ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ನಡೆಸಿ ಕಾಲಮಿತಿಯಲ್ಲಿ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.ನಗರಾಭಿವೃದ್ಧಿ ಕೋಶ ಜೊತೆಗೆ ಪಂಚಾಯತ್ ರಾಜ್ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಸರಿಯಾಗಿ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಸಮೀಕ್ಷೆ ಸಂಬಂಧಿಸಿದಂತೆ ಅರ್ಜಿಯ ಮಾನ್ಯತೆ ಪರಿಶೀಲಿಸಿ ವ್ಯಾಲಿಡೇಟರ್ ಲಾಗ್‌ಇನ್‌ಗೆ ಕಳುಹಿಸಲು ಕ್ರಮವಹಿಸಬೇಕಿದೆ. ಹಾಗೆಯೇ ಸಮೀಕ್ಷಾ ಲಾಗಿನ್‌ನಿಂದ ಬಂದ ಅರ್ಜಿ ಪರಿಶೀಲಿಸಿ ಅರ್ಜಿಯ ನೈಜತೆ ಬಗ್ಗೆ ಖಾತರಿಪಡಿಸಿಕೊಂಡು ಪರಿಶೀಲಿಸಿ ಜಿಲ್ಲಾ ವ್ಯಾಲಿಡೇಟರ್ ಲಾಗಿನ್‌ಗೆ ಅರ್ಜಿ ಕಳುಹಿಸಬೇಕಿದೆ. ಸಮೀಕ್ಷೆ ಕಾರ್ಯದ ಅರ್ಜಿಯು ತಪ್ಪಾಗಿದ್ದಲ್ಲಿ ತಿರಸ್ಕರಿಸಬೇಕಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆಗಾರರಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪರಿಶೀಲನಾ ಅಧಿಕಾರಿಗಳಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ವ್ಯಾಲಿಡೇಟರ್ ಆಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ವ್ಯಾಲಿಡೇಟರ್ ಆಗಿ ಜಿ.ಪಂ.ಉಪ ಕಾರ್ಯದರ್ಶಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಸಮಿತಿ ಸದಸ್ಯ ರಂಗಸ್ವಾಮಿ ಮಾತನಾಡಿ, ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಪದ್ಧತಿ ಇನ್ನೂ ಜೀವಂತವಾಗಿದೆ. ಈ ಸಂಬಂಧ ಪರಿಶೀಲಿಸಿ ಅರ್ಹರನ್ನು ಗುರುತಿಸುವಂತೆ ಕೋರಿದರು.
ಸದಸ್ಯರಾದ ಓಬಳಿ, ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಡಿವೈಎಸ್‌ಪಿ ರವಿ, ತಾ.ಪಂ.ಇಒ ಅಪ್ಪಣ್ಣ, ಪರಮೇಶ್ ಕುಮಾರ್, ಜಿ.ಪಂ.ಸಹಾಯಕ ನಿರ್ದೇಶಕರಾದ ಶ್ರೀನಿವಾಸ್, ಪೌರಾಯುಕ್ತ ಎಚ್.ಆರ್.ರಮೇಶ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಪಿ.ಕೆ.ನಾಚಪ್ಪ, ರೀತು ಸಿಂಗ್ ಇತರರು ಇದ್ದರು.