ಬೃಹತ್ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿ

KannadaprabhaNewsNetwork |  
Published : Jul 29, 2026, 03:00 AM IST
ಬೆಳಗಾವಿ  | Kannada Prabha

ಸಾರಾಂಶ

ಬೆಳಗಾವಿ ಮಹಾನಗರ ಪಾಲಿಕೆಯನ್ನು ಬೃಹತ್ ಬೆಳಗಾವಿ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಬೇಕು ಹಾಗೂ ಪಾಲಿಕೆ ಮುಂಭಾಗದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಮಹಾನಗರ ಪಾಲಿಕೆಯನ್ನು ಬೃಹತ್ ಬೆಳಗಾವಿ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಬೇಕು ಹಾಗೂ ಪಾಲಿಕೆ ಮುಂಭಾಗದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು.

ಇಲ್ಲಿನ ಸರ್ಕಿಟ್‌ ಹೌಸ್‌ನಲ್ಲಿ ಮಂಗಳವಾರ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಸಚಿವ ಡಾ.ಯತೀಂದ್ರ ಅವರಿಗೆ ಮನವಿ ಸಲ್ಲಿಸಿದ ಪದಾಧಿಕಾರಿಗಳು, ರಾಜ್ಯದ ಎರಡನೇ ರಾಜಧಾನಿಯಾಗಿರುವ ಬೆಳಗಾವಿ ನಗರವು ನಾಲ್ಕೂ ದಿಕ್ಕುಗಳಲ್ಲಿ ವೇಗವಾಗಿ ವಿಸ್ತರಿಸುತ್ತಿದೆ. ಸುಮಾರು 15 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಬೆಳಗಾವಿಯನ್ನು ಮೆಟ್ರೋಪಾಲಿಟನ್ ನಗರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಬೆಳಗಾವಿ ಮಹಾನಗರ ಪಾಲಿಕೆಯಾಗಿ ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ನಗರಕ್ಕೆ ಹೊಂದಿಕೊಂಡಿರುವ ಸುಮಾರು 40 ಗ್ರಾಮಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸುವ ಪ್ರಸ್ತಾವ ಇನ್ನೂ ಜಾರಿಯಾಗಿಲ್ಲ. ಈ ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿದರೆ ನಗರ ಹಾಗೂ ಗ್ರಾಮೀಣ ಭಾಗಗಳ ಸಮಗ್ರ ಅಭಿವೃದ್ಧಿಗೆ ವೇಗ ಸಿಗಲಿದ್ದು, ಸಾರ್ವಜನಿಕ ಮೂಲಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಒದಗಿಸಲು ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆಯೂ ಗಮನ ಸೆಳೆದಿರುವ ಕರವೇ, ರಕ್ಕಸಕೊಪ್ಪ ಹಾಗೂ ಹಿಡಕಲ್ ಜಲಾಶಯಗಳಿಂದ ನೀರು ಪೂರೈಕೆಯಾಗುತ್ತಿದ್ದರೂ ಹೆಚ್ಚುತ್ತಿರುವ ಜನಸಂಖ್ಯೆಗೆ ಅದು ಸಾಕಾಗುತ್ತಿಲ್ಲ. ವಾರಕ್ಕೊಮ್ಮೆ ಹಾಗೂ ಕೆಲ ಪ್ರದೇಶಗಳಲ್ಲಿ ಹದಿನೈದು ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದಿಂದ ಮತ್ತೊಂದು ಪೈಪ್‌ಲೈನ್ ಅಳವಡಿಸಿ, ಎರಡು ಹೊಸ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಹಲವು ವರ್ಷಗಳಿಂದ ನಡೆಯುತ್ತಿರುವ 24×7 ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಕರವೇ ರಾಜ್ಯ ಸಂಚಾಲಕ ಸುರೇಶ ಗವನ್ನವರ, ಜಿಲ್ಲಾ ಉಪಾಧ್ಯಕ್ಷ ಗಣೇಶ ರೋಕಡೆ ಹಾಗೂ ಜಿಲ್ಲಾ ಸಂಚಾಲಕ ಹೊಳೆಪ್ಪ ಸುಲದಾಳ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಬಳ್ಳಾಪುರದಲ್ಲಿ ಐತಿಹಾಸಿಕ ರಕ್ತದಾನ ಶಿಬಿರ
ಹಿಪ್ಪರಗಿ ಕಾರು ಸ್ಫೋಟ ಪ್ರಕರಣ: ಐಜಿಪಿ ಭೇಟಿ