ಅಸುರಕ್ಷಿತ ಗರ್ಭಪಾತ ಜೀವಕ್ಕೆ ಅಪಾಯ: ಡಾ. ಲಿಂಗರಾಜು

KannadaprabhaNewsNetwork |  
Published : Oct 04, 2026, 02:30 AM IST
ಫೋಟೋವಿವರ- (3ಎಚ್‌ಪಿಟಿ3)ಹೊಸಪೇಟೆ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ನಡೆದ ಅಂತರಾಷ್ಟಿೖಯ ಸುರಕ್ಷಿತ ಗರ್ಭಪಾತ ಸೇವಾ ದಿನ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಅನಧಿಕೃತ ವ್ಯಕ್ತಿಗಳಿಂದ, ನಕಲಿ ಗಿಡಮೂಲಿಕೆಗಳು ಹಾಗೂ ಮಾತ್ರೆಗಳ ಮೂಲಕ ಗರ್ಭಪಾತ ಮಾಡಿಸಿಕೊಳ್ಳುವುದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವುದಲ್ಲದೆ ಕೆಲ ಸಂದರ್ಭಗಳಲ್ಲಿ ಜೀವಕ್ಕೂ ಅಪಾಯ ಉಂಟುಮಾಡಬಹುದು

ಹೊಸಪೇಟೆ: ಅಂತಾರಾಷ್ಟ್ರೀಯ ಸುರಕ್ಷಿತ ಗರ್ಭಪಾತ ಸೇವಾ ದಿನದ ಅಂಗವಾಗಿ ಸುರಕ್ಷಿತ ಗರ್ಭಪಾತದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಹೇಳಿದರು.

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶನಿವಾರ ನಡೆದ ಅಂತಾರಾಷ್ಟ್ರೀಯ ಸುರಕ್ಷಿತ ಗರ್ಭಪಾತ ಸೇವಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅನಧಿಕೃತ ವ್ಯಕ್ತಿಗಳಿಂದ, ನಕಲಿ ಗಿಡಮೂಲಿಕೆಗಳು ಹಾಗೂ ಮಾತ್ರೆಗಳ ಮೂಲಕ ಗರ್ಭಪಾತ ಮಾಡಿಸಿಕೊಳ್ಳುವುದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವುದಲ್ಲದೆ ಕೆಲ ಸಂದರ್ಭಗಳಲ್ಲಿ ಜೀವಕ್ಕೂ ಅಪಾಯ ಉಂಟುಮಾಡಬಹುದು ಎಂದು ಎಚ್ಚರಿಸಿದರು.

ಅನಪೇಕ್ಷಿತ ಗರ್ಭಧಾರಣೆ, ತಾಯಿಯ ಅಥವಾ ಭ್ರೂಣದ ಆರೋಗ್ಯಕ್ಕೆ ಅಪಾಯವಿರುವ ಸಂದರ್ಭಗಳಲ್ಲಿ ಹಾಗೂ ಅತ್ಯಾಚಾರದಂತಹ ಪ್ರಕರಣಗಳಲ್ಲಿ ಕಾನೂನುಬದ್ಧವಾಗಿ ಅರ್ಹತೆ ಹೊಂದಿದ ಸಂದರ್ಭಗಳಲ್ಲಿ ಸುರಕ್ಷಿತವಾಗಿ ಗರ್ಭಪಾತ ಸೇವೆ ಪಡೆಯಲು ಅವಕಾಶವಿದೆ. ಆದರೆ ವೈದ್ಯರ ಸಲಹೆ ಅಥವಾ ಮೇಲ್ವಿಚಾರಣೆಯಿಲ್ಲದೆ ಮೆಡಿಕಲ್ ಶಾಪ್‌ಗಳಿಂದ ಗರ್ಭಪಾತದ ಮಾತ್ರೆ ಪಡೆದು ಸೇವಿಸುವುದು ಅಪಾಯಕಾರಿ ಎಂದು ತಿಳಿಸಿದರು.

ಹೆಣ್ಣು ಭ್ರೂಣಹತ್ಯೆ ಕಾನೂನುಬದ್ಧವಾಗಿ ಶಿಕ್ಷಾರ್ಹ ಅಪರಾಧವಾಗಿದ್ದು, ಲಿಂಗ ಆಯ್ಕೆಗಾಗಿ ಗರ್ಭಪಾತ ಮಾಡಿಸುವುದು ಕಾನೂನು ಬಾಹಿರವಾಗಿದೆ. ಸುರಕ್ಷಿತ ಗರ್ಭಪಾತ ಸೇವೆ ಮಹಿಳೆಯ ಆರೋಗ್ಯ ಮತ್ತು ಸುರಕ್ಷತೆ ಗಮನದಲ್ಲಿಟ್ಟುಕೊಂಡು ಕಾನೂನಿನ ವ್ಯಾಪ್ತಿಯಲ್ಲಿ ಒದಗಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ. ವಿನಯ್ ಅಧ್ಯಕ್ಷತೆ ವಹಿಸಿದ್ದರು.

ನೂರು ಹಾಸಿಗೆ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಗಂಗಾಧರ ಮೇಟಿ, ಜಿಲ್ಲಾ ಉಪ ಅರೋಗ್ಯ ಶಿಕ್ಷಣಾಧಿಕಾರಿ, ಜಿಲ್ಲಾ ಅರೋಗ್ಯ ನಿರೀಕ್ಷಣಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ
ಮೇವು ಕೊರತೆ: ರೈತರಲ್ಲಿ ಆತಂಕ