ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗ್ರಾಮಸ್ಥರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿ, ಟಿ.ನರಸೀಪುರ ಭಂತೆ ಬೋದಿರತ್ನ ದಿವ್ಯ ಸಾನಿಧ್ಯದಲ್ಲಿ ಉರಿಲಿಂಗಿಪೆದ್ದಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಲಿದ್ದಾರೆ ಎಂದರು.
ನಂತರ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ನಂಜುಂಡಸ್ವಾಮಿ ಉದ್ಘಾಟಿಸುವರು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಅಕ್ಕ ಆಕಾಡೆಮಿ ಮುಖ್ಯಸ್ಥ ಡಾ.ಶಿವಕುಮಾರ್, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸ, ಬೆಂಗಳೂರು ಕೃಷಿಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಕೆ.ಸಿ.ದೊರೆಸ್ವಾಮಿ, ಭಾರತೀಯ ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷ ದರ್ಶನ್ ಸೋಮಶೇಖರ್, ಚಲನಚಿತ್ರ ನಟ ಸಂದೇಶ್, ಆರಕ್ಷಕ ವೃತ್ತ ನಿರೀಕ್ಷಕ ಬಿ.ಎಸ್ ಶ್ರೀಧರ್, ಬೆಳಕವಾಡಿ ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ವಿ.ಸಿ.ಆಶೋಕ್, ಗ್ರಾಪಂ ಅಧ್ಯಕ್ಷೆ ಮಹಾಲಕ್ಷ್ಮಿ ಗುರುಮೂರ್ತಿ, ಸದಸ್ಯ ರಾಜೇಂದ್ರ ಪ್ರಸಾದ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಕಾರ್ಯಕ್ರಮಕ್ಕೂ ಮುನ್ನಾ ಬೆಳಗ್ಗೆ 9 ಗಂಟೆಗೆ ಬೆಳಕವಾಡಿ ಸರ್ಕಲ್‌ನಿಂದ ಗ್ರಾಮದವರೆಗೆ ಜಾನಪದ ಕಲಾ ಮೇಳದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ನಡೆಯಲಿದೆ ಎಂದರು.
ಜು.೧೦ರಂದು ಜಿ.ಮಾದೇಗೌಡ ಪ್ರಶಸ್ತಿ ಪ್ರದಾನ
ಕೆ.ಎಚ್.ಪಾಟೀಲ್ ಪ್ರತಿಷ್ಠಾನದ ಅಧ್ಯಕ್ಷ ಡಿ.ಆರ್.ಪಾಟೀಲ್ ಅವರಿಗೆ ಸಮಾಜ ಸೇವಾ ಪ್ರಶಸ್ತಿ ಹಾಗೂ ಮಳವಳ್ಳಿ ತಾಲೂಕು ಮಲ್ಲಿಗಹಳ್ಳಿಯ ಸಾವಯವ ಕೃಷಿಕ ಶ್ರೀಪಾದ ಪಿ.ಆಚಾರ್ಯ ಅವರಿಗೆ ಸಾವಯವ ಕೃಷಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಹಾಗೂ ಪ್ರತಿಷ್ಠಾನದ ಅಧ್ಯಕ್ಷರು, ಪದಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸುವರು ಎಂದರು.ಪ್ರತಿಷ್ಠಾನದ ನಾಗೇಶ, ಮಹದೇವಸ್ವಾಮಿ, ಕೃಷ್ಣ, ರಾಮಕೃಷ್ಣ ಅವರು ಗೋಷ್ಠಿಯಲ್ಲಿದ್ದರು.