ಪ್ರತಿಭಾ ಕಾರಂಜಿಯಿಂದ ಮಕ್ಕಳ ಪ್ರತಿಭೆ ಅನಾವರಣ

KannadaprabhaNewsNetwork |  
Published : Nov 22, 2024, 01:20 AM IST
ಪೊಟೋ: 21ಎಸ್‌ಎಂಜಿಕೆಪಿ03ಶಿವಮೊಗ್ಗದ ಇಲ್ಲಿನ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಎಸ್. ಎನ್. ಚನ್ನಬಸಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿವಮೊಗ್ಗದ ಇಲ್ಲಿನ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಎಸ್. ಎನ್. ಚನ್ನಬಸಪ್ಪ ಉದ್ಘಾಟಿಸಿದರು

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು ಹಾಗೂ ಮಕ್ಕಳಲ್ಲಿನ ವಿಭಿನ್ನ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಎಸ್. ಎನ್. ಚನ್ನಬಸಪ್ಪ ಹೇಳಿದರು.

ಇಲ್ಲಿನ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಸಹಯೋಗದಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಒಂದು ಅತ್ಯುತ್ತಮ ಕಾರ್ಯಕ್ರಮ. ಇಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಎಲ್ಲ ಮಕ್ಕಳು ಗೆಲ್ಲಲು ಸಾಧ್ಯವಿಲ್ಲ. ಆದರೆ, ಭಾಗವಹಿಸುವ ಅವಕಾಶವಿದ್ದು, ಸ್ಪರ್ಧಾತ್ಮಕವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರಣ್ ಮಾತನಾಡಿ, ಭಾರತ ವೈವಿಧ್ಯಮಯ, ಸಾಂಸ್ಕೃತಿಕ ದೇಶ. ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಯುವ ಪೀಳಿಗೆಯು ಮಾಡಬೇಕು. ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಜೊತೆ ಕರ್ತವ್ಯಗಳಿದ್ದು, ಅವುಗಳನ್ನು ಅರಿತು ಮುಂದೆ ಸಾಗಬೇಕು. ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದರು.

ಮಕ್ಕಳಲ್ಲಿ ಸಾರ್ವಜನಿಕ ಶಿಷ್ಟಾಚಾರ ಮತ್ತು ಸಂಸ್ಕಾರ ಕಲಿಸುವುದು ನಮ್ಮ ಕರ್ತವ್ಯ. ಪ್ರತಿಭಾ ಕಾರಂಜಿ ಮೂಲಕ ಈ ಕೆಲಸ ಆಗುತ್ತಿದೆ ಎನ್ನಬಹುದು. ಎಲ್ಲ ಮಕ್ಕಳು ಇಂತಹ ವೇದಿಕೆ ಸದುಪಯೋಗ ಪಡೆದು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಹೆಸರು ಮಾಡಬೇಕು ಎಂದು ಆಶಿಸಿದರು.

ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆಯಲ್ಲಿ ಹಿಂದೆ ಪಠ್ಯೇತರ ಚಟುವಟಿಕೆಗಳು ಹೆಚ್ಚಿದ್ದವು, ಆದರೆ ಈಗ ಕಡಿಮೆಯಾಗುತ್ತಿದ್ದು, ಓದಿನ ಬಗ್ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಮಕ್ಕಳಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಹಾಗೂ ಸ್ಪರ್ಧಾತ್ಮಕತೆಯನ್ನು ಕಲಿಸಬೇಕಿದೆ. ಸರ್ಕಾರ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶಿಕ್ಷಣದ ಜೊತೆಗೆ ಉಚಿತ ಊಟ, ಪುಸ್ತಕ, ಮೊಟ್ಟೆ ಇತರೆ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.

ಡಿಡಿಪಿಐ ಎಸ್. ಆರ್.ಮಂಜುನಾಥ್ ಮಾತನಾಡಿ, ಸರ್ಕಾರ ಮಕ್ಕಳಲ್ಲಿನ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿಯಂತಹ ಉತ್ತಮ ವೇದಿಕೆ ಕಲ್ಪಿಸಿದೆ. ವಿದ್ಯಾರ್ಥಿಗಳು ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸಬೇಕು. ಬಹುಮಾನಕ್ಕಿಂತ ಭಾಗವಹಿಸುವುದು ಮುಖ್ಯ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಕರಾಪ್ರಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಂ.ದಿನೇಶ್ , ಕಸ್ತೂರಬಾ ಪ್ರೌಢಶಾಲೆಯ ಪ್ರಾಂಶುಪಾಲರಾದ ವೆಂಕಟೇಶ್ ಮಾತನಾಡಿದರು. ಬಿಇಒ ರಮೇಶ್ ಸ್ವಾಗತಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಮ್ಮನ್ನು ನಾವು ಅರಿತುಕೊಳ್ಳುವುದೇ ಆಂತರಿಕ ನಡುಗೆ
ಹೆತ್ತವರನ್ನು ಕಡೆಗಣಿಸುವುದು ಅಮಾನವೀಯತೆ