- ಅಂಬೇಡ್ಕರ್ ಜಯಂತಿಯಲ್ಲಿ ದಸಂಸ ಮುಖಂಡ ಡಾ. ಎನ್.ಮೂರ್ತಿ - - - ದಾವಣಗೆರೆ: ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಉನ್ನತ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಗಮನಹರಿಸಬೇಕು. ಆ ಮೂಲಕ ದಲಿತ ಕುಟುಂಬ, ಬಡ ಕುಟುಂಬಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು, ಉನ್ನತ ಹುದ್ದೆಗಳಿಗೆ ಏರಲು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಡಾ. ಎನ್.ಮೂರ್ತಿ ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ಇಂದು ಸಮಾನತೆ ಮನೆ ಮಾಡಿದೆ. ಶ್ರೀಮಂತರ ಮಕ್ಕಳು ಲಕ್ಷ ಲಕ್ಷ ರು. ಶುಲ್ಕ ಕಟ್ಟಿ, ಆಂಗ್ಲ ಶಿಕ್ಷಣ ಪಡೆಯುತ್ತಿದ್ದಾರೆ. ಬಡವರ ಮಕ್ಕಳು ಸೌಲಭ್ಯಗಳಿಲ್ಲದ ಸರ್ಕಾರಿ ಶಾಲೆಗಳಲ್ಲಿ ಓದುವ ಸ್ಥಿತಿ ಇದೆ ಎಂದು ವಿಷಾದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್, ದಾವಣಗೆರೆ ವಿವಿ ಕುಲಪತಿ ಪ್ರೊ. ಬಿ.ಡಿ.ಕುಂಬಾರ, ದಸಂಸ ಜಿಲ್ಲಾಧ್ಯಕ್ಷ ಎಚ್.ಮಂಜುನಾಥ, ರಾಜನಹಳ್ಳಿ ಸೀತಮ್ಮ ಕಾಲೇಜು ಪ್ರಿನ್ಸಿಪಾಲ್ ಟಿ.ಎ.ಕುಸಗಟ್ಟಿ, ಅಲಿ ರೆಹಮತ್ ಪೈಲ್ವಾನ್ ಇತರರು ಇದ್ದರು.- - - (** ಈ ಫೋಟೋ ಕ್ಯಾಪ್ಷನ್ ಪ್ಯಾನೆಲ್‌ಗೆ ಬಳಸಬಹುದು)...
-16ಕೆಡಿವಿಜಿ39ಃ:ದಾವಣಗೆರೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಡಾ. ಎನ್.ಮೂರ್ತಿ ಉದ್ಘಾಟಿಸಿದರು. ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ್, ದಾವಣಗೆರೆ ವಿವಿ ಕುಲಪತಿ ಪ್ರೊ. ಬಿ.ಡಿ.ಕುಂಬಾರ ಇತರರು ಇದ್ದರು.