡಿ ಆಗುತ್ತಿದೆ. ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಕೂಡ ಗೆದ್ದರೆ ಸಚಿವ ಆಗುತ್ತೇನೆ ಅಂತ ಮತ ಕೇಳುತ್ತಿದ್ದಾರೆ. ಪ್ರಹ್ಲಾದ ಜೋಶಿ, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಸೇರಿದಂತೆ ಸ್ಪರ್ಧಿಸಿರುವ ಎಲ್ಲರೂ ಸಚಿವರಾಗುತ್ತೇವೆ ಎನ್ನುತ್ತಿದ್ದಾರೆ. ಈ ಹಿಂದೆ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸದ ವ್ಯಕ್ತಿ ಇಂದು ಬೆಳಗಾವಿಯಲ್ಲಿ ಮತ ಕೇಳಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಪ್ರದೀಪ ಪಟ್ಟಣ, ಹಾಸ್ಯ ಕಲಾವಿದ ರಾಜು ತಾಳಿಕೋಟೆ, ಕೆಪಿಸಿಸಿ ಸದಸ್ಯರಾದ ರಾಜೇಂದ್ರ ಪಾಟೀಲ, ಸುರೇಶ ಪತ್ಯಾಪುರ, ರಾಮದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಶಿದ್ದಲಿಂಗಪ್ಪನವರ್, ಮುಂಬಾ ರೆಡ್ಡಿ, ಹನುಮಂತ ವಡ್ಡರ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಬೆಳಗಾವಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಬೃಹತ್ ಬೈಕ್ ರ್‍ಯಾಲಿ ಮೂಲಕ ಪಟ್ಟಣದಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೂಮಳೆ ಸುರಿಸಿ ಸಂಭ್ರಮಿಸಿದರು.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಹೊರಟ ಬೈಕ್ ರ್‍ಯಾಲಿ ಬಸವ ಮಾರ್ಗದ ಮೂಲಕ ಹುತಾತ್ಮ ವೃತ್ತದಿಂದ ಅಂಬೇಡ್ಕರ್ ಮಾರ್ಗದ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೇಂದ್ರ ಗ್ರಂಥಾಲಯದವರೆಗೆ ನಡೆಯಿತು. ರಸ್ತೆಯುದ್ದಕ್ಕೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮೃಣಾಲ್ ಹೆಬ್ಬಾಳಕರ್, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಕಾಂಗ್ರೆಸ್ ಮುಖಂಡರ ಪರ ಜಯಘೊಷಣೆ ಕೂಗಿದರು. ವ್ಯಾಪಕ ಬೆಂಬಲ ಕಂಡು ಮುಖಂಡರು ಸಂತಸಗೊಂಡರು.