ಸವಣೂರು:ಬೆಳಗಾವಿಯಲ್ಲಿ ನವೆಂಬರ್ 11ರಂದು ನಡೆಯಲಿರುವ ಪತ್ರಿಕಾ ವಿತರಕರ 6ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಪಟ್ಟಣದ ಪುರಸಭೆ ಸಭಾಭವನದಲ್ಲಿ ಸವಣೂರು ತಾಲೂಕು ಪತ್ರಿಕಾ ವಿತರಕರ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಭೆಯಲ್ಲಿ ಅನಾವರಣಗೊಳಿಸಲಾಯಿತು.
ಬೆಳಗಾವಿಯಲ್ಲಿ ನಡೆಯಲಿರುವ ಸಮ್ಮೇಳನವು ರಾಜ್ಯದ ವಿವಿಧ ಜಿಲ್ಲೆಗಳ ವಿತರಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವದ ಕಾರ್ಯಕ್ರಮವಾಗಿದೆ. ಇಂತಹ ಸಮ್ಮೇಳನಗಳು ವಿತರಕರ ಸಮಸ್ಯೆಗಳು, ಬೇಡಿಕೆಗಳು ಹಾಗೂ ಹಕ್ಕುಗಳ ಕುರಿತು ಚರ್ಚಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ. ಸಮ್ಮೇಳನದ ಯಶಸ್ವಿ ಆಯೋಜನೆಗೆ ಅಗತ್ಯವಿರುವ ಸಹಕಾರವನ್ನು ಪುರಸಭೆ ವತಿಯಿಂದ ನೀಡಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಶಂಕ್ರಯ್ಯ ಹಿರೇಮಠ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪತ್ರಿಕಾ ವಿತರಕರು ಎದುರಿಸುತ್ತಿರುವ ಸಮಸ್ಯೆಗಳು, ವೃತ್ತಿಪರ ಸವಾಲುಗಳು ಹಾಗೂ ಸಂಘಟನೆಯ ಅಗತ್ಯತೆಯ ಕುರಿತು ಮಾತನಾಡಿದರು. ಪತ್ರಿಕಾ ವಿತರಕರ ಹಿತಾಸಕ್ತಿ ಕಾಪಾಡುವುದು, ಸರ್ಕಾರದ ಸೌಲಭ್ಯಗಳನ್ನು ದೊರಕಿಸಿಕೊಡುವುದು ಮತ್ತು ಸಂಘಟನೆಯನ್ನು ತಾಲೂಕು ಮಟ್ಟದಲ್ಲಿ ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಸಂಘ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಬೆಳಗಾವಿ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿತರಕರು ಭಾಗವಹಿಸಿ ಸಂಘಟನೆಯ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಯೋಗೇಂದ್ರ ಜಂಬಗಿ ಮಾತನಾಡಿ
ಸಭೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ 6ನೇ ರಾಜ್ಯ ಸಮ್ಮೇಳನದ ಸಿದ್ಧತೆಗಳು, ವಿತರಕರ ಭಾಗವಹಿಸುವಿಕೆ ಹಾಗೂ ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಲಾಂಛನ ಬಿಡುಗಡೆ ಕಾರ್ಯಕ್ರಮದ ಮೂಲಕ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು.