ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆಯ ಮಾಹಿತಿ ಪತ್ರ ಅನಾವರಣ

KannadaprabhaNewsNetwork |  
Published : Aug 24, 2026, 03:00 AM IST
ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆಯ ಮಾಹಿತಿ ಪತ್ರ ಅನಾವರಣ ಮಾಡಲಾಯಿತು | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ದೇವಳದ ಸಹಯೋಗದೊಂದಿಗೆ ಕಲ್ಕೂರ ಪ್ರತಿಷ್ಠಾನ ಹಮ್ಮಿಕೊಂಡಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆಯ ವಿವರಗಳನ್ನೊಳಗೊಂಡ ಮಾಹಿತಿ ಪತ್ರದ ಅನಾವರಣ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರುಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ದೇವಳದ ಸಹಯೋಗದೊಂದಿಗೆ ಕಲ್ಕೂರ ಪ್ರತಿಷ್ಠಾನ ಹಮ್ಮಿಕೊಂಡಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆಯ ವಿವರಗಳನ್ನೊಳಗೊಂಡ ಮಾಹಿತಿ ಪತ್ರದ ಅನಾವರಣ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು.

ಪುಟಾಣಿಗಳಾದ ಶಿವಾಮೃತ ಶ್ರೀಕಾಂತ ನೆಟ್ಟಣಿಗೆ ಮತ್ತು ಪ್ರಗ್ಯಾ ಅವರ ಉಪಸ್ಥಿತಿಯಲ್ಲಿ ನಿವೃತ್ತ ಅಪರ ಜಿಲ್ಲಾಧಿಕಾರಿ ಡಾ. ಪ್ರಭಾಕರ ಶರ್ಮ ಮಾಹಿತಿ ಪತ್ರ ಅನಾವರಣಗೊಳಿಸಿ ಸ್ಪರ್ಧೆ ಅರ್ಥಪೂರ್ಣವಾಗಿ ನೆರವೇರಲೆಂದು ಹಾರೈಸಿದರು.

ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಪ್ರಾಸ್ತಾವಿಕವಾಗಿ ಮಾತನಾಡಿ, ಹೆಚ್ಚು ಹೆಚ್ಚು ಮಕ್ಕಳನ್ನು ಈ ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ತೊಡಗಿಸುವಲ್ಲಿ ಹೆತ್ತವರು ಪ್ರೇರೇಪಿಸಬೇಕು. ಬೇಧ ಭಾವವಿಲ್ಲದೆ ಸರ್ವರೂ ಪಾಲ್ಗೊಳ್ಳಲಿರುವ ಈ ರಾಷ್ಟ್ರೀಯ ಮಕ್ಕಳ ಉತ್ಸವದ ಆಚರಣೆಗೆ ಅನುಕೂಲವಾಗುವಂತೆ ಉಭಯ ಜಿಲ್ಲೆಗಳ ಶಾಲಾ ಮಕ್ಕಳಿಗೆ ಆದ್ಯತೆಯ ನೆಲೆಯಲ್ಲಿ ಅಧಿಕೃತ ರಜೆ ಘೋಷಿಸುವಂತೆ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ, ಉರ್ವ ಸುರೇಂದ್ರ ರಾವ್, ಪಮ್ಮಿ ಕೊಡಿಯಾಲ್‌ಬೈಲ್, ಚಂದ್ರಶೇಖರ್ ಶೆಟ್ಟಿ, ಕದ್ರಿ ನವನೀತ ಶೆಟ್ಟಿ, ಶಿವಪ್ರಸಾದ್ ಪ್ರಭು, ಪ್ರಭಾಕರ ರಾವ್ ಪೇಜಾವರ, ಸಮೀರ್ ಪುರಾಣಿಕ್, ಶ್ರೀಕಾಂತ್ ನೆಟ್ಟಣಿಗೆ, ಡಾ.ಉದಯ ಕುಮಾರ್, ಗಣೇಶ್, ವಿನಯಾನಂದ, ತಮ್ಮ ಲಕ್ಷ್ಮಣ, ಸುಧಾಕರ ರಾವ್ ಪೇಜಾವರ, ತಾರಾನಾಥ ಹೊಳ್ಳ, ಅಶ್ವತ್ಥಾಮ ರಾವ್, ಪೂರ್ಣಿಮಾ ಪೇಜಾವರ, ವಿಜಯಲಕ್ಷ್ಮೀ ಬಿ. ಶೆಟ್ಟಿ, ಶಶಿಪ್ರಭಾ ಐತಾಳ್, ಜಯಲಕ್ಷ್ಮೀ ಟೀಚರ್, ಪೂರ್ಣಿಮಾ ಶಾಸ್ತ್ರಿ, ಸುಮನಾ ಘಾಟೆ, ಸುಕಲತಾ ಸುವರ್ಣ, ಶೋಭಾ ಐತಾಳ್ ಮತ್ತಿತರರು ಇದ್ದರು.

ದಯಾನಂದ ಕಟೀಲ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ರಿಯಲ್‌ ಎಸ್ಟೇಟ್‌ ಮುಖ್ಯಮಂತ್ರಿ
ಮನಸೆಳೆದ ತಹಸೀಲ್ದಾರ ಕಚೇರಿ ಸಿಬ್ಬಂದಿ ಹಸಿರು ಪ್ರೇಮ