ಅವೈಜ್ಞಾನಿಕ ಕ್ಷೇತ್ರ ಮರು ವಿಂಗಡಣೆ: ಕಾಂಗ್ರೆಸ್‌ನಿಂದ ಪ್ರತಿಭಟನೆ

KannadaprabhaNewsNetwork |  
Published : Apr 22, 2026, 02:15 AM IST
ಕೇಂದ್ರ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ಖಂಡಿಸಿ  ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಳ್ಳಾರಿಯಲ್ಲಿ ಮಂಗಳವಾರ ಪ್ರತಿಭಟನೆ ಜರುಗಿತು.  | Kannada Prabha

ಸಾರಾಂಶ

ಕೇಂದ್ರ ಬಿಜೆಪಿ ಸರ್ಕಾರ ಅವೈಜ್ಞಾನಿಕ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಕೈಗೊಳ್ಳುವ ಮೂಲಕ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಎಸಗಲು ಮುಂದಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಬಳ್ಳಾರಿ: ಕೇಂದ್ರ ಬಿಜೆಪಿ ಸರ್ಕಾರ ಅವೈಜ್ಞಾನಿಕ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಕೈಗೊಳ್ಳುವ ಮೂಲಕ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಎಸಗಲು ಮುಂದಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಗುರಾಣಿಯಾಗಿ ಇಟ್ಟುಕೊಂಡು ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸಲು ಎಲ್ಲ ತಯಾರಿ ನಡೆಸಿತ್ತು. ಆದರೆ, ವಿರೋಧ ಪಕ್ಷಗಳು ಆ ಮಸೂದೆಯನ್ನು ಸೋಲಿಸಿವೆ. 2023ರಲ್ಲೇ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಬಂದಿದೆ. ಆದರೆ, ಅದನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿಲ್ಲ. ಈಗ ಆ ಮಸೂದೆಯನ್ನು ಮುಂದಿಟ್ಟು ಅವೈಜ್ಞಾನಿಕ ರೀತಿಯಲ್ಲಿ ಕ್ಷೇತ್ರ ಮರವಿಂಗಡನೆಗೆ ಹೊರಟಿದೆ ಎಂದು ಪ್ರತಿಭಟಕಾರಾರರು ಟೀಕಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ದೇಶಾದ್ಯಂತ ಕೈಗೊಳ್ಳಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಅತ್ಯಂತ ಅವೈಜ್ಞಾನಿಕ, ಅಸಂವಿಧಾನಿಕ ಹಾಗೂ ಅಸಮತೋಲನದಿಂದ ಕೂಡಿದೆ. ವಿರೋಧ ಪಕ್ಷಗಳ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ದಕ್ಷಿಣ ಭಾರತದ ರಾಜ್ಯಗಳಿಗೆ ಮತ್ತು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುವ ಈ ಏಕಪಕ್ಷೀಯ ಹಾಗೂ ಸರ್ವಾಧಿಕಾರಿ ಧೋರಣೆ ತೀವ್ರವಾಗಿ ಖಂಡನೀಯ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ದೂರಿದರು.

ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮಹಿಳಾ ಮೀಸಲಾತಿ ನೆಪದಲ್ಲಿ ಅವೈಜ್ಞಾನಿಕ ಕ್ಷೇತ್ರ ಮರು ವಿಂಗಡಣೆಗೆ ಮುಂದಾಗಿತು. ಕೇಂದ್ರದ ಈ ನಿಲುವನ್ನು ಪ್ರತಿಪಕ್ಷ ಕಾಂಗ್ರೆಸ್ ವಿರೋಧಿಸಿದೆ. ಆದರೆ, ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಎಂಬಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಬಿಂಬಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ಎಂದೂ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸಿಲ್ಲ. ಮಹಿಳಾ ಪರವಾದ ಅನೇಕ ಕಾನೂನುಗಳನ್ನು ಜಾರಿಗೊಳಿಸಿರುವ ಕಾಂಗ್ರೆಸ್‌ಗೆ ಮಹಿಳಾ ಪರ ನಿಲುವಿನ ಮೇಲೆ ಯಾವ ಅನುಮಾನ ಪಡಬೇಕಾಗಿಲ್ಲ ಎಂದು ಹೇಳಿದರು.

ಪಕ್ಷದ ಜಿಲ್ಲಾ ಹಾಗೂ ತಾಲೂಕು ಸಮಿತಿ ಸದಸ್ಯರು ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ವ ಜನಾಂಗದ ಏಳ್ಗೆಗೆ ಶ್ರಮಿಸುವ ರಾಜ್ಯ ಸರ್ಕಾರ
ಅಶಿಸ್ತು ಮುಂದುವರೆಸಿದರೆ ಸೂಕ್ತ ಕ್ರಮ