ವಕ್ಕಲೇರಿ- ಮೈಲಾಂಡಹಳ್ಳಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ

KannadaprabhaNewsNetwork |  
Published : Aug 22, 2024, 12:54 AM IST
೨೧ಕೆಎಲ್‌ಆರ್-೬ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಿ ಮೈಲಾಂಡಹಳ್ಳಿ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಕೋಲಾರತಾಲೂಕಿನ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿ ಮೈಲಾಂಡಹಳ್ಳಿ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಿಗೆ ಮನವಿ ಸಲ್ಲಿಸಿದರು.

ಕೋಲಾರ, ಶಾಸಕ ಕೊತ್ತೂರು ಮಂಜುನಾಥ್,

ಕನ್ನಡಪ್ರಭ ವಾರ್ತೆ ಕೋಲಾರ

ತಾಲೂಕಿನ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿ ಮೈಲಾಂಡಹಳ್ಳಿ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಿಗೆ ಮನವಿ ಸಲ್ಲಿಸಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಸಚಿವರು ಆಗಮಿಸಿದ ಸಂದರ್ಭದಲ್ಲಿ ಮನವಿ ಮಾಡಿದ ಅವರು, ವಕ್ಕಲೇರಿ ಹೋಬಳಿ ಕೇಂದ್ರವಾಗಿದ್ದು, ಸುಮಾರು ೪೦ ಗ್ರಾಮಗಳಿಗೆ ಮುಖ್ಯ ಸಂಪರ್ಕ ಕೊಂಡಿಯಾಗಿದೆ. ಸದರಿ ಗ್ರಾಮದಲ್ಲಿ ವಿದ್ಯುತ್ ಸಬ್ ಸ್ಟೇಷನ್, ನಾಡಕಚೇರಿ, ಬ್ಯಾಂಕ್ ಹಾಗೂ ೧೦ ಕ್ಕಿಂತಲೂ ಹೆಚ್ಚು ಶಾಲೆಗಳು ಸೇರಿದಂತೆ ಹಾಗೂ ನವೋದಯ ಕೇಂದ್ರೀಯ ಶಾಲೆ ಇದ್ದು, ಗ್ರಾಮವು ಸರಿಸುಮಾರು ೬ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ, ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಇದ್ದು, ತುರ್ತು ಚಿಕಿತ್ಸೆಗಾಗಿ ಕೋಲಾರಕ್ಕೆ ಹೋಗಬೇಕಾಗಿರುತ್ತದೆ, ಸಾರ್ವಜನಿಕ ಹಿತದೃಷ್ಟಿಯಿಂದ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿ ಕಟ್ಟಡವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.

ಮೈಲಾಂಡಹಳ್ಳಿ ಗ್ರಾಮವು ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತುಂಬಾ ದೂರವಿದೆ, ಗ್ರಾಮದಲ್ಲಿ ೧೨೦೦ ಜನಸಂಖ್ಯೆ ಇದ್ದು, ಅದರಲ್ಲಿ ಹಿರಿಯ ನಾಗರಿಕರಿಗೆ, ಗರ್ಭಿಣಿ ಸ್ತ್ರೀಯರಿಗೆ, ಅಂಗವಿಕಲರಿಗೆ ಹಾಗೂ ಮಕ್ಕಳಿಗೆ ಆರೋಗ್ಯದ ದೃಷ್ಟಿಯಿಂದ ಬಹಳ ಅನಾನುಕೂಲವಾಗುತ್ತಿದ್ದು, ಮೈಲಾಂಡಹಳ್ಳಿ ಗ್ರಾಮಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಾಣ ಮಾಡುವುದರಿಂದ ಸುತ್ತಮುತ್ತಲಿನ ಗ್ರಾಮಗಳಾದ ತಿರುಮಲಕೊಪ್ಪ, ಗಂಗಾಪುರ, ಲಕ್ಷ್ಮೀಪುರ, ಮಲ್ಲೇಶ್ವರನಗರ, ಕೂತಾಂಡಹಳ್ಳಿ ಮುಂತಾದ ಗ್ರಾಮಗಳ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

ಈಗಾಗಲೇ ೨ ಬಾರಿ ಮನವಿ ಸಲ್ಲಿಸಲಾಗಿದೆ, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಸಹ ಆರೋಗ್ಯ ಉಪಕೇಂದ್ರ ಮಂಜೂರು ಮಾಡಲು ಶಿಫಾರಸ್ಸು ಮಾಡಿದ್ದಾರೆ, ಕೂಡಲೇ ಮೈಲಾಂಡಹಳ್ಳಿ ಗ್ರಾಮಕ್ಕೆ ಆರೋಗ್ಯ ಉಪಕೇಂದ್ರವನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ. ಮೈಲಾಂಡಹಳ್ಳಿ ಮುರಳಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್ ಇದ್ದರು.--------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?
ಸಂಸ್ಕೃತಿಯ ಸಂರಕ್ಷಣೆ ಹೊಣೆ ಯುವಶಕ್ತಿ ಮೇಲಿದೆ: ಸಂಜೀವ ಚವ್ಹಾಣ